ETV Bharat / bharat

ಸೋನಿಯಾ ಗಾಂಧಿ ಆರೋಗ್ಯದಲ್ಲಿ ಚೇತರಿಕೆ; ಗಂಗಾರಾಮ್​ ಆಸ್ಪತ್ರೆಯಿಂದ ಬಿಡುಗಡೆ - ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ

ಕೋವಿಡ್​ ನಂತರದ ಸಮಸ್ಯೆಗಳಿಗೆ ತುತ್ತಾಗಿದ್ದ ಕಾಂಗ್ರೆಸ್​​ ಅಧ್ಯಕ್ಷೆ ಸೋನಿಯಾ ಗಾಂಧಿ ಚೇತರಿಸಿಕೊಂಡಿದ್ದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಸೋನಿಯಾ ಗಾಂಧಿ ಆರೋಗ್ಯದಲ್ಲಿ ಚೇತರಿಕೆ
ಸೋನಿಯಾ ಗಾಂಧಿ ಆರೋಗ್ಯದಲ್ಲಿ ಚೇತರಿಕೆ
author img

By

Published : Jun 20, 2022, 6:57 PM IST

ನವದೆಹಲಿ: ಕೋವಿಡ್​ ಬಳಿಕದ ಸಮಸ್ಯೆಗೆ ತುತ್ತಾಗಿದ್ದ ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ವಿಶ್ರಾಂತಿ ಪಡೆಯಲು ವೈದ್ಯರು ಸೂಚನೆ ನೀಡಿದ್ದಾರೆ ಎಂದು ರಾಜ್ಯಸಭೆ ನೂತನ ಸದಸ್ಯ ಜೈರಾಂ ರಮೇಶ್​ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ಸೋನಿಯಾರನ್ನು ವಾರದ ಹಿಂದೆ ಸರ್​ ಗಂಗಾರಾಮ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರ ಕೆಳ ಶ್ವಾಸನಾಳದಲ್ಲಿ ಫಂಗಸ್​ ಸೋಂಕು ಕಾಣಿಸಿಕೊಂಡಿದ್ದು, ಅಗತ್ಯವಾದ ಎಲ್ಲ ರೀತಿಯ ಆರೋಗ್ಯ ತಪಾಸಣೆಗಳನ್ನು ಮಾಡಲಾಗಿದೆ.

ಕೊರೊನಾ ನಂತರದ ಆರೋಗ್ಯ ಸಮಸ್ಯೆಗಳು ಹಾಗೂ ಫಂಗಸ್​ ಸೋಂಕು ಎರಡಕ್ಕೂ ಸೂಕ್ತ ಚಿಕಿತ್ಸೆ ನೀಡಲಾಗಿದ್ದು, ಚೇತರಿಸಿಕೊಂಡ ಪರಿಣಾಮ ಸೋನಿಯಾರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಇನ್ನು ಕೆಲವು ದಿನಗಳು ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ ಎಂದು ಜೈರಾಮ್ ರಮೇಶ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: 'ಮೋದಿಗೆ ಹಿಟ್ಲರ್​ನಂತೆ ಸಾವು, ದೇಶದಲ್ಲಿ ರಕ್ತ ಚೆಲ್ಲಲಿದೆ': ಕಾಂಗ್ರೆಸ್​ ನಾಯಕರ ಟೀಕಾಪ್ರಹಾರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.