ETV Bharat / bharat

"ಭಾರತಿ ಪ್ರವೀಣ್ ಪವಾರ್ ಹೇಳಿಕೆ ಜನರ ದಾರಿ ತಪ್ಪಿಸಿದೆ": ಹಕ್ಕುಚ್ಯುತಿ ಮಂಡನೆಗೆ ಕಾಂಗ್ರೆಸ್​ ನಿರ್ಧಾರ - Oxygen Shortage news

ಕೊರೊನಾ ಎರಡನೇ ಅಲೆಯ ಸಂದರ್ಭದಲ್ಲಿ ಜೀವ ಉಳಿಸುವ ಅನಿಲದ ಕೊರತೆಯಿಂದಾಗಿ ಜನರು ಪರದಾಡಿದ್ದಾರೆ. ಹಲವಾರು ಆಸ್ಪತ್ರೆಗಳಲ್ಲಿ ಅನೇಕ ರೋಗಿಗಳು ಸಾವನ್ನಪ್ಪಿದ್ದಾರೆ. ಆದರೆ, ರಾಜ್ಯಸಭೆಯಲ್ಲಿ ಆರೋಗ್ಯ ಸಚಿವರು ತಪ್ಪು ಹೇಳಿಕೆ ನೀಡಿ ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ ಎಂದು ಕೆ.ಸಿ ವೇಣುಗೋಪಾಲ್ ಹೇಳಿದರು.

Congress
ಕಾಂಗ್ರೆಸ್​
author img

By

Published : Jul 23, 2021, 6:31 AM IST

ನವದೆಹಲಿ: ಕೋವಿಡ್-19 ಉಲ್ಬಣಗೊಂಡ ಸಂದರ್ಭದಲ್ಲಿ ದೇಶದಲ್ಲಿ​ ಆಮ್ಲಜನಕದ ಕೊರತೆ ಉಂಟಾಗಿತ್ತು. ಆದರೆ, ಈ ಕೊರತೆಯಿಂದ ಯಾವುದೇ ಸಾವು ಸಂಭವಿಸಿಲ್ಲ ಎಂದು ಸಂಸತ್​ನಲ್ಲಿ ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವೆ ಡಾ. ಭಾರತಿ ಪ್ರವೀಣ್ ಪವಾರ್ ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಖಂಡಿಸಿರುವ ಕಾಂಗ್ರೆಸ್,​ ಕೆ ಸಿ ವೇಣುಗೋಪಾಲ್ ನೇತೃತ್ವದಲ್ಲಿ ಹಕ್ಕುಚ್ಯುತಿ ಮಂಡಿಸಲು ನಿರ್ಣಯಿಸಿದೆ.

ಕೊರೊನಾ ಎರಡನೇ ಅಲೆಯ ಸಂದರ್ಭದಲ್ಲಿ ಜೀವ ಉಳಿಸುವ ಅನಿಲದ ಕೊರತೆಯಿಂದಾಗಿ ಜನರು ಪರದಾಡಿದ್ದಾರೆ. ಹಲವಾರು ಆಸ್ಪತ್ರೆಗಳಲ್ಲಿ ಅನೇಕ ರೋಗಿಗಳು ಸಾವನ್ನಪ್ಪಿದ್ದಾರೆ. ಆದರೆ, ರಾಜ್ಯಸಭೆಯಲ್ಲಿ ಆರೋಗ್ಯ ಸಚಿವರು ತಪ್ಪು ಹೇಳಿಕೆ ನೀಡಿ ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ ಎಂದು ಕೆ.ಸಿ ವೇಣುಗೋಪಾಲ್ ಹೇಳಿದರು.

ಆಮ್ಲಜನಕದ ಕೊರತೆಯಿಂದ ದೇಶದಲ್ಲಿ ಎಷ್ಟು ಜನರು ಸಾವನ್ನಪ್ಪಿದ್ದಾರೆ ಎಂಬ ಪ್ರಶ್ನೆಯನ್ನು ಕೆ.ಸಿ ವೇಣುಗೋಪಾಲ್ ಕೇಳಿದಾಗ, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಈ ಬಗ್ಗೆ ಸರಿಯಾದ ಮಾಹಿತಿ ನೀಡಿಲ್ಲ. ಆಮ್ಲಜನಕ ಕೊರತೆಯಿಂದ ಸಾವು ಸಂಭವಿಸಿಲ್ಲ ಎಂದು ಸಂಸತ್​ನಲ್ಲಿ ಭಾರತಿ ಪ್ರವೀಣ್ ಪವಾರ್ ಹೇಳಿದ್ದರು.

"ಇದು ಸಂಪೂರ್ಣವಾಗಿ ಆಧಾರರಹಿತ ಮತ್ತು ಸತ್ಯಕ್ಕೆ ವಿರುದ್ಧವಾಗಿದೆ. ಏಕೆಂದರೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಪುರಾವೆಗಳಿವೆ. ಆಮ್ಲಜನಕದ ಕೊರತೆಯಿಂದಾಗಿ ಎಷ್ಟೋ ಜನರು ಸಾವನ್ನಪ್ಪಿದ್ದಾರೆ ಎಂಬುದನ್ನು ಕರ್ನಾಟಕ, ಗೋವಾ, ಹರಿಯಾಣ, ಆಂಧ್ರಪ್ರದೇಶ ಮುಖ್ಯಮಂತ್ರಿಗಳು ಉಲ್ಲೇಖಿಸಿದ್ದಾರೆ" ಎಂದು ಅವರು ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.