ಶಿಮ್ಲಾ, ಹಿಮಾಚಲ ಪ್ರದೇಶ: ಬಜೆಟ್ ಅಧಿವೇಶನ ನಡೆಯುತ್ತಿರಬೇಕಾದರೆ ಕಾಂಗ್ರೆಸ್ ಸದಸ್ಯರು ಗದ್ದಲ ಸೃಷ್ಟಿಸಿದ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶ ವಿಪಕ್ಷ ನಾಯಕ ಮುಕೇಶ್ ಅಗ್ನಿಹೋತ್ರಿ ಸೇರಿದಂತೆ ಐವರು ಕಾಂಗ್ರೆಸ್ ಶಾಸಕರನ್ನು ವಿಧಾನಸಭಾಧ್ಯಕ್ಷರು ಅಮಾನತು ಮಾಡಿದ್ದಾರೆ.
ವಿಪಕ್ಷ ನಾಯಕ ಮುಕೇಶ್ ಅಗ್ನಿಹೋತ್ರಿ, ಹರ್ಷವರ್ಧನ್, ಸತ್ಪಾಲ್ ರಾಯಜಾದಾ, ವಿನಯ್ ಕುಮಾರ್ ಮತ್ತು ಸುಂದರ್ ಠಾಕೂರ್ ಅವರನ್ನು ಅಧಿವೇಶನ ಮುಗಿಯುವವರೆಗೆ ಅಮಾನತು ಮಾಡಿ ವಿಧಾನಸಭಾಧ್ಯಕ್ಷರು ಆದೇಶಿಸಿದ್ದಾರೆ.
ಇದನ್ನೂ ಓದಿ: ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ.. ಆಟೋರಿಕ್ಷಾಗೆ ಹಗ್ಗ ಕಟ್ಟಿ ಎಳೆದು ಸಂಸದ ಶಶಿ ತರೂರ್ ಅಣುಕು..
ಬಜೆಟ್ ಅಧಿವೇಶನದ ಆರಂಭದಲ್ಲಿ ರಾಜ್ಯಪಾಲರಾದ ಬಂಡಾರು ದತ್ತಾತ್ರೇಯ ಅವರು ಭಾಷಣ ಮಾಡಿದ್ದು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಭಾಷಣದ ಪ್ರತಿಗಳನ್ನು ಹರಿದು ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಜೊತೆಗೆ ರಾಜ್ಯಪಾಲರ ಭಾಷಣ ಸುಳ್ಳಿನ ಕಂತೆ ಎಂದು ಆರೋಪಿಸಿದ್ದರು.
ಗದ್ದಲ ಮುಂದುವರೆದಂತೆ ರಾಜ್ಯಪಾಲರು ಭಾಷಣ ಮೊಟಕುಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಐವರು ಕಾಂಗ್ರೆಸ್ ಸದಸ್ಯರನ್ನು ವಿಧಾನಸಭಾಧ್ಯಕ್ಷರು ಸಂಪೂರ್ಣ ಅಧಿವೇಶನದವರೆಗೆ ಅಮಾನತ್ತಿನಲ್ಲಿಟ್ಟಿದ್ದಾರೆ.