ನವದೆಹಲಿ : ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ತೆಲಂಗಾಣ ಹೊರತುಪಡಿಸಿ ಇತರ ಮೂರು ರಾಜ್ಯಗಳಲ್ಲಿ ಸೋಲು ಕಂಡಿದೆ. ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದ್ದು, ಕಾಂಗ್ರೆಸ್ ತೀವ್ರ ಮುಖಭಂಗ ಅನುಭವಿಸಿದೆ. ಪಕ್ಷ ಪ್ರದರ್ಶನದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕ, ಸಂಸದ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ನಾವು ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿನ ಜನಾದೇಶವನ್ನು ವಿನಯದಿಂದ ಸ್ವೀಕರಿಸುತ್ತೇವೆ. ನಮ್ಮ ಸಿದ್ಧಾಂತದ ಹೋರಾಟವನ್ನು ಮುಂದುವರಿಸುತ್ತೇವೆ. ತೆಲಂಗಾಣ ಜನತೆಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ಪ್ರಜಲ ತೆಲಂಗಾಣ ಮಾಡುವ ಭರವಸೆಯನ್ನು ನಾವು ಖಂಡಿತವಾಗಿಯೂ ಈಡೇರಿಸುತ್ತೇವೆ. ಚುನಾವಣೆಗೆ ಶ್ರಮಿಸಿದ ಹಾಗೂ ಬೆಂಬಲಿಸಿದ ಎಲ್ಲಾ ಕಾರ್ಯಕರ್ತರಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದು ತಿಳಿಸಿದ್ದಾರೆ.
-
I thank the people of Telangana for the mandate we have received from them.
— Mallikarjun Kharge (@kharge) December 3, 2023 " class="align-text-top noRightClick twitterSection" data="
I also thank all those who voted for us in Chhattisgarh, Madhya Pradesh and Rajasthan. Our performance in these three states have no doubt been disappointing, but with determination, we reaffirm our…
">I thank the people of Telangana for the mandate we have received from them.
— Mallikarjun Kharge (@kharge) December 3, 2023
I also thank all those who voted for us in Chhattisgarh, Madhya Pradesh and Rajasthan. Our performance in these three states have no doubt been disappointing, but with determination, we reaffirm our…I thank the people of Telangana for the mandate we have received from them.
— Mallikarjun Kharge (@kharge) December 3, 2023
I also thank all those who voted for us in Chhattisgarh, Madhya Pradesh and Rajasthan. Our performance in these three states have no doubt been disappointing, but with determination, we reaffirm our…
ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ತೆಲಂಗಾಣ ಜನತೆಯಿಂದ ಜನಾದೇಶ ಪಡೆದಿರುವುದಕ್ಕೆ ಧನ್ಯವಾದ ಅರ್ಪಿಸುತ್ತೇನೆ. ಜೊತೆಗೆ ಛತ್ತೀಸ್‌ಗಢ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ನಮಗೆ ಮತ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಈ ಮೂರು ರಾಜ್ಯಗಳಲ್ಲಿ ನಮ್ಮ ಸಾಧನೆ ನಿರಾಶದಾಯಕವಾಗಿರುವುದರಲ್ಲಿ ಸಂದೇಹವಿಲ್ಲ. ಆದರೆ ನಮ್ಮ ಅದೇ ಸಂಕಲ್ಪದೊಂದಿಗೆ, ಮತ್ತೆ ಈ ಮೂರು ರಾಜ್ಯಗಳಲ್ಲಿ ನಮ್ಮನ್ನು ಪುನರ್ ನಿರ್ಮಿಸಲು ಮತ್ತು ಪುನರುಜ್ಜೀವನಗೊಳಿಸುವ ನಮ್ಮ ಬಲವಾದ ಸಂಕಲ್ಪದೊಂದಿಗೆ ಮುನ್ನಡೆಯುತ್ತೇವೆ.
ಈ ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷವು ಭರ್ಜರಿ ಪ್ರಚಾರವನ್ನು ನಡೆಸಿತ್ತು. ನಮ್ಮ ಲಕ್ಷಾಂತರ ಕಾರ್ಯಕರ್ತರ ಶ್ರಮವನ್ನು ನಾನು ಗುರುತಿಸುತ್ತೇನೆ ಮತ್ತು ಪ್ರಶಂಸಿಸುತ್ತೇನೆ. ನಾವು ನಮ್ಮ ತಾತ್ಕಾಲಿಕ ಹಿನ್ನಡೆಗಳನ್ನು ನಿವಾರಿಸಿಕೊಂಡು ಇಂಡಿಯಾ ಒಕ್ಕೂಟದ ಪಕ್ಷಗಳೊಂದಿಗೆ ಮುಂಬರುವ ಲೋಕಸಭೆ ಚುನಾವಣೆಗೆ ಸಂಪೂರ್ಣ ಸಿದ್ಧತೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.
-
मध्य प्रदेश, छत्तीसगढ़ और राजस्थान का जनादेश हम विनम्रतापूर्वक स्वीकार करते हैं - विचारधारा की लड़ाई जारी रहेगी।
— Rahul Gandhi (@RahulGandhi) December 3, 2023 " class="align-text-top noRightClick twitterSection" data="
तेलंगाना के लोगों को मेरा बहुत धन्यवाद - प्रजालु तेलंगाना बनाने का वादा हम ज़रूर पूरा करेंगे।
सभी कार्यकर्ताओं को उनकी मेहनत और समर्थन के लिए दिल से शुक्रिया।
">मध्य प्रदेश, छत्तीसगढ़ और राजस्थान का जनादेश हम विनम्रतापूर्वक स्वीकार करते हैं - विचारधारा की लड़ाई जारी रहेगी।
— Rahul Gandhi (@RahulGandhi) December 3, 2023
तेलंगाना के लोगों को मेरा बहुत धन्यवाद - प्रजालु तेलंगाना बनाने का वादा हम ज़रूर पूरा करेंगे।
सभी कार्यकर्ताओं को उनकी मेहनत और समर्थन के लिए दिल से शुक्रिया।मध्य प्रदेश, छत्तीसगढ़ और राजस्थान का जनादेश हम विनम्रतापूर्वक स्वीकार करते हैं - विचारधारा की लड़ाई जारी रहेगी।
— Rahul Gandhi (@RahulGandhi) December 3, 2023
तेलंगाना के लोगों को मेरा बहुत धन्यवाद - प्रजालु तेलंगाना बनाने का वादा हम ज़रूर पूरा करेंगे।
सभी कार्यकर्ताओं को उनकी मेहनत और समर्थन के लिए दिल से शुक्रिया।
ಕಾಂಗ್ರೆಸ್ ಪಕ್ಷವು ತೆಲಂಗಾಣದಲ್ಲಿ ಭರ್ಜರಿ ಜಯ ಸಾಧಿಸಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷ 64 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಆಡಳಿತರೂಢ ಬಿಆರ್ಎಸ್ 39 ಸ್ಥಾನಕ್ಕೆ ಕುಸಿದಿದೆ. ಬಿಜೆಪಿ 9 ಸ್ಥಾನ ಮತ್ತು ಎಐಎಂಐಎಂ 7 ಸ್ಥಾನ, ಇತರರು 1 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ತನ್ನ ಆಡಳಿತದ ಹಿಡಿತದಲ್ಲಿದ್ದ ರಾಜಸ್ಥಾನ ಹಾಗೂ ಛತ್ತೀಸ್‌ಗಢ ರಾಜ್ಯಗಳನ್ನು ಈ ಚುನಾವಣೆಯಲ್ಲಿ ಕಳೆದುಕೊಂಡಿದೆ.
ಇದನ್ನೂ ಓದಿ : ತೆಲಂಗಾಣದಲ್ಲಿ ಬಿಆರ್ಎಸ್ ಹಿನ್ನಡೆ ಬಗ್ಗೆ ನಿರಾಶೆ; ಕಾಂಗ್ರೆಸ್ಗೆ ಅಭಿನಂದಿಸಿದ ಕೆಟಿಆರ್