ನವದೆಹಲಿ : ಕಾಂಗ್ರೆಸ್ ಪಕ್ಷವು ತನ್ನ ಪಕ್ಷದೊಳಗೇನೆ ಸೃಷ್ಟಿಯಾಗಿರುವ ಭಿನ್ನಾಭಿಪ್ರಾಯಗಳಿಂದಾಗಿ ಭಾರೀ ಒತ್ತಡಕ್ಕೆ ಸಿಲುಕಿದೆ. ಜಾರ್ಖಂಡ್‌ನ ನಾಲ್ಕು ಕಾಂಗ್ರೆಸ್ ಶಾಸಕರನ್ನೊಳಗೊಂಡ ನಿಯೋಗ ರಾಷ್ಟ್ರ ರಾಜಧಾನಿ ದೆಹಲಿಯನ್ನು ತಲುಪಿ ತಮ್ಮ ಕುಂದುಕೊರತೆಗಳನ್ನು ವಿವರಿಸಿದೆ.
ಈಟಿವಿ ಭಾರತ ಪ್ರತಿನಿಧಿಯೊಂದಿಗೆ ಕಾಂಗ್ರೆಸ್ ಶಾಸಕ ಇರ್ಫಾನ್ ಅನ್ಸಾರಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಪಕ್ಷದ ಉನ್ನತ ನಾಯಕತ್ವಕ್ಕೆ ಸಂಬಂಧಿಸಿದಂತೆ ಕುಂದುಕೊರತೆ, ಪಕ್ಷದೊಳಗಿನ ಬಿಕ್ಕಟ್ಟು, ತಮ್ಮ ಸಮಸ್ಯೆಗಳನ್ನು ತಮ್ಮ ಉನ್ನತ ನಾಯಕರಿಗೆ ತಿಳಿಸಿರುವುದಾಗಿ ಹೇಳಿದ್ದಾರೆ.
ನಮ್ಮ ಸಹೋದ್ಯೋಗಿಗಳು ಪಕ್ಷದ ಮುಖಂಡರ ಮುಂದೆ ಪಕ್ಷಕ್ಕೆ ಸಂಬಂಧಿಸಿದಂತೆ ಸುಳ್ಳು ವರದಿ ನೀಡಿದ್ದಾರೆ. ನಾವು ಸತ್ಯಾಂಶವುಳ್ಳ ಸಂಪೂರ್ಣ ವರದಿಯನ್ನು ನೀಡಿದಾಗ ನಮ್ಮ ಉನ್ನತ ನಾಯಕರು ಆಘಾತಕ್ಕೊಳಗಾದರು. ಅಲ್ಲದೇ ನಮ್ಮ ಕಾರ್ಯವನ್ನು ಮೆಚ್ಚಿದ್ದಾರೆ ಎಂದು ತಿಳಿಸಿದರು. ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರೊಂದಿಗೆ ಒಂದು ಗಂಟೆ ಅವಧಿಯ ಸಭೆ ನಡೆಸಿ ತಮ್ಮ ಸಮಸ್ಯೆ ಹೇಳಿಕೊಂಡಿದ್ದೇವೆಂದು ಶಾಸಕ ಇರ್ಫಾನ್ ಅನ್ಸಾರಿ ತಿಳಿಸಿದರು.
ಇದನ್ನೂ ಓದಿ: ಭಯಬೇಡ ನಾವಿದ್ದೇವೆ!... ದೀಪಾವಳಿವರೆಗೂ 80 ಕೋಟಿ ಬಡವರಿಗೆ ಉಚಿತ ಆಹಾರ ಧಾನ್ಯ: ಸಂಪುಟ ಅಸ್ತು
ಇನ್ನು, ಪಕ್ಷ ಅಧಿಕಾರಕ್ಕೆ ಬಂದಾಗಿನಿಂದ ಖಾಲಿ ಇರುವ ಸ್ಥಾನಗಳಿಗೆ ಕಾಂಗ್ರೆಸ್ ಮುಖಂಡರನ್ನು ನೇಮಕ ಮಾಡುವಂತೆ ಒತ್ತಾಯಿಸಿದ್ದಾರೆ. ನಾವು ರಾಜ್ಯದಲ್ಲಿ ಜೆಎಂಎಂ ಮತ್ತು ಆರ್‌ಜೆಡಿಯೊಂದಿಗೆ ಮೈತ್ರಿ ಹಂಚಿಕೊಳ್ಳುತ್ತಿದ್ದೇವೆ. ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರೊಂದಿಗೆ ನಮಗೆ ಯಾವುದೇ ಸಮಸ್ಯೆ ಇಲ್ಲ. ಆದರೆ, ಖಾಲಿ ಸ್ಥಾನದಲ್ಲಿ ಕಾಂಗ್ರೆಸ್ ನಾಯಕರನ್ನು ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.