ಚಂಡೀಗಢ(ಪಂಜಾಬ್): ಹತ್ಯೆಗೀಡಾಗಿರುವ ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಅವರ ಕುಟುಂಬದ ಸದಸ್ಯರನ್ನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿಯಾಗುವ ಸಾಧ್ಯತೆ ಇದೆ. ನಾಳೆ ಚಂಡೀಗಢದ ಮಾನ್ಸಾದಲ್ಲಿ ಅವರನ್ನ ಭೇಟಿಯಾಗಲಿದ್ದಾರೆಂದು ತಿಳಿದು ಬಂದಿದೆ.
ಕಳೆದ ಕೆಲ ದಿನಗಳ ಹಿಂದೆ ಹತ್ಯೆಗೀಡಾಗಿರುವ ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಕುಟುಂಬದ ಸದಸ್ಯರನ್ನ ಈಗಾಗಲೇ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಅನೇಕ ರಾಜಕೀಯ ಮುಖಂಡರು ಭೇಟಿ ಮಾಡಿದ್ದು, ಸಾಂತ್ವನ ಹೇಳಿದ್ದಾರೆ. ಇದೀಗ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ರಾಹುಲ್ ಗಾಂಧಿ ಕೂಡ ಈ ಕೆಲಸ ಮಾಡಲಿದ್ದಾರೆ.
ಇದನ್ನೂ ಓದಿ: ಕರ್ನಾಟಕದ ಮಾಜಿ ಐಎಎಸ್ ಅಧಿಕಾರಿ ಪುತ್ರನಿಂದ ಐಐಟಿ ಬಿಹೆಚ್ಯುಗೆ ಒಂದು ಮಿಲಿಯನ್ ಡಾಲರ್ ದೇಣಿಗೆ
ಮೇ 29ರಂದು ಪಂಜಾಬ್ನಲ್ಲಿ ಸಿಧು ಮೂಸೆ ವಾಲಾ ಹತ್ಯೆ ನಡೆದಿತ್ತು. ಈ ಪ್ರಕರಣ ಪಂಜಾಬ್ ರಾಜಕೀಯ ವಲಯದಲ್ಲಿ ಹೆಚ್ಚು ಚರ್ಚೆಗೆ ಗ್ರಾಸವಾಗಿದ್ದು, ರಾಜಕೀಯ ಬಣ್ಣ ಸಹ ಪಡೆದುಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ಪೊಲೀಸರು ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮೊಸೆ ವಾಲಾ ಹತ್ಯೆ ಬೆನ್ನಲ್ಲೇ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಹೆಚ್ಚಿನ ಭದ್ರತೆ ನೀಡಲಾಗಿದೆ.