ETV Bharat / bharat

ಪಂಜಾಬ್​ ವಿಧಾನಸಭೆ ಚುನಾವಣೆ: 'ಒಂದು ಕುಟುಂಬಕ್ಕೆ ಒಂದೇ ಟಿಕೆಟ್​' ನೀಡಲು ಕಾಂಗ್ರೆಸ್​ ನಿರ್ಧಾರ

author img

By

Published : Dec 23, 2021, 4:53 PM IST

ಮುಂದಿನ ವರ್ಷ ನಡೆಯುವ ಪಂಜಾಬ್​ ವಿಧಾನಸಭೆ ಚುನಾವಣೆಯ ಸಿದ್ಧತೆಯಲ್ಲಿರುವ ಕಾಂಗ್ರೆಸ್​ 'ಒಂದು ಕುಟುಂಬಕ್ಕೆ ಒಂದೇ ಟಿಕೆಟ್​' ನಿಯಮವನ್ನು ಅನುಸರಿಸಲು ಮುಂದಾಗಿದೆ.

congress
ಕಾಂಗ್ರೆಸ್​ ನಿರ್ಧಾರ

ನವದೆಹಲಿ: ಮುಂದಿನ ವರ್ಷ ನಡೆಯುವ ಪಂಜಾಬ್​ ವಿಧಾನಸಭೆ ಚುನಾವಣೆಯ ಸಿದ್ಧತೆಯಲ್ಲಿರುವ ಕಾಂಗ್ರೆಸ್​ 'ಒಂದು ಕುಟುಂಬಕ್ಕೆ ಒಂದೇ ಟಿಕೆಟ್​' ನಿಯಮವನ್ನು ಅನುಸರಿಸಲು ಮುಂದಾಗಿದೆ. ವಂಶ ರಾಜಕಾರಣದ ಅಪವಾದದಿಂದ ತಪ್ಪಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್​ ಪಂಜಾಬ್​ನಲ್ಲಿ ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಟಿಕೆಟ್​ ನೀಡುವ ನಿಯಮ ಜಾರಿಗೆ ದೆಹಲಿಯಲ್ಲಿ ನಡೆದ ಕಾಂಗ್ರೆಸ್​ ಸ್ಕ್ರೀನಿಂಗ್ ಸಭೆಯಲ್ಲಿ ನಿರ್ಧರಿಸಲಾಗಿದೆ.

ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಪಂಜಾಬ್​ ಉಸ್ತುವಾರಿ ಹರೀಶ್ ಚೌಧರಿ, ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಪಂಜಾಬ್​ನಲ್ಲಿ ಒಂದು ಕುಟುಂಬದಿಂದ ಒಬ್ಬರಿಗೆ ಮಾತ್ರ ಟಿಕೆಟ್ ನೀಡುವ ಬಗ್ಗೆ ನಿರ್ಧರಿಸಲಾಗಿದೆ. ಈ ಬಗ್ಗೆ ಎಲ್ಲರೊಂದಿಗೆ ಸಮಾಲೋಚಿಸಲಾಗುವುದು ಎಂದು ತಿಳಿಸಿದರು.

ಅಲ್ಲದೇ, ಸಭೆಯಲ್ಲಿ 117 ಸ್ಥಾನಗಳ ಅಭ್ಯರ್ಥಿಗಳ ಬಗ್ಗೆ ವಿವರವಾದ ಚರ್ಚೆ ನಡೆಸಲಾಯಿತು. ಶೀಘ್ರವೇ ಇನ್ನೊಂದು ಸಭೆ ನಡೆಸಿ ಕಾಂಗ್ರೆಸ್​ ಹುರಿಯಾಳುಗಳ ಪಟ್ಟಿ ಅಂತಿಮಗೊಳಿಸಲಾಗುವುದು ಎಂದರು.

ಇದನ್ನೂ ಓದಿ: ಬಿಜೆಪಿ ಹಣ ಲೂಟಿ ಮಾಡಿದೆ, ಅಯೋಧ್ಯಾ ಭೂ ಹಗರಣದಲ್ಲಿ ಸುಪ್ರೀಂ ತನಿಖೆ ಆಗಬೇಕು: ಪ್ರಿಯಾಂಕಾ ಗಾಂಧಿ

ಅಜಯ್ ಮಾಕನ್ ನೇತೃತ್ವದಲ್ಲಿ ಸ್ಕ್ರೀನಿಂಗ್ ಕಮಿಟಿ ಸಭೆ ನಡೆದಿದ್ದು, ಅವರ ಜೊತೆಗೆ ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಹರೀಶ್ ಚೌಧರಿ, ಮುಖ್ಯಮಂತ್ರಿ ಚರಣ್​ಜಿತ್ ಸಿಂಗ್ ಚನ್ನಿ, ಪಂಜಾಬ್ ಕಾಂಗ್ರೆಸ್​ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಮತ್ತು ಮಾಜಿ ಮುಖ್ಯಸ್ಥ ಸುನೀಲ್ ಜಾಖರ್ ಕೂಡ ಸಭೆಯಲ್ಲಿ ಉಪಸ್ಥಿತರಿದ್ದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.