ನವದೆಹಲಿ : ಜನವರಿ 22ರ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ನೀಡಿದ ಆಹ್ವಾನವನ್ನು ಪ್ರಮುಖ ಪ್ರತಿ ಪಕ್ಷ ಕಾಂಗ್ರೆಸ್ ತಿರಸ್ಕರಿಸಿದೆ. ಅಲ್ಲದೇ, ಈ ದೇವಾಲಯ ಉದ್ಘಾಟನೆ ಸಮಾರಂಭವನ್ನು ''ಬಿಜೆಪಿ - ಆರ್ಎಸ್ಎಸ್ನ ರಾಜಕೀಯ ಕಾರ್ಯಕ್ರಮ" ಎಂದು ಅದು ಟೀಕಿಸಿದೆ.
ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಕಾಂಗ್ರೆಸ್ ಅಧಿಕೃತ ಹೇಳಿಕೆಯೊಂದನ್ನ ಪೋಸ್ಟ್ ಮಾಡಿದೆ. ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಇತರ ನಾಯಕರು ಅಧಿಕೃತವಾಗಿ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದ ಆಹ್ವಾನವನ್ನು ತಿರಸ್ಕರಿಸಿದ್ದಾರೆ ಎಂದು ತಿಳಿಸಿದೆ.
-
Here is the statement of Shri @Jairam_Ramesh, General Secretary (Communications), Indian National Congress. pic.twitter.com/JcKIEk3afy
— Congress (@INCIndia) January 10, 2024 " class="align-text-top noRightClick twitterSection" data="
">Here is the statement of Shri @Jairam_Ramesh, General Secretary (Communications), Indian National Congress. pic.twitter.com/JcKIEk3afy
— Congress (@INCIndia) January 10, 2024Here is the statement of Shri @Jairam_Ramesh, General Secretary (Communications), Indian National Congress. pic.twitter.com/JcKIEk3afy
— Congress (@INCIndia) January 10, 2024
ಜನವರಿ 22, 2024 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನಾ ಸಮಾರಂಭ ನಡೆಯಲಿದೆ. ಇದಕ್ಕೆ ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಶ್ರೀ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ, ಶ್ರೀಮತಿ ಸೋನಿಯಾ ಗಾಂಧಿ ಮತ್ತು ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕ ಶ್ರೀ ಅಧೀರ್ ರಂಜನ್ ಚೌಧರಿ ಅವರಿಗೆ ರಾಮಮಂದಿರ ಟ್ರಸ್ಟ್ ಅಧಿಕೃತವಾದ ಆಹ್ವಾನವನ್ನು ನೀಡಿತ್ತು. ಈ ಆಹ್ವಾನವನ್ನು ಕಾಂಗ್ರೆಸ್ ನಾಯಕರು ಸ್ವೀಕಾರ ಕೂಡಾ ಮಾಡಿದ್ದರು. ನಮ್ಮ ದೇಶದಲ್ಲಿ ಲಕ್ಷಾಂತರ ಜನರು ರಾಮನನ್ನು ಪೂಜಿಸುತ್ತಾರೆ. ಧರ್ಮವು ವೈಯಕ್ತಿಕ ವಿಷಯವಾಗಿದೆ. ಆದರೆ, RSS/BJP ಬಹಳ ಹಿಂದಿನಿಂದಲೂ ಅಯೋಧ್ಯೆಯಲ್ಲಿ ದೇವಾಲಯ ನಿರ್ಮಾಣ ವಿಚಾರವನ್ನು ರಾಜಕೀಯ ವಿಷಯವಾಗಿಸಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರು, ಇನ್ನು ಸಂಪೂರ್ಣವಾಗಿ ಕಟ್ಟಡ ಕಾಮಗಾರಿ ಮುಗಿಯದೇ, ಚುನಾವಣಾ ಲಾಭಕ್ಕಾಗಿ ತ್ವರಿತವಾಗಿ ಪ್ರಾಣ ಪ್ರತಿಷ್ಠಾಪನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಎಕ್ಸ್ ಪೋಸ್ಟ್ನಲ್ಲಿ ಆರೋಪಿಸಿದೆ.
ಇದನ್ನೂ ಓದಿ: ನಾಗರಶೈಲಿಯಲ್ಲಿ ಕಣ್ಮನ ಸೆಳೆಯುವ ಅಯೋಧ್ಯೆಯ ಭವ್ಯ ರಾಮಮಂದಿರ: ಅದರ ವೈಶಿಷ್ಟ್ಯಗಳಿವು ಇಲ್ಲಿವೆ
"2019ರ ಸುಪ್ರೀಂಕೋರ್ಟ್ ತೀರ್ಪಿಗೆ ಬದ್ಧವಾಗಿರುವಾಗ ಮತ್ತು ಭಗವಾನ್ ರಾಮನನ್ನು ಗೌರವಿಸುವ ಲಕ್ಷಾಂತರ ಜನರ ಭಾವನೆಗಳನ್ನು ಗೌರವಿಸುವ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಅಧೀರ್ ರಂಜನ್ ಚೌಧರಿ ಅವರು ಸ್ಪಷ್ಟವಾಗಿ ಆರೆಸ್ಸೆಸ್/ಬಿಜೆಪಿ ಆಯೋಜನೆಯಂತಿರುವ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ನೀಡಿರುವ ಆಹ್ವಾನವನ್ನು ಗೌರವಯುತವಾಗಿ ನಿರಾಕರಿಸಿದ್ದಾರೆ" ಎಂದು ಕಾಂಗ್ರೆಸ್ ಮಾಡಿರುವ ಟ್ವೀಟ್ನಲ್ಲಿ ಸ್ಪಷ್ಟನೆ ನೀಡಿದೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಅಧೀರ್ ರಂಜನ್ ಚೌಧರಿ ಮತ್ತು ಲಾಲು ಯಾದವ್, ಸೀತಾರಾಮ್ ಯೆಚೂರಿ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೇರಿದಂತೆ ಪ್ರಮುಖ ಪ್ರತಿಪಕ್ಷಗಳ ನಾಯಕರಿಗೆ ಸಮಾರಂಭದ ಆಹ್ವಾನ ನೀಡಲಾಗಿದೆ. ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಭವ್ಯ ರಾಮಮಂದಿರದಲ್ಲಿ ಜನವರಿ 22ರಂದು ಬಾಲರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ.
ಇದನ್ನೂ ಓದಿ: 'ಬಂಗಾರದ ರಾಮಮಂದಿರ': 42 ದ್ವಾರಗಳಿಗೆ ಚಿನ್ನಲೇಪನ, 100 ಕೆಜಿ ಬಂಗಾರ ಬಳಕೆ