ETV Bharat / bharat

ಮುಂಬರುವ ಮಧ್ಯಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನ ಗೆಲ್ಲಲಿದೆ: ರಾಹುಲ್ ಗಾಂಧಿ ಭವಿಷ್ಯ

ಮಧ್ಯಪ್ರದೇಶದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನಗಳನ್ನು ಗೆಲ್ಲಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ವಿಶ್ವಾಸ ವ್ಯಕ್ತಪಡಿಸಿದರು.

Rahul Gandhi
ರಾಹುಲ್ ಗಾಂಧಿ
author img

By

Published : May 29, 2023, 9:11 PM IST

ನವದೆಹಲಿ: ಕರ್ನಾಟಕ ಚುನಾವಣೆಯ ಗೆಲುವಿನ ಉತ್ಸಾಹದಲ್ಲಿರುವ ಕಾಂಗ್ರೆಸ್ ಮಧ್ಯಪ್ರದೇಶದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನಗಳನ್ನು ತನ್ನದಾಗಿಸಿಕೊಳ್ಳಲಿದೆ ಎಂದು ನವದೆಹಲಿಯಲ್ಲಿ ಮಧ್ಯಪ್ರದೇಶ ನಾಯಕರೊಂದಿಗೆ ಚರ್ಚೆ ನಡೆಸಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭವಿಷ್ಯ ನುಡಿದರು.

ಸಭೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯಾಧ್ಯಕ್ಷ ಕಮಲ್ ನಾಥ್, ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಮತ್ತಿತರರು ಉಪಸ್ಥಿತರಿದ್ದರು. ಮಧ್ಯಪ್ರದೇಶದ ರಾಜ್ಯ ನಾಯಕರಿಗೆ ಪಕ್ಷದಲ್ಲಿರುವ ಬೇರೆ ಯಾವುದೇ ನಾಯಕರು ಹೇಳಿಕೆ ನೀಡುವಾಗ ಪಕ್ಷಕ್ಕೆ ಚ್ಯುತಿ ತರಬಾರದು ಎಂದು ರಾಹುಲ್​ ಗಾಂಧಿ ಸಲಹೆ ನೀಡಿದರು.

ಮಧ್ಯಪ್ರದೇಶದಲ್ಲಿ ಗೆಲುವಿನ ಓಟ ಮುಂದುವರಿಸಲಿದೆ ಕಾಂಗ್ರೆಸ್​- ರಾಹುಲ್​ ಗಾಂಧಿ: ಮಧ್ಯಪ್ರದೇಶದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನಗಳನ್ನು ಗೆಲ್ಲಲಿದೆ ಎಂದು ರಾಹುಲ್ ಗಾಂಧಿ ಸೋಮವಾರ ವಿಶ್ವಾಸ ವ್ಯಕ್ತಪಡಿಸಿದರು. ಎಐಸಿಸಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಚುನಾವಣಾ ಸಿದ್ಧತೆ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು. ಕರ್ನಾಟಕದಲ್ಲಿ ಗೆಲುವು ಸಾಧಿಸಿದ ನಂತರ ಮಧ್ಯಪ್ರದೇಶದಲ್ಲಿ ಪಕ್ಷವು ತನ್ನ ಗೆಲುವಿನ ಓಟವನ್ನು ಮುಂದುವರಿಸಲಿದೆ ಎಂದರು.

ಪಕ್ಷದೊಳಗಿನ ಒಗ್ಗಟ್ಟಿನ ಬಗ್ಗೆ ಒತ್ತಿ ರಾಹುಲ್​ ಗಾಂಧಿ: ರಾಹುಲ್​ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮಧ್ಯಪ್ರದೇಶದ ಪಕ್ಷದ ಉನ್ನತ ನಾಯಕರ ಸಭೆ ನಡೆಸಿದರು. ಅಲ್ಲಿ ಎಲ್ಲಾ ರಾಜ್ಯ ನಾಯಕರು ಪಕ್ಷದೊಳಗಿನ ಒಗ್ಗಟ್ಟಿನ ಬಗ್ಗೆ ಒತ್ತಿ ಹೇಳಿದರು. ಮಾಜಿ ಮುಖ್ಯಮಂತ್ರಿ ಮತ್ತು ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಮತ್ತು ಎಐಸಿಸಿ ಉಸ್ತುವಾರಿ ಪಿ.ಅಗರ್ವಾಲ್ ಸಭೆಯಲ್ಲಿ ಉಪಸ್ಥಿತರಿದ್ದರು.

"ನಾವು ಸುದೀರ್ಘ ಚರ್ಚೆ ನಡೆಸಿದ್ದೇವೆ. ಕರ್ನಾಟಕದಲ್ಲಿ ನಾವು 136 ಸ್ಥಾನ ಗಳಿಸಿದ್ದೇವೆ ಎಂಬುದು ನಮ್ಮ ಆಂತರಿಕ ಮೌಲ್ಯಮಾಪನವಾಗಿದೆ. ಮಧ್ಯಪ್ರದೇಶದಲ್ಲಿ ನಾವು 150 ಸ್ಥಾನಗಳನ್ನು ಗಳಿಸುತ್ತೇವೆ. ಕರ್ನಾಟಕದಲ್ಲಿ ನಾವು ಮಾಡಿದ್ದನ್ನು ನಾವು (ಮಧ್ಯಪ್ರದೇಶದಲ್ಲಿ) ಪುನರಾವರ್ತಿಸಲಿದ್ದೇವೆ" ಎಂದು ಅವರು ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು. "ಎಲ್ಲ ನಾಯಕರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ರಾಜ್ಯದಲ್ಲಿ ಪಕ್ಷವನ್ನು ಗೆಲ್ಲಲು ಸಹಾಯ ಮಾಡಬೇಕು'' ಎಂದು ಪಿ.ಅಗರ್ವಾಲ್ ಸಭೆಯ ವಿವರಗಳನ್ನು ಬಹಿರಂಗಪಡಿಸಿದರು.

ಚುನಾವಣೆಗೆ ಇನ್ನೂ ನಾಲ್ಕು ತಿಂಗಳು ಬಾಕಿ: ಕಮಲ್ ನಾಥ್ ಅವರು, "ನಾವೆಲ್ಲರೂ ಈ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷವು ಸ್ಪರ್ಧಿಸಬೇಕಾದ ತಂತ್ರ ಮತ್ತು ವಿಷಯಗಳ ಬಗ್ಗೆ ಚರ್ಚಿಸಿದ್ದೇವೆ. ನಾವು ಒಗ್ಗಟ್ಟಿನಿಂದ ಚುನಾವಣಾ ಕಣಕ್ಕೆ ಇಳಿಯುತ್ತೇವೆ. ಚುನಾವಣೆಗೆ ಇನ್ನೂ ನಾಲ್ಕು ತಿಂಗಳು ಮಾತ್ರ ಬಾಕಿಯಿದೆ'' ಎಂದ ಅವರು, ''ಇದು ಅತ್ಯಂತ ಮಹತ್ವದ ಸಭೆಯಾಗಿದ್ದು, ಎಲ್ಲ ಹಿರಿಯ ನಾಯಕರು ಪಾಲ್ಗೊಂಡಿದ್ದರು'' ಎಂದರು. ಕರ್ನಾಟಕದಲ್ಲಿ ನೀಡಿದಂತಹ ಗ್ಯಾರಂಟಿಗಳನ್ನು ನೀಡುತ್ತೀರಾ ಎಂದು ಕೇಳಿದಾಗ, ಕಮಲ್​ ನಾಥ್ ಅವರು, ಮಧ್ಯಪ್ರದೇಶದಲ್ಲಿ 'ನಾರಿ ಸಮ್ಮಾನ್ ಯೋಜನೆ ಪ್ರಾರಂಭಿಸಲಾಗಿದೆ. ಉಳಿದವುಗಳನ್ನು ಭವಿಷ್ಯದಲ್ಲಿ ಘೋಷಿಸಲಾಗುವುದು. ನಾವು ಒಂದೇ ಬಾರಿಗೆ ಎಲ್ಲಾ ಗುಂಡುಗಳನ್ನು ಹಾರಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಇದನ್ನೂ ಓದಿ: 2 ಸಾವಿರದ ನೋಟು ಚಲಾವಣೆಗೆ ತಂದು ಬ್ಯಾನ್​ ಮಾಡಿದ್ದು ಅಸಂಬದ್ಧ: ಚಿದಂಬರಂ ಟೀಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.