ನವದೆಹಲಿ: ದೇಶದಲ್ಲಿ ನಿರುದ್ಯೋಗ, ಬೆಲೆ ಏರಿಕೆ, ಜಿಎಸ್ಟಿ ಹೀಗೆ ಹಲವು ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಇಂದು ಕಪ್ಪು ಬಟ್ಟೆ ಧರಿಸಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಸಂಸದರು ಸಂಸತ್ ಭವನದಿಂದ ರಾಷ್ಟ್ರಪತಿ ಭವನದವರೆಗೆ ಮೆರವಣಿಗೆ ನಡೆಸಲು ಯತ್ನಿಸಿದರು. ಈ ಸಂದರ್ಭದಲ್ಲಿ ದೆಹಲಿ ಪೊಲೀಸರು ವಿಜಯ್ ಚೌಕ್ ಬಳಿ ಪ್ರತಿಭಟನಾಕಾರರನ್ನು ತಡೆದು ರಾಹುಲ್ ಗಾಂಧಿ ಸೇರಿದಂತೆ ಹಲವರನ್ನು ವಶಕ್ಕೆ ಪಡೆದರು.
ಪೊಲೀಸರು ಕೆಲ ಸಮಯದವರೆಗೆ ರಾಹುಲ್ ಗಾಂಧಿ ಅವರ ಮನವೊಲಿಸಲು ಪ್ರಯತ್ನಿಸಿದ್ದಾರೆ. ಆದರೆ ಅವರು ಮಾತು ಕೇಳದ ಹಿನ್ನೆಲೆಯಲ್ಲಿ ತಡೆದು ಕಿಂಗ್ಸ್ ವೇ ಪೊಲೀಸ್ ಶಿಬಿರಕ್ಕೆ ಬಸ್ಸಿನಲ್ಲಿ ಕರೆದೊಯ್ಯಲಾಗಿದೆ. ಬಂಧನಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, "ದೆಹಲಿ ಪೊಲೀಸರು ಕಾಂಗ್ರೆಸ್ ಸಂಸದರ ಮೇಲೆ ದೌರ್ಜನ್ಯ ನಡೆಸಿದ್ದಾರೆ. ನಾವು ಬೆಲೆ ಏರಿಕೆ ಮತ್ತು ನಿರುದ್ಯೋಗ ಸಮಸ್ಯೆಗಳ ಮೇಲೆ ಆಕ್ರೋಶ ವ್ಯಕ್ತಪಡಿಸಲು ಇಲ್ಲಿ ನಿಂತಿದ್ದೇವೆ. ಆದರೆ ಪೊಲೀಸರು ನಮಗೆ ಅವಕಾಶ ನೀಡಿಲ್ಲ. ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ" ಎಂದು ಆರೋಪಿಸಿದರು.
ಇದನ್ನೂ ಓದಿ: ಅ 20ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಜುಬೈರ್ಗೆ ಸಮನ್ಸ್ ಜಾರಿ
"ನಾನು ಹಲ್ಲೆಗೊಳಗಾಗಿದ್ದಕ್ಕೆ ನನಗೆ ಸಂತೋಷವಾಗಿದೆ. ಈ ಶಕ್ತಿಗಳನ್ನು ವಿರೋಧಿಸುವುದು, ಪ್ರಜಾಪ್ರಭುತ್ವವನ್ನು ರಕ್ಷಿಸುವುದು ಹಾಗು ಜನರ ಸಮಸ್ಯೆಗಳನ್ನು ಎತ್ತಿ ಹಿಡಿಯುವುದು ನಮ್ಮ ಕೆಲಸ" ಎಂದರು.