ETV Bharat / bharat

ಪ್ರಧಾನಿ ಹುದ್ದೆಯ ಬಗ್ಗೆ ಕಾಂಗ್ರೆಸ್​ಗೆ ಆಸಕ್ತಿಯಿಲ್ಲ: ಖರ್ಗೆ - ಪ್ರತಿಪಕ್ಷಗಳ ಸಭೆಯಲ್ಲಿ ಖರ್ಗೆ

2024ರ ಲೋಕಸಭಾ ಚುನಾವಣೆಗಾಗಿ ಮೈತ್ರಿಕೂಟ ರಚಿಸಲು ಪ್ರತಿಪಕ್ಷಗಳ ಸಭೆ ಬೆಂಗಳೂರಿನಲ್ಲಿ ನಡೆಯುತ್ತಿದೆ. ಪ್ರಧಾನಿ ಹುದ್ದೆಯ ಬಗ್ಗೆ ಕಾಂಗ್ರೆಸ್ ಆಸಕ್ತಿ ಹೊಂದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಸಂದರ್ಭದಲ್ಲಿ ಹೇಳಿದ್ದಾರೆ.

Congress is not interested in PM post; Kharge
ಪ್ರಧಾನಿ ಹುದ್ದೆಯ ಬಗ್ಗೆ ಕಾಂಗ್ರೆಸ್​ಗೆ ಆಸಕ್ತಿಯಿಲ್ಲ; ಖರ್ಗೆ
author img

By

Published : Jul 18, 2023, 3:47 PM IST

ನವದೆಹಲಿ : ರಾಹುಲ್ ಗಾಂಧಿ ಅವರನ್ನೇ ಕಾಂಗ್ರೆಸ್ ತನ್ನ ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸಲಿದೆ ಎಂಬ ವದಂತಿಗಳಿಗೆ ತೆರೆ ಎಳೆದಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಹುದ್ದೆಯ ಬಗೆಗಾಗಲೀ ಅಥವಾ ಅಧಿಕಾರದ ಬಗೆಗಾಗಲೀ ಕಾಂಗ್ರೆಸ್​ಗೆ ಯಾವುದೇ ಆಸಕ್ತಿ ಇಲ್ಲ ಎಂದಿದ್ದಾರೆ.

“ಕಾಂಗ್ರೆಸ್‌ಗೆ ಅಧಿಕಾರ ಅಥವಾ ಪ್ರಧಾನಿ ಹುದ್ದೆಯ ಬಗ್ಗೆ ಆಸಕ್ತಿ ಇಲ್ಲ ಎಂದು ಎಂಕೆ ಸ್ಟಾಲಿನ್ ಅವರ ಜನ್ಮದಿನದಂದು ನಾನು ಈಗಾಗಲೇ ಚೆನ್ನೈನಲ್ಲಿ ಹೇಳಿದ್ದೆ. ಇಂದಿನ ಸಭೆಯಲ್ಲಿ ನಮ್ಮ ಉದ್ದೇಶ ನಮಗಾಗಿ ಅಧಿಕಾರ ಗಳಿಸುವುದಲ್ಲ. ಇದು ನಮ್ಮ ಸಂವಿಧಾನ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯವನ್ನು ರಕ್ಷಿಸಲು ನಡೆದಿರುವ ಸಭೆ" ಎಂದು ಪ್ರತಿಪಕ್ಷಗಳ ಸಭೆಯಲ್ಲಿ ಖರ್ಗೆ ಹೇಳಿಕೆಯ ಮೂಲಕ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಪ್ರತಿಪಕ್ಷಗಳ ಸಭೆಯನ್ನು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಲು ವೇದಿಕೆಯಾಗಿ ಬಳಸಿಕೊಂಡ ಅವರು, ಬಿಜೆಪಿಯವರು ಹಳೆಯ ಮಿತ್ರರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ರಾಜ್ಯದಿಂದ ರಾಜ್ಯಕ್ಕೆ ಓಡುತ್ತಿದ್ದಾರೆ ಎಂದರು. ನಾವು 26 ಪಕ್ಷಗಳು, 11 ರಾಜ್ಯಗಳಲ್ಲಿ ಸರ್ಕಾರ ಹೊಂದಿದ್ದೇವೆ. ಬಿಜೆಪಿ ತಾನು ಏಕೈಕವಾಗಿ 303 ಸ್ಥಾನಗಳನ್ನು ಪಡೆದಿಲ್ಲ. ಮಿತ್ರಪಕ್ಷಗಳ ಮತಗಳನ್ನು ಬಳಸಿ ನಂತರ ಅವುಗಳನ್ನು ತಿರಸ್ಕರಿಸಿದೆ" ಎಂದು ಅವರು ಸಭೆಯಲ್ಲಿ ಹೇಳಿದರು.

ಬೆಂಗಳೂರಿನಲ್ಲಿ ಜಮಾಯಿಸಿರುವ ಪ್ರತಿಪಕ್ಷಗಳ ಮುಖಂಡರು ಸೋಮವಾರ ಸಂಜೆ ಭೋಜನ ಸಭೆ ನಡೆಸಿ ಮಂಗಳವಾರ ನಡೆಯಬೇಕಿರುವ ಗುಪ್ತ ಮಾತುಕತೆಯ ಕಾರ್ಯಸೂಚಿಗೆ ಒಮ್ಮತಕ್ಕೆ ಬಂದರು. ಪ್ರತಿಪಕ್ಷಗಳ ಒಕ್ಕೂಟಕ್ಕೆ ಯುಪಿಎ ಅಧ್ಯಕ್ಷೆಯಾಗಿದ್ದ ಸೋನಿಯಾ ಗಾಂಧಿ ಅವರನ್ನು ಮುಂಚೂಣಿಯ ಅಧ್ಯಕ್ಷರನ್ನಾಗಿ ಮತ್ತು ನಿತೀಶ್ ಕುಮಾರ್ ಅವರನ್ನು ಸಂಚಾಲಕರನ್ನಾಗಿ ನೇಮಿಸುವ ಸಾಧ್ಯತೆ ಹೆಚ್ಚಿದೆ ಎಂದು ಮೂಲಗಳು ತಿಳಿಸಿವೆ.

ಸೋನಿಯಾ ಗಾಂಧಿ ಜೊತೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಮುಖ್ಯಮಂತ್ರಿಗಳಾದ ಎಂಕೆ ಸ್ಟಾಲಿನ್, ನಿತೀಶ್ ಕುಮಾರ್, ಅರವಿಂದ್ ಕೇಜ್ರಿವಾಲ್, ಹೇಮಂತ್ ಸೊರೆನ್, ಮಮತಾ ಬ್ಯಾನರ್ಜಿ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಎರಡು ದಿನಗಳ ಸಭೆಯಲ್ಲಿ ಭಾಗವಹಿಸಿದ್ದಾರೆ.

ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ‘ಭಾರತ’ ಎಂಬ ಪದವನ್ನು ಒಳಗೊಂಡಿರುವ ಹೆಸರನ್ನು ಸೂಚಿಸಲು ಎಲ್ಲ ಪಕ್ಷಗಳನ್ನು ಕೇಳಲಾಗಿದೆ ಎಂದು ಮೂಲಗಳು ತಿಳಿಸಿವೆ. "ಯುನೈಟೆಡ್ ವಿ ಸ್ಟ್ಯಾಂಡ್" ಎಂಬ ಟ್ಯಾಗ್ ಲೈನ್ ಇರಲಿದೆ. ಸಾಮಾನ್ಯ ಕನಿಷ್ಠ ಕಾರ್ಯಕ್ರಮಕ್ಕಾಗಿಯೂ ಸಲಹೆಗಳನ್ನು ಕೋರಲಾಗಿದೆ. ರಾಜ್ಯಗಳ ವಿಷಯಗಳನ್ನು ಪ್ರತ್ಯೇಕವಾಗಿ ಇಡಬೇಕು ಎಂದೂ ಹೇಳಲಾಗಿದೆ.

ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ನಡೆದ ಔತಣಕೂಟದಲ್ಲಿ ಮಮತಾ ಬ್ಯಾನರ್ಜಿ ಮತ್ತು ಸೋನಿಯಾ ಗಾಂಧಿ ಪರಸ್ಪರ ಹತ್ತಿರದಲ್ಲಿ ಕುಳಿತಿದ್ದರು. ಇದಕ್ಕೂ ಇಬ್ಬರೂ ನಾಯಕಿಯರು ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದರು. ಬೆಂಗಳೂರಿನಲ್ಲಿ ಈ ಸಭೆಯನ್ನು ಆಯೋಜಿಸಿರುವುದರ ಹಿಂದೆ ಕಾಂಗ್ರೆಸ್​ನ ತಂತ್ರಗಾರಿಕೆ ಅಡಗಿದೆ ಎನ್ನಲಾಗಿದೆ. ಇತ್ತೀಚೆಗಿನ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಪ್ರತಿಪಕ್ಷಗಳನ್ನು ಹುರಿದುಂಬಿಸಿದ್ದು ಮಾತ್ರವಲ್ಲದೆ, ಕಾಂಗ್ರೆಸ್​ ಪಕ್ಷವನ್ನು ಕಮಾಂಡಿಂಗ್ ಸ್ಥಾನದಲ್ಲಿ ನಿಲ್ಲಿಸಿದೆ.

ಇದನ್ನೂ ಓದಿ : 'ಅದೊಂದು ದುರುದ್ಧೇಶದ ಪ್ರಯತ್ನವಾಗಿತ್ತು': ಹಿಂಡೆನ್​ಬರ್ಗ್ ವರದಿಯ ಬಗ್ಗೆ ಗೌತಮ್ ಅದಾನಿ ಮಾತು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.