ಅಹಮದಾಬಾದ್ (ಗುಜರಾತ್) : ಗುಜರಾತ್ ವಿಧಾನಸಭೆ ಚುನಾವಣೆ ಹಿನ್ನೆಲೆ ಬಿಜೆಪಿ, ಕಾಂಗ್ರೆಸ್, ಆಮ್ ಆದ್ಮಿ ಪಕ್ಷದ ನಾಯಕರು ಗುಜರಾತ್‌ನಲ್ಲಿ ಮತಯಾಚನೆಯಲ್ಲಿ ತೊಡಗಿದ್ದಾರೆ. ಕಾಂಗ್ರೆಸ್‌ನ ಪ್ರಮುಖ ನಾಯಕರು ಗುಜರಾತ್‌ನಲ್ಲಿ ತಮ್ಮ ಪ್ರಚಾರ ಕಾರ್ಯ ಆರಂಭಿಸಿದ್ದು, ಗುಜರಾತ್ ಚುನಾವಣೆ ಭಾರಿ ಮಹತ್ವ ಪಡೆದುಕೊಂಡಿದೆ.
ಈ ಬಗ್ಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರೊಂದಿಗೆ ಚರ್ಚೆ ನಡೆಸಿದ ನಂತರ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುಜರಾತ್ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ಮಲ್ಲಿಕಾರ್ಜುನ ಖರ್ಗೆ ಕಾರ್ಯಕ್ರಮ: ಮೂಲಗಳ ಪ್ರಕಾರ ಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜ.26 ಮತ್ತು 27ರಂದು ಗುಜರಾತ್ ಗೆ ಭೇಟಿ ನೀಡಲಿದ್ದಾರೆ. ಜೊತೆಗೆ ಖರ್ಗೆಯವರು ಗುಜರಾತ್ ನ ವಿವಿಧೆಡೆ ಪ್ರಚಾರ ಸಭೆ ನಡೆಸಲಿದ್ದಾರೆ. ಇದಕ್ಕೂ ಮೊದಲು ನವೆಂಬರ್ 26 ರಂದು ಗುಜರಾತ್ ಕಾಂಗ್ರೆಸ್ ಸಮಿತಿಯನ್ನು ಬೆಂಬಲಿಸಿ ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನವೆಂಬರ್ 27 ರಂದು ಅಹಮದಾಬಾದ್‌ನಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಗುಜರಾತ್‌ಗೆ ವಿವಿಧ ನಾಯಕರ ಪ್ರವಾಸ: ಗುಜರಾತ್ ಚುನಾವಣೆ ಹಿನ್ನೆಲೆ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕನ್ಹಯ್ಯಾ ಕುಮಾರ್ ಮತ್ತು ರಾಹುಲ್ ಗಾಂಧಿ ಸೇರಿದಂತೆ ವಿವಿಧ ಪಕ್ಷದ ನಾಯಕರು ಗುಜರಾತ್‌ಗೆ ಭೇಟಿ ನೀಡಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಗುಜರಾತ್‌ನಲ್ಲಿ ಕಾಂಗ್ರೆಸ್ಗೆ ಗೆಲ್ಲುವ ಉತ್ತಮ ಅವಕಾಶ: ಕನ್ಹಯ್ಯಾ ಕುಮಾರ್