ETV Bharat / bharat

UP Polls: ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

UP Assembly election-2022: ಉತ್ತರ ಪ್ರದೇಶದಲ್ಲಿ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿ 50 ಮಂದಿ ಮಹಿಳಾ ಅಭ್ಯರ್ಥಿಗಳನ್ನು ಘೋಷಿಸಿದ್ದ ಕಾಂಗ್ರೆಸ್, ಇದೀಗ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

congress released second list of 41 candidates in Uttar Pradesh
UP Polls: ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
author img

By

Published : Jan 20, 2022, 12:45 PM IST

ಲಖನೌ(ಉತ್ತರಪ್ರದೇಶ): ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಉತ್ತರ ಪ್ರದೇಶದಲ್ಲಿ ಭಾರಿ ಸಿದ್ಧತೆ ಕೈಗೊಂಡಿದ್ದು, ವಿವಿಧ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿರುವ ಸುಮಾರು 41 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಎರಡನೇ ಪಟ್ಟಿಯಲ್ಲಿ 16 ಮಹಿಳಾ ಅಭ್ಯರ್ಥಿಗಳಿದ್ದಾರೆ. ಕೆಲವು ದಿನಗಳ ಹಿಂದೆ ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ 125 ಅಭ್ಯರ್ಥಿಗಳನ್ನು ಘೋಷಿಸಿದ್ದು, ಅದರಲ್ಲಿ 50 ಮಹಿಳಾ ಅಭ್ಯರ್ಥಿಗಳಿದ್ದರು.

ಈ ಮೊದಲು ಉತ್ತರ ಪ್ರದೇಶದಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಶೇಕಡಾ 40ರಷ್ಟು ಕ್ಷೇತ್ರಗಳನ್ನು ನೀಡುವುದಾಗಿ ಭರವಸೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಕ್ಷೇತ್ರಗಳನ್ನು ನೀಡುತ್ತಿದೆ.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯು ಫೆಬ್ರವರಿ 10ರಿಂದ ಏಳು ಹಂತಗಳಲ್ಲಿ ನಡೆಯಲಿದ್ದು, ಮಾರ್ಚ್ 7ರಂದು ಕೊನೆಗೊಳ್ಳಲಿದೆ. ಮಾರ್ಚ್ 10ರಂದು ಚುನಾವಣೆಯ ಫಲಿತಾಂಶ ಹೊರಬೀಳಲಿದೆ.

ಇದನ್ನೂ ಓದಿ: ಕಳ್ಳಭಟ್ಟಿ ದುರಂತದಲ್ಲಿ ಏಳು ಜನ ಸಾವು.. ಎಸ್​ಐಟಿ ರಚಿಸಿದ ರಾಜ್ಯ ಸರ್ಕಾರ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.