ETV Bharat / bharat

ದೇಶದಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಬೇಕು - ನಿತಿನ್ ಗಡ್ಕರಿ - Aam Aadmi Party and regional parties for not replacing the Congress

ದೇಶದಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಬೇಕು. ಆಮ್ ಆದ್ಮಿ ಪಕ್ಷ ಮತ್ತು ಪ್ರಾದೇಶಿಕ ಪಕ್ಷಗಳು ಕಾಂಗ್ರೆಸ್​ನ ಸ್ಥಾನವನ್ನು ತುಂಬಲು ಶಕ್ತವಿಲ್ಲ ಎಂದು ಕೇಂದ್ರ ಸಚಿವ ನಿತಿನ್​ ಗಡ್ಕರಿ ಹೇಳಿದ್ದಾರೆ.

Nitin Gadkari
ನಿತಿನ್ ಗಡ್ಕರಿ
author img

By

Published : Mar 27, 2022, 6:08 PM IST

ಪುಣೆ(ಮಹಾರಾಷ್ಟ್ರ): ದೇಶದಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಬೇಕು ಎಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಕ್ಷೀಣಿಸುತ್ತಿರುವುದರಿಂದ ಪ್ರಾದೇಶಿಕ ಪಕ್ಷಗಳ ಬಲ ಹೆಚ್ಚುತ್ತಿದೆ. ವಿರೋಧವು ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ಪ್ರಜಾಪ್ರಭುತ್ವವನ್ನು ಕಾಪಾಡಿಕೊಳ್ಳಲು ದೇಶ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷವನ್ನು ಹೊಂದಿರಬೇಕು. ಹಾಗಾಗಿ ದೇಶದಲ್ಲಿ ಕಾಂಗ್ರೆಸ್ ಪಕ್ಷ ಇರಬೇಕು ಎಂದರು.

ಆಮ್ ಆದ್ಮಿ ಪಕ್ಷ ಮತ್ತು ಪ್ರಾದೇಶಿಕ ಪಕ್ಷಗಳು ಕಾಂಗ್ರೆಸ್​ನ ಸ್ಥಾನವನ್ನು ತುಂಬಲು ಶಕ್ತವಿಲ್ಲ. ಖಾಸಗಿ ಪತ್ರಿಕೆಯೊಂದರ ಪ್ರಶಸ್ತಿ ಸಮಾರಂಭದಲ್ಲಿ ಸಚಿವ ನಿತಿನ್ ಗಡ್ಕರಿ ಸಂದರ್ಶನವೊಂದರಲ್ಲಿ ಈ ಹೇಳಿಕೆ ನೀಡಿದ್ದಾರೆ.

ಬಿಜೆಪಿ-ಶಿವಸೇನೆ ಮೈತ್ರಿ ಬಗ್ಗೆ ಗಡ್ಕರಿ ಪ್ರತಿಕ್ರಿಯೆ: ಇದೇ ಸಂದರ್ಶನದಲ್ಲಿ ನಿತಿನ್ ಗಡ್ಕರಿ ಅವರಿಗೆ ಬಿಜೆಪಿ ಮತ್ತು ಶಿವಸೇನೆ ನಡುವಿನ ಅಂತರದ ಬಗ್ಗೆ ಮತ್ತು ನೀವು ಈಗ ಎರಡು ಪಕ್ಷಗಳ ನಡುವೆ ಸೇತುವೆಯನ್ನು ನಿರ್ಮಿಸುತ್ತೀರಾ ಎಂದು ಕೇಳಲಾಯಿತು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಗಡ್ಕರಿ, ನಾನು ಪ್ರಸ್ತುತ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಮಿಸುತ್ತಿದ್ದೇನೆ. ನಾವು ರಾಷ್ಟ್ರೀಯ ರಾಜಕೀಯದತ್ತ ಗಮನಹರಿಸುತ್ತಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: ಭಯೋತ್ಪಾದನೆಗೆ ಹಣಕಾಸು ಆರೋಪ : ಮಾನವ ಹಕ್ಕುಗಳ ಕಾರ್ಯಕರ್ತ ಖುರ್ರಂ ಪರ್ವೇಜ್ ನಿವಾಸದ ಮೇಲೆ ಎನ್​ಐಎ ರೇಡ್

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.