ಚಂಡೀಗಢ (ಪಂಜಾಬ್): ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರ ರಾಜೀನಾಮೆಯಿಂದಾಗಿ ತೆರವುಗೊಂಡಿದ್ದ ಪಂಜಾಬ್ ಮುಖ್ಯಮಂತ್ರಿ ಸ್ಥಾನವನ್ನು ಸಚಿವರಾಗಿದ್ದ ಚರಣಜಿತ್ ಸಿಂಗ್ ಚನ್ನಿ (58) ತುಂಬಲಿದ್ದಾರೆ.
ಇಂದು ನಡೆದ ಪಂಜಾಬ್ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯಲ್ಲಿ ಚನ್ನಿ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಈ ವಿಚಾರವನ್ನು ಟ್ವೀಟ್ ಮಾಡುವ ಮೂಲಕ ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ತಿಳಿಸಿದ್ದಾರೆ.
-
It gives me immense pleasure to announce that Sh. #CharanjitSinghChanni has been unanimously elected as the Leader of the Congress Legislature Party of Punjab.@INCIndia @RahulGandhi @INCPunjab pic.twitter.com/iboTOvavPd
— Harish Rawat (@harishrawatcmuk) September 19, 2021 " class="align-text-top noRightClick twitterSection" data="
">It gives me immense pleasure to announce that Sh. #CharanjitSinghChanni has been unanimously elected as the Leader of the Congress Legislature Party of Punjab.@INCIndia @RahulGandhi @INCPunjab pic.twitter.com/iboTOvavPd
— Harish Rawat (@harishrawatcmuk) September 19, 2021It gives me immense pleasure to announce that Sh. #CharanjitSinghChanni has been unanimously elected as the Leader of the Congress Legislature Party of Punjab.@INCIndia @RahulGandhi @INCPunjab pic.twitter.com/iboTOvavPd
— Harish Rawat (@harishrawatcmuk) September 19, 2021
ಕಳೆದ ಕೆಲ ತಿಂಗಳಿಂದ ಪಂಜಾಬ್ ಕಾಂಗ್ರೆಸ್ನಲ್ಲಿ ಉಂಟಾಗಿದ್ದ ರಾಜಕೀಯ ಬಿಕ್ಕಟ್ಟಿಗೆ ತೆರೆ ಬಿದ್ದಿದೆ. ಇದ್ದಕ್ಕಿದ್ದಂತೆ ನಿನ್ನೆ ಕ್ಯಾಪ್ಟನ್ ಅಮರೀಂದರ್ ಸಿಂಗ್ ಪಂಜಾಬ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಪಂಜಾಬ್ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ಸುನಿಲ್ ಜಖರ್, ಪಕ್ಷದ ಪ್ರಸ್ತುತ ರಾಜ್ಯ ಘಟಕದ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಮತ್ತು ಸುಖಜಿಂದರ್ ಸಿಂಗ್ ರಾಂಧವ ಅವರ ಹೆಸರು ನೂತನ ಸಿಎಲ್‌ಪಿ ನಾಯಕನ ರೇಸ್ನಲ್ಲಿ ಮುಂಚೂಣಿಯಲ್ಲಿತ್ತು.
ರಾಹುಲ್ ಗಾಂಧಿ ಅಭಿನಂದನೆ:
ಚರಣಜಿತ್ ಸಿಂಗ್ ಚನ್ನಿ ಅವರಿಗೆ ಅಭಿನಂದನೆಗಳು. ನಾವು ಪಂಜಾಬ್ ಜನರಿಗೆ ನೀಡಿದ ಆಶೋತ್ತರಗಳನ್ನು ಈಡೇರಿಸಬೇಕಿದೆ. ರಾಜ್ಯದ ಜನತೆಯ ನಂಬಿಕೆಗೆ ನಮ್ಮ ಮಹತ್ವ ಎಂದು ಟ್ವೀಟ್ ಮಾಡಿದ್ದಾರೆ.
-
Congratulations to Shri Charanjit Singh Channi Ji for the new responsibility.
— Rahul Gandhi (@RahulGandhi) September 19, 2021 " class="align-text-top noRightClick twitterSection" data="
We must continue to fulfill the promises made to the people of Punjab. Their trust is of paramount importance.
">Congratulations to Shri Charanjit Singh Channi Ji for the new responsibility.
— Rahul Gandhi (@RahulGandhi) September 19, 2021
We must continue to fulfill the promises made to the people of Punjab. Their trust is of paramount importance.Congratulations to Shri Charanjit Singh Channi Ji for the new responsibility.
— Rahul Gandhi (@RahulGandhi) September 19, 2021
We must continue to fulfill the promises made to the people of Punjab. Their trust is of paramount importance.
ಇದನ್ನೂ ಓದಿ: ಪಂಜಾಬ್ ರಾಜಕೀಯ ಬಿಕ್ಕಟ್ಟು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕ್ಯಾಪ್ಟನ್ ಅಮರಿಂದರ್ ಸಿಂಗ್
ಇದರ ಬೆನ್ನಲ್ಲೇ ಇಂದು ಸಿಎಲ್‌ಪಿ ಸಭೆ ನಡೆಸಲಾಗಿದ್ದು, ಅಚ್ಚರಿ ಎಂಬಂತೆ ಈ ಚನ್ನಿ ಅವರನ್ನು ಪಂಜಾಬ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿದೆ. ಚರಣಜಿತ್ ಸಿಂಗ್ ಚನ್ನಿ ಅವರು ಪಂಜಾಬ್ನ ತಾಂತ್ರಿಕ ಶಿಕ್ಷಣ ಮತ್ತು ಕೈಗಾರಿಕಾ ತರಬೇತಿ, ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ವ್ಯವಹಾರಗಳ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದರು. ಇದೀಗ ಸಿಎಂ ಆಗಿ ರಾಜ್ಯಭಾರ ಮಾಡಲಿದ್ದಾರೆ.