ETV Bharat / bharat

ಅಸ್ಸೋಂ ಸಿಎಂ ಪತ್ನಿ ಸುತ್ತ 10 ಕೋಟಿ ರೂಪಾಯಿ ಸಬ್ಸಿಡಿ ವಿವಾದ: ಕೇಂದ್ರ ಸರ್ಕಾರದ ಮಧ್ಯಪ್ರವೇಶಕ್ಕೆ ಕಾಂಗ್ರೆಸ್​ ಆಗ್ರಹ - ಕಾಂಗ್ರೆಸ್‌ ನಾಯಕ ಗೌರವ್‌ ಗೊಗೊಯ್‌

ಅಸ್ಸೋಂ ಸಿಎಂ ಹಿಮಂತ್​ ಬಿಸ್ವಾ ಶರ್ಮಾ ಅವರ ಪತ್ನಿಯ ಸಂಸ್ಥೆಗೆ 10 ಕೋಟಿ ರೂಪಾಯಿ ಸಬ್ಸಿಡಿ ನೀಡಲಾಗಿದೆ ಎಂಬ ಆರೋಪ ಮಾಡಿರುವ ಕಾಂಗ್ರೆಸ್​, ಇದರಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಲು ಒತ್ತಾಯ ಮಾಡಿದೆ.

ಅಸ್ಸೋಂ ಸಿಎಂ ಪತ್ನಿಗೆ 10 ಕೋಟಿ ರೂಪಾಯಿ ಸಬ್ಸಿಡಿ ವಿವಾದ

author img

By ETV Bharat Karnataka Team

Published : Sep 18, 2023, 11:01 PM IST

ನವದೆಹಲಿ: ಅಸ್ಸೋಂ ಮುಖ್ಯಮಂತ್ರಿ ಹಿಮಂತ್​ ಬಿಸ್ವಾ ಶರ್ಮಾ ಅವರ ಪತ್ನಿ ರಿಂಕಿ ಭುಯಾನ್ ಅವರು ಕೇಂದ್ರ ಸರ್ಕಾರದ ಯೋಜನೆಯಡಿ 10 ಕೋಟಿ ರೂಪಾಯಿ ಸಬ್ಸಿಡಿ ಪಡೆದಿದ್ದಾರೆ ಎಂಬ ಆರೋಪ ಮಾಡಿರುವ ಕಾಂಗ್ರೆಸ್​, ಇದರಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂದು ಕೋರಿದೆ.

ಕಾಂಗ್ರೆಸ್‌ ಯುವ ನಾಯಕ ಗೌರವ್‌ ಗೊಗೊಯ್‌ ಅವರು ಅಸ್ಸೋಂ ಸಿಎಂ ಪತ್ನಿ ವಿರುದ್ಧ 10 ಕೋಟಿ ರೂಪಾಯಿ ಸಬ್ಸಿಡಿ ಆರೋಪ ಮಾಡಿದ್ದಾರೆ. ಈ ಬಗ್ಗೆ ಸಿಎಂ ಜೊತೆಗೆ ಎಕ್ಸ್​ನಲ್ಲಿ (ಹಿಂದಿನ ಟ್ವಿಟರ್​) ಬಹಿರಂಗವಾಗಿ ಕಿತ್ತಾಡಿದ್ದ ಅವರು, ಇದೀಗ ಪ್ರಕರಣದಲ್ಲಿ ಕೇಂದ್ರ ಸಚಿವ ಪಿಯೂಷ್‌ ಗೋಯಲ್‌ ಅವರು ಮಧ್ಯಪ್ರವೇಶ ಮಾಡಬೇಕು ಎಂದು ಸೋಮವಾರ ಮನವಿ ಮಾಡಿದರು.

ಕೇಂದ್ರ ಸಚಿವರಿಗೆ ಪತ್ರ ಬರೆದಿರುವ ಗೊಗೊಯ್, ಅಸ್ಸೋಂ ಸಿಎಂ ಪತ್ನಿ ಮುನ್ನಡೆಸುತ್ತಿರುವ ಸಂಸ್ಥೆಗೆ ಕೇಂದ್ರ ಸರ್ಕಾರದ ಯೋಜನೆಯಡಿ 10 ಕೋಟಿ ರೂಪಾಯಿ ಸಬ್ಸಿಡಿ ನೀಡಲಾಗಿದೆ. ಆಹಾರ ಸಂಸ್ಕರಣೆ ಉದ್ಯಮ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಫಲಾನುಭವಿಗಳ ಪಟ್ಟಿಯಲ್ಲಿ ಪ್ರೈಡ್ ಎಂಟರ್‌ಟೈನ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಹೆಸರಿದೆ. ಇದು ಹಿಮಂತ್​ ಶರ್ಮಾ ಅವರ ಪತ್ನಿಯದ್ದಾಗಿದೆ. ಈ ಬಗ್ಗೆ ನೀವು ಲೋಕಸಭೆಯಲ್ಲಿ ನೀಡಿದ ಉತ್ತರದಲ್ಲಿ ಈ ಅಂಶ ಅಡಕವಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಸರ್ಕಾರದಿಂದ ಪಡೆದಿರುವ ಸಬ್ಸಿಡಿಯನ್ನು ಸಂಸ್ಥೆಯ ಮಾಲೀಕರು ನಿರಾಕರಿಸಿದ್ದಾರೆ. ಆದ್ದರಿಂದ, ಸಾರ್ವಜನಿಕ ಹಿತಾಸಕ್ತಿಗಾಗಿ ನೀವು ಈ ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸಬೇಕು. ಆಗ ಈ ವಿಷಯದಲ್ಲಿ ನಿಜವಾದ ಸತ್ಯಗಳು ಬಹಿರಂಗವಾಗಲಿವೆ ಎಂದು ಗೊಗೊಯ್ ತಮ್ಮ ಪತ್ರದಲ್ಲಿ ಕೋರಿದ್ದಾರೆ. ಅದರ ಪ್ರತಿಯು ETV ಭಾರತ್‌ಗೆ ಲಭ್ಯವಾಗಿದೆ.

ಕೇಂದ್ರ ಸರ್ಕಾರದ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವಾಲಯ ಪ್ರಧಾನ ಮಂತ್ರಿ ಕಿಸಾನ್ ಸಂಪದಾ ಯೋಜನೆ (PMKSY) ಅಡಿಯಲ್ಲಿ ಅಸ್ಸೋಂ ಸಿಎಂ ಕುಟುಂಬ ಸದಸ್ಯರಿಗೆ 10 ಕೋಟಿ ರೂಪಾಯಿ ಸಬ್ಸಿಡಿ ನೀಡಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಇದನ್ನು ಸಿಎಂ ಶರ್ಮಾ ಅವರು ನಿರಾಕರಿಸಿದ್ದಾರೆ ಎಂದು ಗೊಗೊಯ್​ ಸಚಿವರ ಗಮನಕ್ಕೆ ತಂದಿದ್ದಾರೆ.

ಅಸ್ಸೋಂ ಸಿಎಂ ಸವಾಲು: ತಮ್ಮ ಪತ್ನಿ ರಿನಿಕಿ ಶರ್ಮಾ ಭುಯಾನ್ ಅವರಿಗೆ ಕೇಂದ್ರ ಸರ್ಕಾರದ ಯೋಜನೆಗಳಲ್ಲಿ 10 ಕೋಟಿ ರೂಪಾಯಿ ಸಬ್ಸಿಡಿ ಪಡೆದಿದ್ದಾರೆ ಎಂಬುದನ್ನು ಸಾಬೀತು ಮಾಡಿದರೆ ಸಾರ್ವಜನಿಕ ಜೀವನದಿಂದಲೇ ನಿವೃತ್ತಿ ಹೊಂದುವುದಾಗಿ ಅಸ್ಸೋಂ ಸಿಎಂ ಹಿಮಂತ್​ ಬಿಸ್ವಾ ಶರ್ಮಾ ಅವರು ಕಾಂಗ್ರೆಸ್​ ವಿರುದ್ಧ ಸವಾಲು ಹಾಕಿದ್ದಾರೆ.

ಕಾಂಗ್ರೆಸ್​ ಸಂಸದ ಗೌರವ್ ಗೊಗೊಯ್ ಎಕ್ಸ್​ನಲ್ಲಿ (ಹಿಂದಿನ ಟ್ವಿಟರ್) ಈ ಬಗ್ಗೆ ಆಪಾದಿಸಿದ್ದಕ್ಕೆ ಪ್ರತಿಕ್ರಿಯಿಸಿದ್ದ ಅವರು, ನನ್ನ ಕುಟುಂಬ ಸದಸ್ಯರು ಸರ್ಕಾರದಿಂದ ಯಾವುದೇ ರೀತಿಯ ಸಬ್ಸಿಡಿ ಪಡೆದುಕೊಂಡಿಲ್ಲ. ಕಾಂಗ್ರೆಸ್​ ಮಾಡಿರುವ ಆರೋಪವನ್ನು ಸಾಬೀತು ಮಾಡಬೇಕು. ಇಲ್ಲವಾದಲ್ಲಿ ಕಾನೂನಿನ ಮೊರೆ ಹೋಗಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ: 'ಆರೋಪ ಸಾಬೀತಾದರೆ ರಾಜಕೀಯದಿಂದ ನಿವೃತ್ತಿ': ಸಬ್ಸಿಡಿ ವಿವಾದಕ್ಕೆ ಅಸ್ಸೋಂ ಸಿಎಂ ಹಿಮಂತ್​ ಬಿಸ್ವಾ ಶರ್ಮಾ ಸವಾಲು

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.