ETV Bharat / bharat

ಫಲಿತಾಂಶ ಹೊರ ಬೀಳುತ್ತಿರುವ ಬೆನ್ನಲ್ಲೇ ಪ್ರಧಾನ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಕೈ ಕಾರ್ಯಕರ್ತರು: ಯಾಕೆ ಗೊತ್ತಾ? - ಇವಿಎಂಗಳ ಅಸಮರ್ಪಕ ಕಾರ್ಯ ನಿರ್ವಹಣೆ

ಉತ್ತರ ಪ್ರದೇಶ, ಪಂಜಾಬ್‌, ಮಣಿಪುರ್‌, ಗೋವಾ, ಉತ್ತರಾಖಂಡ್‌ ವಿಧಾನಸಭೆ ಚುನಾವಣೆ ಹೊರ ಬೀಳುತ್ತಿರುವ ಬೆನ್ನಲ್ಲೇ ಕಾಂಗ್ರೆಸ್​ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪ್ರಧಾನ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ, ಇವಿಎಂಗಳಲ್ಲಿ ಉಂಟಾದ ಗೊಂದಲವೇ ಪಕ್ಷದ ಸೋಲಿಗೆ ಎಂದು ಆರೋಪಿಸಿದರು.

ಕೈ ಕಾರ್ಯಕರ್ತರ ಪ್ರತಿಭಟನೆ
ಕೈ ಕಾರ್ಯಕರ್ತರ ಪ್ರತಿಭಟನೆ
author img

By

Published : Mar 10, 2022, 1:09 PM IST

ನವದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋಲು ಅನುಭವಿದ ಬೆನ್ನಲ್ಲೇ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪ್ರಧಾನ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ, ಇವಿಎಂಗಳ ಅಸಮರ್ಪಕ ಕಾರ್ಯ ನಿರ್ವಹಣೆಯೇ ಪಕ್ಷದ ಸೋಲಿಗೆ ಕಾರಣ ಎಂದು ಆರೋಪಿಸಿದರು.

ಈಟಿವಿ ಭಾರತದೊಂದಿಗೆ ಮಾತನಾಡಿದ ಕಾಂಗ್ರೆಸ್ ಮುಖಂಡ ಜಗದೀಶ್ ಶರ್ಮಾ, ದೇಶಾದ್ಯಂತ ಜನರು ಸಂಕಷ್ಟದಲ್ಲಿದ್ದಾರೆ, ನಮ್ಮ ಸೈನಿಕರು ಹುತಾತ್ಮರಾಗುತ್ತಿದ್ದಾರೆ, ಆರ್ಥಿಕತೆ ಕುಸಿಯುತ್ತಿದೆ, ಬೆಲೆ ಏರಿಕೆಯಿಂದ ಸಾಮಾನ್ಯ ಜನ ಕಂಗೆಟ್ಟಿದ್ದಾರೆ. ಆದರೆ, ಬಿಜೆಪಿ 300 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುವುದಾಗಿ ಹೇಳಿಕೊಳ್ಳುತ್ತಿದೆ. ಹಾಗಾಗಿ, ಅದರ ಹಿಂದಿನ ಕಾರಣವನ್ನು ನಾವು ಮರುಚಿಂತನೆ ಮಾಡಬೇಕಾಗಿದೆ ಎಂದು ನಾನು ಭಾವಿಸುತ್ತೇನೆ ಎಂದು ಒತ್ತಾಯಿಸಿದರು.

ಮತ್ತೊಂದೆಡೆ ಪಂಜಾಬ್‌ನ ಕಾಂಗ್ರೆಸ್ ಸಂಸದ ಜಸ್ಬೀರ್ ಸಿಂಗ್​​​ ಗಿಲ್ ತಮ್ಮ ಪಕ್ಷದ ನಾಯಕರ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಹರೀಶ್ ಚೌಧರಿ ಮತ್ತು ರಾಜ್ಯದ ಸ್ಕ್ರೀನಿಂಗ್ ಕಮಿಟಿ ಮುಖ್ಯಸ್ಥ ಅಜಯ್ ಮಾಕನ್ ಅವರೇ ಪಕ್ಷದ ಸೋಲಿಗೆ ಕಾರಣ ಎಂದು ದೂಷಿಸಿದ್ದಾರೆ.

  • Infighting, indiscipline, tickets for notes,workers disenchantment,inflated ego & arrogance of leaders have mauled Congress in Punjab

    — Jasbir Singh Gill MP (@JasbirGillKSMP) March 10, 2022 " class="align-text-top noRightClick twitterSection" data=" ">

ಈ ಕುರಿತು ಟ್ವೀಟ್​ ಮಾಡಿರುವ ಅವರು, ಪಕ್ಷದ ಅಂತಃಕಲಹ, ಅಶಿಸ್ತು, ಟಿಕೆಟ್‌ ಹಂಚಿಕೆಯಲ್ಲಾದ ತಪ್ಪು ನಿರ್ಧಾರ, ಕಾರ್ಮಿಕರ ನಿರಾಶೆ ಮತ್ತು ನಾಯಕರ ದುರಹಂಕಾರವೇ ಪಂಜಾಬ್‌ನಲ್ಲಿ ಕಾಂಗ್ರೆಸ್ ಸೋಲುವಂತೆ ಮಾಡಿದೆ" ಎಂದು ಹೇಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.