ಮಣಿಪುರ: ಮಾರ್ಚ್ 10 ರಂದು ನಡೆಯಲಿರುವ ಮತ ಎಣಿಕೆ ಮುನ್ನ ಮಣಿಪುರದಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಒಟ್ಟಿಗೆ ಇರಿಸಲು ತಂತ್ರ ರೂಪಿಸುತ್ತಿದೆ. ಪಕ್ಷದ ಹಿರಿಯ ನಾಯಕರೊಬ್ಬರು ಅನಾಮಧೇಯತೆಯ ಷರತ್ತಿನ ಮೇಲೆ ಈ ವಿಷಯ ತಿಳಿಸಿದ್ದಾರೆ. ಇನ್ನು ಕೆಲವು ಹಿರಿಯ ಎಐಸಿಸಿ ನಾಯಕರು ಬುಧವಾರ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಮಾರ್ಚ್ 10 ರಂದು ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ಬಿಜೆಪಿಯಿಂದ ಅಭ್ಯರ್ಥಿಗಳ ಬೇಟೆಯನ್ನು ತಡೆಯಲು ಈ ಕ್ರಮವನ್ನು ಪ್ರಾರಂಭಿಸಲಾಗಿದೆ. 2017 ರವರೆಗೆ ಸತತ ಮೂರು ಅವಧಿಗೆ ಕಾಂಗ್ರೆಸ್ನ ಇಬೋಬಿ ಸಿಂಗ್ ಮಣಿಪುರ ರಾಜ್ಯವನ್ನು ಆಳಿದ್ದರು. ಬಿಜೆಪಿ ಪಕ್ಷವು 2017 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಮಣಿಪುರದ ಪಟ್ಟಕ್ಕೆ ಏರಿದೆ. ಈ ವರ್ಷ ಬಿಜೆಪಿ ಪಕ್ಷ ಮಣಿಪುರದ 60 ವಿಧಾನಸಭಾ ಸ್ಥಾನಗಳಲ್ಲಿ 53 ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು.
ಓದಿ: ಆರ್ಥಿಕ ನಿರ್ಬಂಧ ಬಳಿಕ ಮತ್ತೊಂದು ಶಾಕ್; ರಷ್ಯಾದಿಂದ ತೈಲ, ಅನಿಲ ಆಮದಿಗೆ ಅಮೆರಿಕ ನಿಷೇಧ
ಕಳೆದ ವರ್ಷ ಅಸ್ಸೋಂನಲ್ಲಿ ನಡೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿಯೂ ಕಾಂಗ್ರೆಸ್ ಪಕ್ಷವು ಇದೇ ತಂತ್ರವನ್ನು ಅನುಸರಿಸಿತ್ತು. ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್) ಜೊತೆ ಮೈತ್ರಿ ಮಾಡಿಕೊಂಡು ಅಸ್ಸೋಂ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಪಕ್ಷವು ಬಿಜೆಪಿಯಿಂದ ಅಭ್ಯರ್ಥಿಗಳನ್ನು ತಮ್ಮ ವಶಕ್ಕೆ ಪಡೆಯುವುದನ್ನು ತಪ್ಪಿಸಲು ಮತ ಎಣಿಕೆಗೆ ಮುಂಚಿತವಾಗಿ ಕಾಂಗ್ರೆಸ್ ಮತ್ತು ಎಐಯುಡಿಎಫ್ ಅಭ್ಯರ್ಥಿಗಳನ್ನು ರಾಜಸ್ಥಾನಕ್ಕೆ ಸ್ಥಳಾಂತರಿಸಿತ್ತು. ಅದೇ ಯೋಜನೆ ಮಣಿಪುರದಲ್ಲಿ ಈ ಬಾರಿ ನಡೆಯುತ್ತಿದೆ.