ETV Bharat / bharat

ರಾಹುಲ್ ಗಾಂಧಿ ಅನರ್ಹತೆ ಖಂಡಿಸಿ ದೇಶಾದ್ಯಂತ ಕಾಂಗ್ರೆಸ್ ಸತ್ಯಾಗ್ರಹ - ಒಂದು ದಿನದ ಸತ್ಯಾಗ್ರಹ

ಲೋಕಸಭಾ ಸದಸ್ಯತ್ವದಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ಇಂದು ಒಂದು ದಿನದ ಸತ್ಯಾಗ್ರಹ ನಡೆಸುತ್ತಿದೆ.

congress
ಸತ್ಯಾಗ್ರಹ
author img

By

Published : Mar 26, 2023, 9:43 AM IST

Updated : Mar 26, 2023, 11:16 AM IST

ರಾಜ್‌ಘಾಟ್‌ನಲ್ಲಿ ಸತ್ಯಾಗ್ರಹ ನಡೆಸುತ್ತಿರುವ ಕಾಂಗ್ರೆಸ್​ ನಾಯಕರು

ನವದೆಹಲಿ : ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಇಂದು ಎಲ್ಲಾ ರಾಜ್ಯಗಳು ಮತ್ತು ಜಿಲ್ಲಾ ಕೇಂದ್ರಗಳಲ್ಲಿನ ಗಾಂಧಿ ಪ್ರತಿಮೆಗಳ ಮುಂದೆ ಅಹೋರಾತ್ರಿ ಸತ್ಯಾಗ್ರಹ ನಡೆಸುತ್ತಿದೆ. ಬೆಳಗ್ಗೆ 10 ಗಂಟೆಗೆ ಆರಂಭವಾಗಿರುವ ಸತ್ಯಾಗ್ರಹ ಸಂಜೆ 5 ಗಂಟೆಗೆ ಮುಕ್ತಾಯವಾಗಲಿದೆ. ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಜೈರಾಮ್ ರಮೇಶ್, ಕೆ.ಸಿ.ವೇಣುಗೋಪಾಲ್ ಸೇರಿದಂತೆ ಇತರೆ ನಾಯಕರು ರಾಷ್ಟ್ರ ರಾಜಧಾನಿಯ ರಾಜ್‌ಘಾಟ್‌ನಲ್ಲಿ ಸತ್ಯಾಗ್ರಹದಲ್ಲಿ ಭಾಗಿಯಾಗಿದ್ದಾರೆ.

ಇದನ್ನೂ ಓದಿ : ಲೋಕಸಭೆಯಿಂದ ಅನರ್ಹಗೊಂಡ ಬಳಿಕ ರಾಹುಲ್ ಗಾಂಧಿ ಮೊದಲ ಮಾಧ್ಯಮಗೋಷ್ಟಿ

ಸಂಕಲ್ಪ ಸತ್ಯಾಗ್ರಹ ನಡೆಯುತ್ತಿರುವ ಸ್ಥಳಕ್ಕೆ ತೆರಳುವ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, "ಬಿಜೆಪಿ ರಾಹುಲ್ ಗಾಂಧಿಗೆ ಮಾತನಾಡಲು ಬಿಡುತ್ತಿಲ್ಲ. ರಾಹುಲ್ ಗಾಂಧಿಯವರು ರಾಷ್ಟ್ರಕ್ಕಾಗಿ ಮತ್ತು ಸಾರ್ವಜನಿಕರ ಹಕ್ಕಿಗಾಗಿ ಹೋರಾಡುತ್ತಿದ್ದಾರೆ. ನಾವು ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆ" ಎಂದರು.

ಕಾಂಗ್ರೆಸ್ ಹೇಳಿಕೆ: "ರಾಹುಲ್ ಗಾಂಧಿ ಒಬ್ಬಂಟಿಯಲ್ಲ. ಲಕ್ಷಾಂತರ ಕಾಂಗ್ರೆಸ್ಸಿಗರು ಮತ್ತು ಜನರು ಅವರೊಂದಿಗೆ ಸತ್ಯ ಮತ್ತು ನ್ಯಾಯಕ್ಕಾಗಿ ಹೋರಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿಗಳು ಭಾನುವಾರ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಎಲ್ಲಾ ರಾಜ್ಯ ಮತ್ತು ಜಿಲ್ಲಾ ಕೇಂದ್ರಗಳಲ್ಲಿನ ಗಾಂಧಿ ಪ್ರತಿಮೆಗಳ ಮುಂದೆ ಒಂದು ದಿನದ ಸತ್ಯಾಗ್ರಹ ಆಯೋಜಿಸಲು ತಿಳಿಸಲಾಗಿದೆ" ಎಂದು ಕಾಂಗ್ರೆಸ್ ಹೇಳಿದೆ.

ಇದನ್ನೂ ಓದಿ : ನನ್ನನ್ನು ಅನರ್ಹಗೊಳಿಸಿ, ಜೈಲಿಗೆ ಹಾಕಿದರೂ ಕೂಡ ಪ್ರಶ್ನಿಸುವುದನ್ನು ನಿಲ್ಲಿಸುವುದಿಲ್ಲ: ರಾಹುಲ್​ ಗಾಂಧಿ

ಗುಜರಾತ್‌ನ ಸೂರತ್‌ನ ನ್ಯಾಯಾಲಯವು 2019ರ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ರಾಹುಲ್​ ಗಾಂಧಿಯನ್ನು ದೋಷಿ ಎಂದು ಘೋಷಿಸಿ ಎರಡು ವರ್ಷಗಳ ಜೈಲು ಶಿಕ್ಷೆ ಘೋಷಿಸಿದ ಒಂದು ದಿನದ ಬಳಿಕ ಅಂದ್ರೆ ಶುಕ್ರವಾರ (ಮಾರ್ಚ್​ 24 ರಂದು) ಲೋಕಸಭೆಯಿಂದ ಅನರ್ಹಗೊಳಿಸಿ ಆದೇಶ ಹೊರಡಿಸಲಾಗಿತ್ತು. ನಾಲ್ಕು ಬಾರಿ ಸಂಸದರಾಗಿರುವ ರಾಹುಲ್​ ಗಾಂಧಿ (52) ಅವರ ಅನರ್ಹತೆಯ ತೀರ್ಪನ್ನು ಉನ್ನತ ನ್ಯಾಯಾಲಯವು ವಜಾ ಮಾಡದಿದ್ದರೆ ರಾಹುಲ್ ಮುಂದಿನ 8 ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ.

ಇದನ್ನೂ ಓದಿ : ವೀರ್ ಸಾವರ್ಕರ್​ರಂತೆ ನಾನು ಕ್ಷಮೆ ಕೇಳುವುದಿಲ್ಲ : ರಾಹುಲ್ ಗಾಂಧಿ ಗರಂ

ಲೋಕಸಭಾ ಸದಸ್ಯರಾಗಿ ಅನರ್ಹಗೊಂಡ ಬಳಿಕ ನಿನ್ನೆ ಮೊದಲ ಬಾರಿಗೆ ದೆಹಲಿಯ ಎಐಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ರಾಹುಲ್ ಗಾಂಧಿ, ಗೌತಮ್ ಅದಾನಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದರು. "ನಾನು ದೇಶದ ಪ್ರಜಾಪ್ರಭುತ್ವಕ್ಕಾಗಿ ಹೋರಾಡುತ್ತಿದ್ದೇನೆ, ಯಾರಿಗೂ ಹೆದರುವುದಿಲ್ಲ. ಅದಾನಿ ವಿಷಯವನ್ನು ಮುಂಬರುವ ದಿನಗಳಲ್ಲಿ ಸಂಸತ್ತಿನಲ್ಲಿ ಮಾತನಾಡುತ್ತೇನೆ ಎಂಬುವುದನ್ನು ಅರಿತು ಪ್ರಧಾನಿ ನರೇಂದ್ರ ಮೋದಿ ಹೆದರಿದ್ದಾರೆ. ಹೀಗಾಗಿ ನನ್ನ ವಿರುದ್ಧ ಈ ಕ್ರಮ ತೆಗೆದುಕೊಂಡಿದ್ದಾರೆ" ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ : ಅನರ್ಹತೆಯಿಂದ ರಕ್ಷಿಸುವ ಸುಗ್ರೀವಾಜ್ಞೆ ಹರಿದು ಹಾಕಿದ್ದ ರಾಹುಲ್​ ಗಾಂಧಿ : ಇತಿಹಾಸ ನೆನಪಿಸಿದ ಅಣ್ಣಾಮಲೈ

ಇದನ್ನೂ ಓದಿ : ರಾಹುಲ್ ಗಾಂಧಿ ಸಂಸದ ಸ್ಥಾನದ ಅನರ್ಹತೆ ರಾಜಕೀಯ ಕುತಂತ್ರ : ಹೆಚ್ ವಿಶ್ವನಾಥ್

Last Updated : Mar 26, 2023, 11:16 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.