ETV Bharat / bharat

ರೈತರ ಆಂದೋಲನವನ್ನು ಅಸ್ತ್ರವಾಗಿಸಿಕೊಂಡು ಪಕ್ಷ ಬಲಪಡಿಸಲು ಮುಂದಾದ ಕಾಂಗ್ರೆಸ್​ - ಉತ್ತರ ಪ್ರದೇಶ ಪಕ್ಷದ ಉಸ್ತುವಾರಿ ಪ್ರಿಯಾಂಕಾ ಗಾಂಧಿ

ಉತ್ತರ ಪ್ರದೇಶದಲ್ಲಿ ಮುಂಬರುವ ಪಂಚಾಯತ್ ಚುನಾವಣೆ ಮತ್ತು ವಿಧಾನಸಭಾ ಚುನಾವಣೆ ಹಿನ್ನೆಲೆ ಈಗಿನಿಂದಲೇ ಎಲ್ಲಾ ರಾಜಕೀಯ ಪಕ್ಷಗಳು ಚುನಾವಣಾ ಸಿದ್ಧತೆಯಲ್ಲಿ ತೊಡಗಿಕೊಂಡಿವೆ. ರೈತರ ಆಂದೋಲನವನ್ನೇ ಅಸ್ತ್ರವನ್ನಾಗಿಸಿಕೊಂಡು ಕಾಂಗ್ರೆಸ್​ ಪಕ್ಷ ಸಂಘಟನೆಯಲ್ಲಿ ತೊಡಗಿದೆ ಎನ್ನಲಾಗಿದೆ.

farmers protest
farmers protest
author img

By

Published : Feb 10, 2021, 7:56 PM IST

ಲಕ್ನೋ: ಮೂರು ಹೊಸ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ನಡೆಯುತ್ತಿರುವ ರೈತರ ಆಂದೋಲನದ ಮಧ್ಯೆಯೇ ಕಾಂಗ್ರೆಸ್ ತನ್ನ ರಾಜಕೀಯ ನೆಲೆಯನ್ನು ಬಲಪಡಿಪಡಿಸಿಕೊಳ್ಳುವ ಕೆಲಸ ಮಾಡುತ್ತಿದೆ ಎನ್ನಲಾಗಿದೆ.

ರೈತರ ಪ್ರತಿಭಟನೆಯನ್ನು ಬೆಂಬಲಿಸುವ ಸಲುವಾಗಿ ಕಾಂಗ್ರೆಸ್​ 'ಕೃಷಿ ವಿರೋಧಿ ಕಾನೂನುಗಳು' ಎಂಬ ಆಂದೋಲನವನ್ನು ಇಂದಿನಿಂದ ಪ್ರಾರಂಭಿಸಿದೆ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಉತ್ತರ ಪ್ರದೇಶ ಪಕ್ಷದ ಉಸ್ತುವಾರಿ ಪ್ರಿಯಾಂಕಾ ಗಾಂಧಿ ಅವರು ರಾಜ್ಯದಲ್ಲಿ ನಾಲ್ಕು ದಿನಗಳ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಇಂದು ಸಹರಾನ್‌ಪುರಕ್ಕೆ ಭೇಟಿ ನೀಡಿ, 'ಕಿಸಾನ್ ಮಹಾಪಂಚಾಯತ್' ಕಾರ್ಯಕ್ರಮದಲ್ಲಿ ರೈತರನ್ನು ಉದ್ದೇಶಿಸಿ ಭಾಷಣ ಮಾಡಿದರು. ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.

ಇನ್ನು ಫೆಬ್ರವರಿ 13 ರಂದು ಮೀರತ್‌ನಲ್ಲಿ, ಫೆ ರಂದು 16 ರಂದು ಬಿಜ್ನೋರ್ ಮತ್ತು ಫೆ. 18 ರಂದು ಮಥುರಾದಲ್ಲಿ 'ಕಿಸಾನ್ ಪಂಚಾಯತ್' ರ‍್ಯಾಲಿಯಲ್ಲಿ ಭಾಗವಹಿಸಿ, ರೈತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಮೂಲಕ ರೈತರ ಹೋರಾಟಕ್ಕೆ ಬೆಂಬಲ ಸೂಚಿಸುವ ಜೊತೆಗೆ ಕಾಂಗ್ರೆಸ್ ಪಕ್ಷ ಬಲವರ್ಧನೆಯಲ್ಲಿ ​ತೊಡಗಿದ್ದಾರೆ.

ಉತ್ತರ ಪ್ರದೇಶದಲ್ಲಿ ಮುಂಬರುವ ಪಂಚಾಯತ್ ಚುನಾವಣೆ ಮತ್ತು ವಿಧಾನಸಭಾ ಚುನಾವಣೆ ಹಿನ್ನೆಲೆ ಈಗಿನಿಂದಲೇ ಎಲ್ಲ ರಾಜಕೀಯ ಪಕ್ಷಗಳು ಚುನಾವಣಾ ಸಿದ್ಧತೆಯಲ್ಲಿ ತೊಡಗಿಕೊಂಡಿವೆ. ಕಾಂಗ್ರೆಸ್​ ಮಾತ್ರವಲ್ಲದೆ ರಾಷ್ಟ್ರೀಯ ಲೋಕ ದಳ (ಆರ್‌ಎಲ್‌ಡಿ) ಕೂಡ ರೈತರ ಹೋರಾಟದ ಲಾಭವನ್ನು ಪಡೆದುಕೊಂಡು ಪಕ್ಷ ಸಂಘಟನೆಯಲ್ಲಿ ತೊಡಗಿದೆ ಎನ್ನಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.