ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಪಕ್ಷದ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದು, ಪ್ರತಿಸ್ಪರ್ಧಿಯಾಗಿದ್ದ ಶಶಿ ತರೂರ್ ಅಭಿನಂದನೆ ಸಲ್ಲಿಸಿದರು.
-
Called on our new President-elect Mallikarjun @kharge to congratulate him & offer him my full co-operation. @incIndia has been strengthened by our contest. pic.twitter.com/fwfk41T93q
— Shashi Tharoor (@ShashiTharoor) October 19, 2022 " class="align-text-top noRightClick twitterSection" data="
">Called on our new President-elect Mallikarjun @kharge to congratulate him & offer him my full co-operation. @incIndia has been strengthened by our contest. pic.twitter.com/fwfk41T93q
— Shashi Tharoor (@ShashiTharoor) October 19, 2022Called on our new President-elect Mallikarjun @kharge to congratulate him & offer him my full co-operation. @incIndia has been strengthened by our contest. pic.twitter.com/fwfk41T93q
— Shashi Tharoor (@ShashiTharoor) October 19, 2022
ಚುನಾವಣಾ ಫಲಿತಾಂಶ ಹೊರ ಬರುತ್ತಿದ್ದಂತೆ ನವದೆಹಲಿಯಲ್ಲಿರುವ ಖರ್ಗೆ ನಿವಾಸಕ್ಕೆ ತರೂರ್ ಆಗಮಿಸಿದರು. ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರಿಗೆ ಅಭಿನಂದನೆ ತಿಳಿಸಿದ ಅವರು, ಪಕ್ಷದ ಸಂಘಟನೆಯಲ್ಲಿ ಸಂಪೂರ್ಣ ಸಹಕಾರ ನೀಡುವುದಾಗಿಯೂ ಹೇಳಿದರು. ಇದೇ ವೇಳೆ, ಚುನಾವಣೆಯಲ್ಲಿ ಸಂಪೂರ್ಣವಾದ ಬೆಂಬಲ ಖರ್ಗೆ ಅವರಿಗೇ ದೊರೆತಿದೆ ಎಂದರು. ಜೊತೆಗೆ, ಖರ್ಗೆ ಅವರ ಕೈ ಮೇಲೆತ್ತಿ ಒಗ್ಗಟ್ಟು ಪ್ರದರ್ಶಿಸಿದರು. ಈ ಸಂದರ್ಭದ ಫೋಟೋಗಳನ್ನು ಶಶಿ ತರೂರ್ ತಮ್ಮ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಿದ್ದಾರೆ.
ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷ: ಪಕ್ಷ ನಿಷ್ಠೆ, ಹೋರಾಟ, ಪ್ರಾಮಾಣಿಕತೆಗೆ ಸಂದ ಗೌರವ