ETV Bharat / bharat

ಹಿಮಾಚಲದಲ್ಲಿ ಕಾಂಗ್ರೆಸ್​​​​​​ ಅಧಿಕಾರಕ್ಕೆ.. ಇಂದು ಶಾಸಕಾಂಗ ಪಕ್ಷದ ಸಭೆ, ಸಿಎಂ ಯಾರೆಂದು ನಿರ್ಧಾರ!

ಪ್ರತಿಭಾ ಸಿಂಗ್ ಸೇರಿದಂತೆ ವಿವಿಧ ಆಕಾಂಕ್ಷಿಗಳು ಸಿಎಂ ಪಟ್ಟದ ಮೇಲೆ ಕಣ್ಣಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಅಭ್ಯರ್ಥಿಯನ್ನು ಆಯ್ಕೆ ಮಾಡುವುದು ಕಾಂಗ್ರೆಸ್‌ಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ರಾಜ್ಯ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ಸುಖವಿಂದರ್ ಸಿಂಗ್ ಸುಖು ಮತ್ತು ಸಿಎಲ್‌ಪಿ ನಾಯಕ ಮುಖೇಶ್ ಅಗ್ನಿಹೋತ್ರಿ ಸಿಎಂ ರೇಸ್​ನಲ್ಲಿ ಮುಂಚೂಣಿಯಲ್ಲಿದ್ದಾರೆ.

Congress Himachal MLAs to meet today in Shimla to decide chief minister
ಹಿಮಾಚಲದಲ್ಲಿ ಕಾಂಗ್ರೆಸ್​​​​​​ ಅಧಿಕಾರಕ್ಕೆ.. ಇಂದು ಶಾಸಕಾಂಗ ಪಕ್ಷದ ಸಭೆ, ಸಿಎಂ ಯಾರೆಂದು ನಿರ್ಧಾರ!
author img

By

Published : Dec 9, 2022, 7:25 AM IST

ಶಿಮ್ಲಾ (ಹಿಮಾಚಲ ಪ್ರದೇಶ): ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಕಳೆದ ಬಾರಿಗಿಂತ ದುಪ್ಪಟ್ಟು ಸೀಟುಗಳನ್ನು ಗೆಲ್ಲುವಲ್ಲಿ ಕಾಂಗ್ರೆಸ್ ಈ ಬಾರಿ ಯಶಸ್ವಿಯಾಗಿದೆ. ಈ ನಡುವೆ ಕಾಂಗ್ರೆಸ್​ ಹೈಕಮಾಂಡ್​​​ ಮುಂದಿನ ಸಿಎಂ ಯಾರು ಎಂಬುದನ್ನು ನಿರ್ಧರಿಸಲಿದೆ. ಅದಕ್ಕೂ ಮೊದಲು ಕಾಂಗ್ರೆಸ್ ಶಾಸಕರು ಇಂದು ಶಿಮ್ಲಾದಲ್ಲಿ ಸಭೆ ನಡೆಸಲಿದ್ದಾರೆ.

ಇಂದು ಶಾಸಕಾಂಗ ಪಕ್ಷದ ಸಭೆ: ಹಿಮಾಚಲ ಪ್ರದೇಶದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಇಂದು ಮಧ್ಯಾಹ್ನ 3 ಗಂಟೆಗೆ ರಾಜ್ಯ ಕಾಂಗ್ರೆಸ್ ಪ್ರಧಾನ ಕಚೇರಿ ರಾಜೀವ್ ಭವನದಲ್ಲಿ ನಡೆಯಲಿದೆ. ಹಿಮಾಚಲ ಪ್ರದೇಶ ಕಾಂಗ್ರೆಸ್‌ನ ಉಸ್ತುವಾರಿ ರಾಜೀವ್ ಶುಕ್ಲಾ ಮತ್ತು ಮೇಲ್ವಿಚಾರಕರಾದ ಭೂಪೇಶ್ ಬಘೇಲ್ ಮತ್ತು ಭೂಪೇಂದ್ರ ಹೂಡಾ ಕೂಡ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಶಾಸಕರು ನಿರ್ಣಯ ಅಂಗೀಕರಿಸಲಿದ್ದಾರೆ ಮತ್ತು ಸಿಎಂ ಯಾರು ಎಂಬುದನ್ನ ಅಂತಿಮಗೊಳಿಸಲು ಪಕ್ಷದ ಹೈಕಮಾಂಡ್‌ಗೆ ಅಧಿಕಾರ ನೀಡುವ ಸಾಧ್ಯತೆಯಿದೆ. ಗುಡ್ಡಗಾಡು ರಾಜ್ಯದಲ್ಲಿ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಯಾರು ಎಂದು ಬಿಂಬಿಸಿರಲಿಲ್ಲ.

ಯಾರೆಲ್ಲ ಸಿಎಂ ರೇಸ್​ನಲ್ಲಿ: ಪ್ರತಿಭಾ ಸಿಂಗ್ ಸೇರಿದಂತೆ ವಿವಿಧ ಆಕಾಂಕ್ಷಿಗಳು ಸಿಎಂ ಪಟ್ಟದ ಮೇಲೆ ಕಣ್ಣಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಅಭ್ಯರ್ಥಿಯನ್ನು ಆಯ್ಕೆ ಮಾಡುವುದು ಕಾಂಗ್ರೆಸ್‌ಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ರಾಜ್ಯ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ಸುಖವಿಂದರ್ ಸಿಂಗ್ ಸುಖು ಮತ್ತು ಸಿಎಲ್‌ಪಿ ನಾಯಕ ಮುಖೇಶ್ ಅಗ್ನಿಹೋತ್ರಿ ಸಿಎಂ ರೇಸ್​ನಲ್ಲಿ ಮುಂಚೂಣಿಯಲ್ಲಿದ್ದಾರೆ.

ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಪಕ್ಷದ ಮುಖ್ಯಸ್ಥರು ನಿರ್ಧರಿಸುತ್ತಾರೆ ಎಂದು ಶುಕ್ಲಾ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. 68 ಸದಸ್ಯ ಬಲದ ಅಸೆಂಬ್ಲಿಯಲ್ಲಿ ಕಾಂಗ್ರೆಸ್ 40 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬಂದಿದೆ. ಬಿಜೆಪಿ 25 ಸ್ಥಾನಗಳನ್ನು ಮಾತ್ರ ಗೆಲ್ಲುವಲ್ಲಿ ಯಶಸ್ವಿಯಾಗಿದ್ದು, ಅಧಿಕಾರ ಕಳೆದುಕೊಂಡಿದೆ. AAP ರಾಜ್ಯದಲ್ಲಿ ತನ್ನ ಖಾತೆಯನ್ನು ತೆರೆಯಲು ವಿಫಲವಾಗಿದೆ.

ಹಿಮಾಚಲದಲ್ಲಿ ಕಾಂಗ್ರೆಸ್ ಶೇ 43.88 ಮತಗಳನ್ನು ಪಡೆದರೆ, ಬಿಜೆಪಿ 42.99 ಪ್ರತಿಶತದಷ್ಟು ಮತಗಳನ್ನು ಪಡೆದಿದೆ. ಇನ್ನು ಬಿಜೆಪಿ ಚುನಾವಣೆಯಲ್ಲಿ ಸೋಲು ಅನುಭವಿಸಿರುವ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇದನ್ನು ಓದಿ:ಪ್ರಿಯಾಂಕಾ ವಾದ್ರಾಗೆ ಮೇಲುಗೈ ತಂದುಕೊಟ್ಟ ಹಿಮಾಚಲ ಪ್ರದೇಶ ಗೆಲುವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.