ETV Bharat / bharat

ಯುಪಿ ಚುನಾವಣೆಯಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಎಲ್ಲ 403 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ: ಪ್ರಿಯಾಂಕಾ ಗಾಂಧಿ - Priyanka Gandhi

2022 ರ ಉತ್ತರ ಪ್ರದೇಶ ಚುನಾವಣೆಯಲ್ಲಿ ಪಕ್ಷವು ಎಲ್ಲ 403 ಸ್ಥಾನಗಳಲ್ಲಿ ಸ್ವಂತವಾಗಿ ಸ್ಪರ್ಧಿಸುತ್ತದೆ ಮತ್ತು ಚುನಾವಣಾ ಯುದ್ಧದಲ್ಲಿ ವಿಜಯಶಾಲಿಯಾಗಲಿದ್ದೇವೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

ಪ್ರಿಯಾಂಕಾ ಗಾಂಧಿ
ಪ್ರಿಯಾಂಕಾ ಗಾಂಧಿ
author img

By

Published : Nov 15, 2021, 7:01 AM IST

ಬುಲಂದ್‌ಶಹರ್: 2022ರ ಉತ್ತರಪ್ರದೇಶ ಚುನಾವಣೆಯಲ್ಲಿ (Uttar Pradesh election) ಕಾಂಗ್ರೆಸ್ ಎಲ್ಲಾ 403 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಚುನಾವಣಾ ಕದನದಲ್ಲಿ ಗೆಲುವು ಸಾಧಿಸಲಿದೆ ಎಂದು ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ(Priyanka Gandhi) ಹೇಳಿದ್ದಾರೆ.

ಅನೂಪ್‌ಶಹರ್‌ನಲ್ಲಿ ನಡೆದ ಪ್ರತಿಜ್ಞಾ ಸಮ್ಮೇಳನದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಯಾವುದೇ ರಾಜಕೀಯ ಪಕ್ಷದೊಂದಿಗೆ ಮೈತ್ರಿಯನ್ನು ತಳ್ಳಿಹಾಕಿದ ಅವರು, 2017 ರ ಉನ್ನಾವೋ ಅತ್ಯಾಚಾರ ಪ್ರಕರಣ ಮತ್ತು ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಬಹುಜನ ಸಮಾಜ ಪಕ್ಷ (ಎಸ್‌ಪಿ) ನಾಯಕರು ಎಲ್ಲಿಯೂ ಕಾಣಿಸಲಿಲ್ಲ. ಆದರೆ, ಕಾಂಗ್ರೆಸ್ ಮಾತ್ರ ಜನರಿಗಾಗಿ ಹೋರಾಡುತ್ತಿದೆ ಎಂದು ಹೇಳಿದರು.

ಮುಂದುವರೆದು ಮಾತನಾಡಿದ ಅವರು, ಪಕ್ಷಕ್ಕೆ ಉತ್ತರ ಪ್ರದೇಶ ಚುನಾವಣೆಯ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದರು ಹಾಗೆ ಇದನ್ನು 'ಮಾಡು ಇಲ್ಲವೇ ಮಡಿ'ಎಂದು ಕರೆದರು. ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವ ಮೂಲಕ ಮಾತ್ರ ಚುನಾವಣಾ ಸ್ಪರ್ಧೆಯನ್ನು ಗೆಲ್ಲಲು ಸಾಧ್ಯ ಎಂದ ಅವರು, ಬೂತ್ ಸಮಿತಿಗಳನ್ನು ಬಲಪಡಿಸಲು ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು.

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರಬೇಕು ಮತ್ತು ಪಕ್ಷದ ಎಲ್ಲ ಚಟುವಟಿಕೆಗಳನ್ನು ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಬೇಕು ಎಂದ ಅವರು, ಆಡಳಿತಾರೂಢ ಬಿಜೆಪಿ ವಿರುದ್ಧ ವ್ಯಂಗ್ಯವಾಡಿದರು. ಕೇಸರಿ ಪಕ್ಷಕ್ಕೆ ಸ್ವಾತಂತ್ರ್ಯ ಚಳವಳಿಯ ಬಗ್ಗೆ ಗೌರವವಿಲ್ಲ, ಏಕೆಂದರೆ ಅದರ ನಾಯಕರು ದೇಶದ ಸ್ವಾತಂತ್ರ್ಯಕ್ಕಾಗಿ ರಕ್ತ ಮತ್ತು ಬೆವರು ಸುರಿಸಲಿಲ್ಲ ಎಂದಿದ್ದಾರೆ.

ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಭಾಯಿ ಪಟೇಲ್ ಮತ್ತು ಬಿ ಆರ್ ಅಂಬೇಡ್ಕರ್ (Mahatma Gandhi, Jawaharlal Nehru, Sardar Vallabhbhai Patel and BR Ambedkar) ಅವರಂತಹ ನಾಯಕರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು. ಕಾಂಗ್ರೆಸ್ ಕೇವಲ ಅಭಿವೃದ್ಧಿಯನ್ನು ತಂದಿಲ್ಲ. ಆದರೆ, ಸಹೋದರತ್ವ ಮತ್ತು ಸಾಮರಸ್ಯವನ್ನು ಉತ್ತೇಜಿಸಿದೆ ಎಂದು ಹೇಳಿದರು.

ಹೆಚ್ಚುತ್ತಿರುವ ಇಂಧನ ಬೆಲೆಗಳ ಬಗ್ಗೆ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, 70 ವರ್ಷಗಳ ಕಾಲ ಕಾಂಗ್ರೆಸ್ ಇಂಧನ ಬೆಲೆಗಳು ಲೀಟರ್‌ಗೆ 70 ರೂ.ಗಿಂತ ಹೆಚ್ಚಾಗದಂತೆ ನೋಡಿಕೊಂಡಿದೆ. ಆದಾಗ್ಯೂ, ಕಳೆದ ಏಳು ವರ್ಷಗಳಲ್ಲಿ, ಬಿಜೆಪಿ ಸರ್ಕಾರವು ಇದನ್ನು ನಿರಾಸೆಗೊಳಿಸಿದೆ, ಇದರಿಂದಾಗಿ ಬೆಲೆಗಳು ಲೀಟರ್‌ಗೆ 100 ರೂ.ಏರಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.