ETV Bharat / bharat

ಬಂಗಾಳ ವಿಧಾನಸಭೆ ಚುನಾವಣೆ: ಕೊರೊನಾಗೆ ಕಾಂಗ್ರೆಸ್​ ಅಭ್ಯರ್ಥಿ ಬಲಿ

author img

By

Published : Apr 15, 2021, 11:53 AM IST

ಪಶ್ಚಿಮ ಬಂಗಾಳದ ಸಂಶರ್‌ಗಂಜ್‌ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್​ ಅಭ್ಯರ್ಥಿ ಕೋವಿಡ್​ಗೆ ಬಲಿಯಾಗಿದ್ದಾರೆ.

Rejaul Haque
ರೆಜೌಲ್ ಹಕ್

ಸಂಶರ್‌ಗಂಜ್‌: ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಕೊರೊನಾದಿಂದಾಗಿ ಕಾಂಗ್ರೆಸ್​ ಅಭ್ಯರ್ಥಿಯೊಬ್ಬರು ಮೃತಪಟ್ಟಿದ್ದಾರೆ.

ಮುರ್ಷಿದಾಬಾದ್ ಜಿಲ್ಲೆಯ ಸಂಶರ್‌ಗಂಜ್‌ ಕ್ಷೇತ್ರದಿಂದ ಸ್ಪರ್ಧಿಸಿದ್ದ ರೆಜೌಲ್ ಹಕ್ ಮೃತ​ ಅಭ್ಯರ್ಥಿ. ಮಂಗಳವಾರ ಕೋವಿಡ್​ ತಗುಲಿದ್ದ ಇವರನ್ನು ಕೋಲ್ಕತ್ತಾದ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ರೆಜೌಲ್ ಅವರ ಸಾವಿಗೆ ಪಶ್ಚಿಮ ಬಂಗಾಳ ಕಾಂಗ್ರೆಸ್​ ರಾಜ್ಯಾಧ್ಯಕ್ಷ ಅಧೀರ್ ರಂಜನ್ ಚೌಧರಿ ತೀವ್ರ ಸಂತಾಪ ಸೂಚಿಸಿದ್ದಾರೆ. ರಾಜ್ಯದಲ್ಲಿ 8 ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಈಗಾಗಲೇ ನಾಲ್ಕು ಹಂತಗಳ ಮತದಾನ ನಡೆಯಲಿದೆ. ಮೇ 2ರಂದು ಫಲಿತಾಂಶ ಹೊರಬೀಳಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.