ETV Bharat / bharat

'ನಾಗಾಲ್ಯಾಂಡ್‌ನಲ್ಲಿ ನಡೆದಿದ್ದು ಹೃದಯವಿದ್ರಾವಕ ಘಟನೆ, ಕೇಂದ್ರ ಉತ್ತರ ನೀಡಲೇಬೇಕು' - ಕೇಂದ್ರ ಗೃಹ ಇಲಾಖೆಯ ವಿರುದ್ಧ ರಾಹುಲ್ ವಾಗ್ದಾಳಿ

ನಾಗಾಲ್ಯಾಂಡ್‌ನ ಮೋನ್ ಜಿಲ್ಲೆಯಲ್ಲಿ ನಾಗರಿಕರ ಸಾವಿನ ಕುರಿತಂತೆ ಟ್ವಿಟರ್​ನಲ್ಲಿ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

congress leader Rahul Gandhi over civilian deaths in Nagaland
Nagaland Firing: ಗೃಹ ಸಚಿವಾಲಯ ಏನು ಮಾಡುತ್ತಿದೆ.. ರಾಹುಲ್ ಪ್ರಶ್ನೆ
author img

By

Published : Dec 5, 2021, 1:45 PM IST

ನವದೆಹಲಿ: ನಾಗಾಲ್ಯಾಂಡ್‌ನಲ್ಲಿ ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ ನಾಗರಿಕರ ಸಾವಿಗೆ ಸಂಬಂಧಿಸಿದಂತೆ ಭಾರತ ಸರ್ಕಾರ 'ನಿಜವಾದ ಉತ್ತರ' ನೀಡಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಮೋನ್ ಜಿಲ್ಲೆಯಲ್ಲಿ ನಾಗರಿಕರ ಸಾವಿನ ಕುರಿತಂತೆ ಟ್ವಿಟರ್​ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಗೃಹ ಸಚಿವಾಲಯ ಏನು ಮಾಡುತ್ತಿದೆ?, ಈ ಕುರಿತು ಸರ್ಕಾರ 'ನಿಜವಾದ ಉತ್ತರ' ನೀಡಬೇಕೆಂದು ಒತ್ತಾಯಿಸಿದ್ದಾರೆ.

congress leader Rahul Gandhi over civilian deaths in Nagaland

ನಾಗಾಲ್ಯಾಂಡ್‌ನ ಮೋನ್ ಜಿಲ್ಲೆಯ ಓಟಿಂಗ್ ಮತ್ತು ತಿರು ಗ್ರಾಮಗಳ ನಡುವೆ ಶನಿವಾರ ಸಂಜೆ ನಡೆದ ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ ಓರ್ವ ಯೋಧ ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ. ನಾಗಾಲ್ಯಾಂಡ್​ ಸಿಎಂ ಎಸ್​ಐಟಿ ತನಿಖೆಗೆ ಆದೇಶಿಸಿದ್ದು, ಸೇನೆಯೂ ಕೂಡಾ ತನಿಖೆಗೆ ಮುಂದಾಗಿದೆ.

ಇದನ್ನೂ ಓದಿ: Nagaland Firing : ಘಟನೆಗೆ ಸೇನೆ ವಿಷಾದ, ನ್ಯಾಯಾಲಯ ತನಿಖೆಗೆ ಆದೇಶ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.