ನಾಗ್ಪುರ/ಮಹಾರಾಷ್ಟ್ರ: ನಾಗ್ಪುರದ ಆರ್ಎಸ್ಎಸ್ ಕೇಂದ್ರ ಕಚೇರಿ ಬಳಿ ಭಾನುವಾರ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಆರ್ಎಸ್ಎಸ್ ಪ್ರಧಾನ ಕಚೇರಿಯ ಬಳಿ ಹಣದುಬ್ಬರ ಮತ್ತು ನಿರುದ್ಯೋಗದ ವಿರುದ್ಧ ಕಾಂಗ್ರೆಸ್ ನಡೆಸುತ್ತಿದ್ದ ಬೈಕ್ ರ್ಯಾಲಿಯನ್ನು ನಿಲ್ಲಿಸಲು ಬಿಜೆಪಿ ಕಾರ್ಯಕರ್ತರು ಪ್ರಯತ್ನಿಸಿದ್ದಾರೆ. ಈ ವೇಳೆ ಗಲಾಟೆ ಆರಂಭವಾಗಿ ಪ್ರಕ್ಷುಬ್ಧ ವಾತಾವರಣ ಏರ್ಪಟ್ಟಿತು.
ಕಾಂಗ್ರೆಸ್ ಕಾರ್ಪೊರೇಟರ್ ಬಂಟಿ ಶೆಲ್ಕೆ ಬೈಕ್ ರ್ಯಾಲಿ ಆಯೋಜಿಸಿದ್ದರು. ಆರ್ಎಸ್ಎಸ್ ಪ್ರಧಾನ ಕಚೇರಿ ಮಾರ್ಗದ ಮೂಲಕ ಹೋಗಲು ಕಾಂಗ್ರೆಸ್ ಕಾರ್ಯಕರ್ತರು ಮುಂದಾದಾಗ ಬಿಜೆಪಿ ಕಾರ್ಯಕರ್ತರು ಅದನ್ನು ವಿರೋಧಿಸಿದರು.
ಇದು ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ನಂತರ ಪರಸ್ಪರರ ವಿರುದ್ಧ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು. ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.