ETV Bharat / bharat

'ಒಂದು ರಾಷ್ಟ್ರ, ಒಂದು ಚುನಾವಣೆ' ಸಮಿತಿ ಸದಸ್ಯನಾಗಲು ನಿರಾಕರಿಸಿದ ಕಾಂಗ್ರೆಸ್‌ ಸಂಸದ ಅಧಿರ್ ರಂಜನ್ ಚೌಧರಿ - ಎಂಟು ಸದಸ್ಯರ ಉನ್ನತ ಮಟ್ಟದ ಸಮಿತಿ

ದೇಶದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವ ಸಾಧ್ಯತೆಯನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ಘೋಷಿಸಿರುವ ಉನ್ನತ ಮಟ್ಟದ ಸಮಿತಿಯ ಭಾಗವಾಗಲು ಲೋಕಸಭೆಯ ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌಧರಿ ನಿರಾಕರಿಸಿದ್ದಾರೆ.

Adhir Ranjan Chowdhury
ಅಧೀರ್ ರಂಜನ್ ಚೌಧರಿ
author img

By ETV Bharat Karnataka Team

Published : Sep 3, 2023, 7:10 AM IST

ನವದೆಹಲಿ : ಲೋಕಸಭೆ, ರಾಜ್ಯ ವಿಧಾನಸಭೆಗಳು, ಪುರಸಭೆ ಮತ್ತು ಪಂಚಾಯತ್‌ಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ 'ಒಂದು ರಾಷ್ಟ್ರ, ಒಂದು ಚುನಾವಣೆ'ಗೆ ಸಂಬಂಧಿಸಿದ ಪರಿಕಲ್ಪನೆಯನ್ನು ಪರಿಶೀಲಿಸಲು ಮತ್ತು ಶೀಘ್ರವಾಗಿ ಶಿಫಾರಸುಗಳನ್ನು ಮಾಡಲು 8 ಸದಸ್ಯರ ಉನ್ನತ ಮಟ್ಟದ ಸಮಿತಿಗೆ ಸರ್ಕಾರ ನಿನ್ನೆ (ಶನಿವಾರ) ಸೂಚನೆ ನೀಡಿದೆ. ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಮಿತಿಯ ನೇತೃತ್ವ ವಹಿಸಲಿದ್ದು, ಗೃಹ ಸಚಿವ ಅಮಿತ್ ಶಾ, ಲೋಕಸಭೆ ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌಧರಿ, ರಾಜ್ಯಸಭೆಯ ಮಾಜಿ ಪ್ರತಿಪಕ್ಷ ನಾಯಕ ಗುಲಾಂ ನಬಿ ಆಜಾದ್ ಮತ್ತು ಮಾಜಿ ಹಣಕಾಸು ಆಯೋಗದ ಅಧ್ಯಕ್ಷ ಎನ್‌.ಕೆ.ಸಿಂಗ್ ಸದಸ್ಯರಾಗಿದ್ದಾರೆ. ಮಹತ್ವದ ಬೆಳವಣಿಗೆಯಲ್ಲಿ ಅಧಿರ್ ರಂಜನ್ ಚೌಧರಿ ಸಮಿತಿಯ ಸದಸ್ಯನಾಗಲು ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ.

ಉನ್ನತ ಮಟ್ಟದ ಸಮಿತಿಯಲ್ಲಿ ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಸುಭಾಷ್ ಸಿ.ಕಶ್ಯಪ್, ಹಿರಿಯ ವಕೀಲ ಹರೀಶ್ ಸಾಳ್ವೆ ಮತ್ತು ಮಾಜಿ ಮುಖ್ಯ ವಿಜಿಲೆನ್ಸ್ ಕಮಿಷನರ್ ಸಂಜಯ್ ಕೊಠಾರಿ ಕೂಡ ಸದಸ್ಯರಾಗಿದ್ದಾರೆ. ಸಮಿತಿಯ ಸಭೆಗಳಲ್ಲಿ ವಿಶೇಷ ಆಹ್ವಾನಿತರಾಗಿ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಭಾಗವಹಿಸಲಿದ್ದು, ಕಾನೂನು ವ್ಯವಹಾರಗಳ ಕಾರ್ಯದರ್ಶಿ ನಿತೇನ್ ಚಂದ್ರ ಸಮಿತಿಯ ಕಾರ್ಯದರ್ಶಿಯಾಗಿರುತ್ತಾರೆ. ಈ ಸಮಿತಿಯು ವರದಿಯನ್ನು ಸಲ್ಲಿಸಲು ಯಾವುದೇ ಕಾಲದ ಮಿತಿಯನ್ನು ನಿರ್ದಿಷ್ಟಪಡಿಸದೇ ಇದ್ದರೂ, ತಕ್ಷಣವೇ ಕೆಲಸ ಪ್ರಾರಂಭಿಸುತ್ತದೆ ಮತ್ತು ಆದಷ್ಟು ಬೇಗ ಶಿಫಾರಸುಗಳನ್ನು ಮಾಡುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಹೀಗಾಗಿ, ಈ ಬಾರಿಯ ಸೆಪ್ಟೆಂಬರ್​ 18-22ರ ನಡುವೆ ನಡೆಯಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಒಂದು ದೇಶ ಒಂದು ಚುನಾವಣೆ ವಿಧೇಯಕ ಮಂಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ : ಏನಿದು ಒಂದು ದೇಶ ಒಂದು ಚುನಾವಣಾ.. ಈ ಕ್ರಮಕ್ಕೆ ಅನುಮೋದನೆ ಅಷ್ಟು ಸುಲಭವಲ್ಲವೇಕೆ ? ಇಲ್ಲಿದೆ ಮಾಹಿತಿ..

ಅಮಿತ್ ಶಾ ಅವರಿಗೆ ಪತ್ರ ಬರೆದಿರುವ ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷ ಅಧಿರ್ ರಂಜನ್‌ ಚೌಧರಿ, "ದೇಶದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವ ಸಾಧ್ಯತೆಯನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ಘೋಷಿಸಿರುವ ಉನ್ನತ ಮಟ್ಟದ ಸಮಿತಿಯ ಭಾಗವಾಗುವುದನ್ನು ನಿರಾಕರಿಸಲು ನನಗೆ ಯಾವುದೇ ಹಿಂಜರಿಕೆ ಇಲ್ಲ. ಇದೆಲ್ಲವೂ ದೊಡ್ಡ ವಂಚನೆ ಎಂದು ನಾನು ಭಾವಿಸುತ್ತೇನೆ. ಆ ಸಮಿತಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೇರಿಸದೇ ಇರುವುದು ದೊಡ್ಡ ಅವಮಾನ. ಇದು ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಗೆ ಉದ್ದೇಶಪೂರ್ವಕವಾಗಿ ಮಾಡಿದ ಅವಮಾನವಾಗಿದೆ. ಹೀಗಾಗಿ, ನಾನು ಸಮಿತಿಯಲ್ಲಿ ಇರುವುದಿಲ್ಲ, ನಿಮ್ಮ ಆಹ್ವಾನವನ್ನು ತಿರಸ್ಕರಿಸುವುದನ್ನು ಬಿಟ್ಟು ನನಗೆ ಬೇರೆ ದಾರಿಯಿಲ್ಲ" ಎಂದು ತಿಳಿಸಿದ್ದಾರೆ. (ಪಿಟಿಐ)

ಇದನ್ನೂ ಓದಿ : ಒಂದು ರಾಷ್ಟ್ರ ಒಂದು ಚುನಾವಣೆ ಬಗ್ಗೆ ಅವಲೋಕಿಸಲು ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ಸಮಿತಿ ರಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.