ETV Bharat / bharat

ಸೋನಿಯಾ ಗಾಂಧಿ ಬೆನ್ನಲ್ಲೇ ಪ್ರಿಯಾಂಕಾ ವಾದ್ರಾಗೂ ಕೋವಿಡ್​ ಪಾಸಿಟಿವ್​ - ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ವಾದ್ರಾ

ಕಾಂಗ್ರೆಸ್ ಮುಖಂಡೆ ಸೋನಿಯಾ ಗಾಂಧಿ ಅವರಿಗೆ ಕೋವಿಡ್ ಸೋಂಕು ದೃಢಪಟ್ಟ ಬೆನ್ನಲ್ಲೇ ಪ್ರಿಯಾಂಕಾ ಗಾಂಧಿಗೂ ಸೋಂಕು ಇರುವುದು ಪತ್ತೆಯಾಗಿದೆ. ಇದಕ್ಕೆ ಸಂಬಂಧಿಸಿದಂತೆ ಖುದ್ದಾಗಿ ಮಾಹಿತಿ ಹಂಚಿಕೊಂಡಿದ್ದಾರೆ.

Priyanka Gandhi Vadra tests positive for COVID

author img

By

Published : Jun 3, 2022, 10:49 AM IST

ನವದೆಹಲಿ: ಕಳೆದ ಎರಡು ದಿನಗಳ ಹಿಂದೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕೋವಿಡ್ ದೃಢಪಟ್ಟ ಬೆನ್ನಲ್ಲೇ ಇದೀಗ ಅವರ ಪುತ್ರಿ ಪ್ರಿಯಾಂಕಾ ಗಾಂಧಿಗೂ ಸೋಂಕು ಇರುವುದು ದೃಢಗೊಂಡಿದೆ. ಇದಕ್ಕೆ ಸಂಬಂಧಿಸಿದಂತೆ ಖುದ್ದಾಗಿ ಟ್ವೀಟ್ ಮಾಡಿ, ಮಾಹಿತಿ ಹಂಚಿಕೊಂಡಿದ್ದಾರೆ.

ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ, ಕೋವಿಡ್​ನ ಸೌಮ್ಯ ರೋಗಲಕ್ಷಣಗಳೊಂದಿಗೆ ಧನಾತ್ಮಕ ಪರೀಕ್ಷೆಗೊಳಪಟ್ಟಿದ್ದೇನೆ. ಕೋವಿಡ್​ನ ಎಲ್ಲ ಮಾರ್ಗಸೂಚಿ ಅನುಸರಿಸುವ ಮೂಲಕ ಮನೆಯಲ್ಲಿ ಸೆಲ್ಫ ಕ್ವಾರಂಟೈನ್​​ಗೊಳಗಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮ ಕೈಗೊಂಡು, ಪರೀಕ್ಷೆಗೊಳಪಡುವಂತೆ ಮನವಿ ಮಾಡಿದ್ದಾರೆ.

  • I've tested positive for COVID-19 with mild symptoms. Following all the protocols, I have quarantined myself at home.

    I would request those who came in contact with me to take all necessary precautions.

    — Priyanka Gandhi Vadra (@priyankagandhi) June 3, 2022 " class="align-text-top noRightClick twitterSection" data=" ">

ಮೊನ್ನೆಯಷ್ಟೇ ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕೋವಿಡ್-19 ದೃಢಪಟ್ಟಿದ್ದು, ಅವರ ಆರೋಗ್ಯದಲ್ಲಿ ಸೌಮ್ಯ ಸ್ವಭಾವದ ಜ್ವರ ಹಾಗೂ ಕೋವಿಡ್ ರೋಗಲಕ್ಷಣ ಕಂಡು ಬಂದಿದೆ ಎಂದು ಸುರ್ಜೇವಾಲಾ ತಿಳಿಸಿದ್ದಾರೆ. ಕೋವಿಡ್ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆ ಪ್ರತ್ಯೇಕವಾಗಿ ಉಳಿದುಕೊಂಡಿರುವ ಅವರು, ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದರು.

ದೇಶದಲ್ಲಿ ಕೆಳೆದ ಕೆಲ ದಿನಗಳಿಂದ ಕೋವಿಡ್ ಸೋಂಕಿತ ಪ್ರಕರಣಗಳಲ್ಲಿ ತುಸು ಏರಿಕೆ ಕಂಡು ಬಂದಿದ್ದು, ಕಳೆದ 24 ಗಂಟೆಗಳಲ್ಲಿ 4 ಸಾವಿರಕ್ಕೂ ಅಧಿಕ ಹೊಸ ಸೋಂಕಿತ ಪ್ರಕರಣಗಳು ಕಂಡು ಬಂದಿವೆ.

ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್ ಕೇಸ್​ ಸಮನ್ಸ್​.. ಸೋನಿಯಾ ಗಾಂಧಿಗೆ ಕೋವಿಡ್​, ಸೆಲ್ಫ್​ ಕ್ವಾರಂಟೈನ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.