ETV Bharat / bharat

ಸರ್ಕಾರ ರಚನೆಗೆ ಕಾಂಗ್ರೆಸ್ ಸಜ್ಜು: ತೆಲಂಗಾಣದ ಎರಡನೇ ಸಿಎಂ ಆಗಿ ಇಂದು ರೇವಂತ್​ ರೆಡ್ಡಿ ಪ್ರಮಾಣವಚನ - ಸಿಎಂ ಪ್ರಮಾಣವಚನ ಸ್ವೀಕಾರ ಸಮಾರಂಭ

Telangana Assembly elections Results 2023: ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದಿದೆ. ಡಿಸೆಂಬರ್ 4 (ಸೋಮವಾರ) ಸಿಎಂ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.

Congress on course to form govt in Telangana, Revanth Reddy could be states second CM
ತೆಲಂಗಾಣದಲ್ಲಿ​ ಸರ್ಕಾರ ರಚನೆಗೆ ಕಾಂಗ್ರೆಸ್ ಸಜ್ಜು: ರಾಜ್ಯದ ಎರಡನೇ ಸಿಎಂ ಆಗುವ ನಿರೀಕ್ಷೆಯಲ್ಲಿ ರೇವಂತ್​ ರೆಡ್ಡಿ
author img

By PTI

Published : Dec 3, 2023, 7:54 PM IST

Updated : Dec 4, 2023, 7:56 AM IST

ಹೈದರಾಬಾದ್ (ತೆಲಂಗಾಣ): ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ 64 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್​ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಯಾದ ಬಳಿಕ ಕಾಂಗ್ರೆಸ್​ ಮೊದಲ ಬಾರಿಗೆ ಸರ್ಕಾರ ರಚಿಸಲು ಸಜ್ಜಾಗಿದೆ. ಇದರೊಂದಿಗೆ ಕೆ. ಚಂದ್ರಶೇಖರ್​ ರಾವ್​ ನೇತೃತ್ವದ ಬಿಆರ್​ಎಸ್​ನ 10 ವರ್ಷಗಳ ಆಡಳಿತ ಅಂತ್ಯವಾಗಿದೆ. ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಎ. ರೇವಂತ್​ ರೆಡ್ಡಿ ರಾಜ್ಯದ ಎರಡನೇ ಸಿಎಂ ಆಗುವ ನಿರೀಕ್ಷೆಯಲ್ಲಿದ್ದಾರೆ. ಇಂದು (ಡಿಸೆಂಬರ್ 4) ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಬೆಳಗ್ಗೆ 9:30ಕ್ಕೆ ಗೆದ್ದ ಎಲ್ಲಾ ಶಾಸಕರ ಸಭೆಯನ್ನು ಕರೆಯಲಾಗಿದೆ.

ಇಂದು ಪ್ರಕಟವಾದ ನಾಲ್ಕು ರಾಜ್ಯಗಳ ಪೈಕಿ ಹಿಂದಿ ಪ್ರಾಬಲ್ಯದ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢ ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ದಕ್ಷಿಣ ಭಾರತದ ತೆಲಂಗಾಣದಲ್ಲಿ ಕಾಂಗ್ರೆಸ್​ ಜಯ ದಾಖಲಿಸಿದೆ. ಮೇ ತಿಂಗಳಲ್ಲಿ ಕರ್ನಾಟಕದಲ್ಲಿ ಭರ್ಜರಿ ಗೆಲುವು ಕಂಡಿದ್ದ ಕಾಂಗ್ರೆಸ್​ ಈಗ ಆರು ತಿಂಗಳ ಅವಧಿಯಲ್ಲಿ ದಕ್ಷಿಣದ ಭಾರತದ ಎರಡನೇ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಂತಾಗಿದೆ. ಹ್ಯಾಟ್ರಿಕ್​ ಗೆಲುವಿನ ಮೇಲೆ ಕಣ್ಣಿಟ್ಟಿದ್ದ ಕೆಸಿಆರ್​ ಆಸೆ ಭಗ್ನವಾಗಿದೆ.

ರಾಜ್ಯದ ಎರಡನೇ ಸಿಎಂ ಆಗಲಿದ್ದಾರೆ ರೇವಂತ್​ ರೆಡ್ಡಿ: ಪ್ರಸ್ತುತ ಚುನಾವಣೆಯಲ್ಲಿ ತಮ್ಮ ಪಕ್ಷದ ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ಕೆಸಿಆರ್​ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಮುಂದಾಳತ್ವ ವಹಿಸಿಕೊಂಡಿದ್ದ 56 ವರ್ಷ ವಯಸ್ಸಿನ ರೇವಂತ್ ರೆಡ್ಡಿ ಮುಖ್ಯಮಂತ್ರಿ ಹುದ್ದೆಯ ರೇಸ್​ನಲ್ಲಿದ್ದಾರೆ. ಚುನಾವಣೆಯಲ್ಲಿ ಪಕ್ಷ ಬಹುಮತ ಪಡೆಯುವುದು ಸ್ಪಷ್ಟವಾಗುತ್ತಿದ್ದಂತೆ ರೇವಂತ್ ರೆಡ್ಡಿ ರಾಜ್ಯದ ಉನ್ನತ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿದರು. ಸೋಮವಾರವೇ ಪ್ರಮಾಣವಚನ ಸಮಾರಂಭ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆಗಳ ಬಗ್ಗೆ ಚರ್ಚಿಸಿದರು. ಭದ್ರತಾ ವ್ಯವಸ್ಥೆ ಮಾಡುವಂತೆ ರಾಜ್ಯ ಕಾಂಗ್ರೆಸ್ ಮುಖ್ಯಸ್ಥರು ಕೇಳಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಚುನಾವಣಾ ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್​ ನಾಯಕನ ಭೇಟಿ: ತೆಲಂಗಾಣ ಡಿಜಿಪಿ ಅಮಾನತು

ರೇವಂತ್ ರೆಡ್ಡಿ ಅವರು ಪೊಲೀಸ್ ಮಹಾನಿರ್ದೇಶಕ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಮತ್ತು ಎಡಿಜಿ ಸಿಐಡಿ ಅವರನ್ನು ಕರೆದು ಚರ್ಚಿಸಿದ್ದು, ಎಲ್​ಬಿ ಸ್ಟೇಡಿಯಂನಲ್ಲಿ ಪ್ರಮಾಣವಚನ ಸಮಾರಂಭದ ಸಿದ್ಧತೆ ಕುರಿತು ತಿಳಿಸಿದ್ದಾರೆ. ತಮ್ಮ ಪಕ್ಷವು ಭಾನುವಾರ ರಾತ್ರಿಯೇ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಯ ಬಗ್ಗೆ ಚರ್ಚಿಸಲಿದೆ. ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ದೆಹಲಿಯ ಹಿರಿಯ ನಾಯಕರಲ್ಲದೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ ಎಂದು ರೆಡ್ಡಿ ಡಿಜಿಪಿಗೆ ಮಾಹಿತಿ ನೀಡಿದ್ದಾರೆ. ಭದ್ರತಾ ವ್ಯವಸ್ಥೆ ಕಲ್ಪಿಸುವ ಬಗ್ಗೆ ಕೇಳಿಕೊಂಡಿದ್ದಾರೆ ಎಂದು ತೆಲಂಗಾಣ ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ.

ಮತ್ತೊಂದೆಡೆ, ರೇವಂತ್ ರೆಡ್ಡಿ ಮಾತನಾಡಿ, ರಾಜ್ಯದಲ್ಲಿ ಸರ್ಕಾರ ರಚಿಸಿದ ನಂತರ ತೆಲಂಗಾಣ ಜನರ ಆಶೋತ್ತರಗಳನ್ನು ಈಡೇರಿಸುವುದು ಪಕ್ಷದ ಜವಾಬ್ದಾರಿಯಾಗಿದೆ. ಇದು ಜನಾದೇಶವಾಗಿದೆ. ಇದರ ಸರಳವಾದ ಅಂಶವೆಂದರೆ ಜನತೆ ಬದಲಾವಣೆ ಬಯಸಿದ್ದರು. ಹೀಗಾಗಿ ಕೆಸಿಆರ್ ಅವರನ್ನು ಸೋಲಿಸಿದ್ದಾರೆ. ಜನರೇ ವಿರೋಧ ಪಕ್ಷದ ಪಾತ್ರವನ್ನು ನಿರ್ಧರಿಸಿದ್ದಾರೆ. ಜನರ ಆಶೋತ್ತರಗಳನ್ನು ಈಡೇರಿಸಲು ಬಿಆರ್‌ಎಸ್ ಸಹಕಾರವನ್ನು ಕಾಂಗ್ರೆಸ್ ನಿರೀಕ್ಷಿಸುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ: ತೆಲಂಗಾಣ ಅಚ್ಚರಿ ಫಲಿತಾಂಶ: ಹಾಲಿ ಸಿಎಂ ಕೆಸಿಆರ್​, ಸಿಎಂ ಆಕಾಂಕ್ಷಿ ರೇವಂತ್ ವಿರುದ್ಧ ಬಿಜೆಪಿಗೆ ಗೆಲುವು!

Last Updated : Dec 4, 2023, 7:56 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.