ಚೆನ್ನೈ(ತಮಿಳುನಾಡು): ತಮಿಳುನಾಡಿನ ವಿವಿಧ ಜಿಲ್ಲೆಗಳಲ್ಲಿ ಸ್ಥಳೀಯ ಚುನಾವಣೆ ನಡೆಯುತ್ತಿದ್ದು, ಅದರ ತಯಾರಿಗಾಗಿ ನಡೆಯುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯೊಂದರಲ್ಲಿ ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ.
ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಸ್ಥಳೀಯ ಚುನಾವಣೆ ತಯಾರಿಗಾಗಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಆಯೋಜನೆ ಮಾಡಿತ್ತು. ಇದರಲ್ಲಿ ಕಾಂಗ್ರೆಸ್ ಸಂಸದ, ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅವರ ಮಗ ಕಾರ್ತಿ ಚಿದಂಬರಂ ಸಹ ಭಾಗಿಯಾಗಿದ್ದರು. ಸಭೆ ನಡೆಯುತ್ತಿದ್ದ ವೇಳೆ ಎರಡು ಗುಂಪುಗಳ ಮಧ್ಯೆ ಮಾತಿಗೆ ಮಾತು ಬೆಳೆದು ಪರಸ್ಪರ ಹೊಡೆದಾಡಿಕೊಂಡಿದ್ದು, ಕಚೇರಿಯಲ್ಲಿನ ಕುರ್ಚಿ ಎತ್ತಿ ಹೊರಗಡೆ ಒಗೆದಿದ್ದಾರೆ.
ಇದನ್ನೂ ಓದಿರಿ: ಮನಸೊಂದಿದ್ದರೆ ಮಾರ್ಗ.. ಮಾತನಾಡಲು, ಕೇಳಲು ಸಾಧ್ಯವಿಲ್ಲದ ಅಭ್ಯರ್ಥಿ UPSC ಪರೀಕ್ಷೆ ಪಾಸ್
ಈ ವೇಳೆ, ಘಟನಾ ಸ್ಥಳಕ್ಕಾಗಮಿಸಿರುವ ಪೊಲೀಸರು ಕಾರ್ಯಕರ್ತರನ್ನ ಹೊರಗೆ ಕಳುಹಿಸಿ, ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಎರಡು ಗುಂಪಿನ ಕಾರ್ಯಕರ್ತರು ಹೊಡೆದಾಡಿಕೊಂಡಿರುವ ವಿಡಿಯೋ ಮಾತ್ರ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ಒಬ್ಬರನ್ನೊಬ್ಬರು ಬೆನ್ನಟ್ಟಿ ಹೋಗಿ ಹೊಡೆದಿದ್ದಾರೆ.