ETV Bharat / bharat

ಮುಂದಿನ ವಾರ ರಾಜಸ್ಥಾನ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ - Rajasthan Cabinet expansion

ಕ್ಯಾಬಿನೆಟ್ ಪುನರ್​ರಚನೆ, ಪಕ್ಷದ ಸಂಘಟನೆಯ ಜಿಲ್ಲಾ ಮುಖ್ಯಸ್ಥರ ನೇಮಕ ಕುರಿತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರೊಂದಿಗೆ ಚರ್ಚೆ ನಡೆಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಸ್ಥೆ) ಕೆ.ಸಿ.ವೇಣುಗೋಪಾಲ್ ಮತ್ತು ರಾಜಸ್ಥಾನದ ಉಸ್ತುವಾರಿ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಇಲ್ಲಿಗೆ ಆಗಮಿಸುತ್ತಿದ್ದಾರೆ.

ಮುಂದಿನ ವಾರ ರಾಜಸ್ಥಾನ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ

author img

By

Published : Jul 24, 2021, 9:29 PM IST

ಜೈಪುರ: ಕಾಂಗ್ರೆಸ್ ನೇತೃತ್ವದ ರಾಜಸ್ಥಾನ ಸರ್ಕಾರವು ಮುಂದಿನ ವಾರ ಕ್ಯಾಬಿನೆಟ್ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕ್ಯಾಬಿನೆಟ್ ಪುನರ್​ರಚನೆ, ಪಕ್ಷದ ಸಂಘಟನೆಯ ಜಿಲ್ಲಾ ಮುಖ್ಯಸ್ಥರ ನೇಮಕ ಕುರಿತು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರೊಂದಿಗೆ ಚರ್ಚೆ ನಡೆಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಸ್ಥೆ) ಕೆ.ಸಿ.ವೇಣುಗೋಪಾಲ್ ಮತ್ತು ರಾಜಸ್ಥಾನದ ಉಸ್ತುವಾರಿ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಶನಿವಾರ ರಾತ್ರಿ ಇಲ್ಲಿಗೆ ಆಗಮಿಸುತ್ತಿದ್ದಾರೆ. ವೇಣುಗೋಪಾಲ್ ರಾಜಸ್ಥಾನದ ರಾಜ್ಯಸಭಾ ಸದಸ್ಯರೂ ಆಗಿದ್ದಾರೆ.

ಗೆಹ್ಲೋಟ್ ಅವರೊಂದಿಗಿನ ನಾಯಕರ ಸಭೆ ತಡರಾತ್ರಿ ಮುಖ್ಯಮಂತ್ರಿಯವರ ನಿವಾಸದಲ್ಲಿ ನಡೆಯುವ ಸಾಧ್ಯತೆ ಇದೆ. ಪಂಜಾಬ್ ನಂತರ, ಪಕ್ಷದ ಹೈಕಮಾಂಡ್ ತನ್ನ ಗಮನವನ್ನು ರಾಜಸ್ಥಾನಕ್ಕೆ ವರ್ಗಾಯಿಸಿದೆ. ಅಲ್ಲಿ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ನೇತೃತ್ವದ ಗುಂಪಿನಲ್ಲಿ ಅಸಮಾಧಾನದ ವರದಿಗಳು ಬಂದ ನಂತರ ಕ್ಯಾಬಿನೆಟ್ ವಿಸ್ತರಣೆ ಮತ್ತು ರಾಜಕೀಯ ನೇಮಕಾತಿಗಳ ಬೇಡಿಕೆಗಳಿಗೆ ಪುಷ್ಠಿ ಸಿಕ್ಕಿತು.

ಪ್ರಸ್ತುತ, ಮುಖ್ಯಮಂತ್ರಿ ಸೇರಿದಂತೆ ಸಚಿವರ ಪರಿಷತ್ತಿನಲ್ಲಿ 21 ಸದಸ್ಯರಿದ್ದು, 9 ಸ್ಥಾನಗಳು ಖಾಲಿ ಇವೆ. ರಾಜಸ್ಥಾನ ಸರ್ಕಾರ ಗರಿಷ್ಠ 30 ಮಂತ್ರಿಗಳನ್ನು ಹೊಂದುವ ಅವಕಾಶವಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.