ನವದೆಹಲಿ : ಮುಂಬರಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಚರ್ಚಿಸಲು ನಾಳೆ ಸಂಜೆ ತಮ್ಮ ನಿವಾಸದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಕ್ಷದ ಕೇಂದ್ರ ಚುನಾವಣಾ ಸಮಿತಿ (CEC) ಸಭೆ ಕರೆದಿದ್ದಾರೆ.
ಉನ್ನತ ಮೂಲಗಳ ಪ್ರಕಾರ, ಪಕ್ಷವು 150 ವಿಧಾನಸಭಾ ಸ್ಥಾನಗಳಿಗೆ ಸಂಭಾವ್ಯ ಅಭ್ಯರ್ಥಿಗಳನ್ನು ಪಟ್ಟಿ ಮಾಡುತ್ತಿದೆ. ಈಗಾಗಲೇ ಕೆಲವು ಸ್ಥಾನಗಳಿಗೆ ಅಭ್ಯರ್ಥಿಗಳಿಗೆ ಪಕ್ಷದಿಂದ ಗ್ರೀನ್ ಸಿಗ್ನಲ್ ನೀಡಲಾಗಿದೆ. ಚುನಾವಣಾ ಸಮರಕ್ಕೆ ಸಿದ್ಧತೆಗಳನ್ನು ಆರಂಭಿಸಲು ಕೇಳಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ: ಯೋಗಿ ಸರ್ಕಾರವನ್ನು ಮತ್ತೆ ತರಾಟೆಗೆ ತೆಗೆದುಕೊಂಡ ವರುಣ್ ಗಾಂಧಿ
ಅ.26ಕ್ಕೆ PCC ಅಧ್ಯಕ್ಷರ ಸಭೆ
ಸದಸ್ಯತ್ವ ಅಭಿಯಾನ, 'ಜನ ಜಾಗರಣ ಅಭಿಯಾನ'ಕ್ಕೆ ಸಿದ್ಧತೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಗಳ ಕುರಿತು ಚರ್ಚಿಸಲು ಅಕ್ಟೋಬರ್ 26ರಂದು ಬೆಳಗ್ಗೆ 10 ಗಂಟೆಗೆ ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಉಸ್ತುವಾರಿಗಳು ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿ (PCC) ಅಧ್ಯಕ್ಷರ ಸಭೆಯನ್ನು ಸೋನಿಯಾ ಗಾಂಧಿ ಕರೆದಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.