ETV Bharat / bharat

ಸತತ ಸೋಲು ಗಂಭೀರವಾದ ವಿಚಾರ : ಜಿ-23 ಸಭೆಯಲ್ಲಿ ಕಾಂಗ್ರೆಸ್ ನಾಯಕರ ಅಭಿಪ್ರಾಯ​

author img

By

Published : Mar 12, 2022, 9:27 AM IST

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಮುಖಭಂಗವಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಅವರ ನಿವಾಸದಲ್ಲಿ ಜಿ-23 ಕಾಂಗ್ರೆಸ್ ನಾಯಕರ ಸಭೆ ನಡೆಸಲಾಯಿತು..

Congress G-23 leaders meet at Ghulam Nabi Azad's residence
ಸತತ ಸೋಲು ಗಂಭೀರವಾದ ವಿಚಾರ: ಜಿ-23 ಸಭೆಯಲ್ಲಿ ಕಾಂಗ್ರೆಸ್ ನಾಯಕರ ಅಭಿಪ್ರಾಯ​

ನವದೆಹಲಿ : ಇತ್ತೀಚೆಗೆ ನಡೆದ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರಾಭವಗೊಂಡಿದ್ದು, ಈ ಹಿನ್ನೆಲೆಯಲ್ಲಿ ಸೋಲಿನ ವಿಶ್ಲೇಷಣೆಗಾಗಿ ಗ್ರೂಪ್- 23ರ ಭಾಗವಾಗಿರುವ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಗುಲಾಂ ನಬಿ ಆಜಾದ್ ಅವರ ನಿವಾಸದಲ್ಲಿ ಸಭೆ ನಡೆಸಿದರು. ಈ ಸಭೆಯಲ್ಲಿ ಚುನಾವಣೆಗಳಲ್ಲಿ ಪಕ್ಷದ ಸತತ ಸೋಲಿನ ಬಗ್ಗೆ ಕಳವಳ ವ್ಯಕ್ತವಾಯಿತು.

ಮೂಲಗಳ ಪ್ರಕಾರ ಈ ಸಭೆಯಲ್ಲಿ ಭಾಗವಹಿಸಿದ್ದ ಕೆಲವು ನಾಯಕರು ಮುಂದಿನ ಕಾರ್ಯಕಾರಿ ಸಮಿತಿಯಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಕೆಲವು ಮುಖ್ಯಮಂತ್ರಿಗಳು, ಯುವ ಕಾಂಗ್ರೆಸ್ ಮುಖಂಡರು ಕೇವಲ ಗಾಂಧಿ ಕುಟುಂಬದ ಪರವಾಗಿರುವ ಕಾರಣದಿಂದ ತಾವು ಕಾರ್ಯಕಾರಿ ಸಮಿತಿಯಿಂದ ಹೊರಗೆ ಉಳಿಯುವುದಾಗಿ ಹೇಳಿದ್ದಾರೆ. ಯಾವುದೇ ಗಂಭೀರ ವಿಚಾರವನ್ನ ಸಭೆಯಲ್ಲಿ ಚರ್ಚಿಸಿಲ್ಲ ಎಂದು ತಿಳಿದು ಬಂದಿದೆ.

ಗ್ರೂಪ್ 23 ಸಮೂಹದ ಭಾಗವಾಗಿರುವ ಆನಂದ್ ಶರ್ಮಾ ಮಾತನಾಡಿ, ಸಭೆಯಲ್ಲಿ ಕೆಲವರು ಸಮರ್ಥವಾಗಿ ಮಾತನಾಡಿದರೆ, ಇನ್ನೂ ಕೆಲವರು ಸಮರ್ಥವಾಗಿ ಮಾತನಾಡುವವರನ್ನು ತಮ್ಮ ಹಿತಾಸಕ್ತಿಯ ರಕ್ಷಣೆಗಾಗಿ ಅವರನ್ನು ವಿರೋಧಿಸುತ್ತಾರೆ. ಇದರಿಂದಾಗಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರು ಮಾತ್ರವೇ ಈ ಸಭೆಯಲ್ಲಿ ಪಾಲ್ಗೊಳ್ಳಬೇಕು. ಮುಂದಿನ ಕೆಲವೇ ದಿನಗಳಲ್ಲಿ ಗ್ರೂಪ್-23 ನಾಯಕರ ಸಭೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸೋಮನಾಥ ಟ್ರಸ್ಟ್​ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನಿ, ಮೂಲಸೌಕರ್ಯಗಳ ಕುರಿತು ಚರ್ಚೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.