ETV Bharat / bharat

ಕೇಂದ್ರ ವಿತ್ತ ಸಚಿವೆಯೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು!

ಬಿಜೆಪಿ ನಾಯಕಿ ಹಾಗು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಹಿಮಾಚಲ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯಕರ್ತರು ಸೆಲ್ಫಿ ತೆಗೆದುಕೊಂಡಿದ್ದು ಕುತೂಹಲಕ್ಕೆ ಕಾರಣವಾಯಿತು.

l Congress Womens Wing Workers Take Selfies With Nirmala Sitharaman
ವಿತ್ತ ಸಚಿವೆಯೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು
author img

By

Published : Nov 11, 2022, 7:33 AM IST

ಶಿಮ್ಲಾ(ಹಿಮಾಚಲ ಪ್ರದೇಶ): ವಿಧಾನಸಭೆ ಚುನಾವಣೆಯ ಅಬ್ಬರದ ಪ್ರಚಾರದ ಕೊನೆಯ ದಿನವಾದ ಗುರುವಾರ ಶಿಮ್ಲಾದಲ್ಲಿ ಬಿಜೆಪಿ ನಾಯಕಿ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಕಾಂಗ್ರೆಸ್ ಮಹಿಳಾ ವಿಭಾಗದ ಸ್ಥಳೀಯ ಕಾರ್ಯಕರ್ತರು ಸೆಲ್ಫಿ ತೆಗೆದುಕೊಂಡಿದ್ದು ಗಮನ ಸೆಳೆಯಿತು.

ನ.12 ರಂದು ನಡೆಯುವ ಚುನಾವಣೆಯಲ್ಲಿ ಅಧಿಕಾರ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ನಿರ್ಮಲಾ ರಾಜ್ಯದ ರಾಜಧಾನಿಯಲ್ಲಿದ್ದರು. ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಬೆಂಗಾವಲು ಪಡೆ ಶಿಮ್ಲಾ ಕ್ಲಬ್ ಬಳಿ ಮಾಲ್ ರೋಡ್ ಮೂಲಕ ಹಾದು ಹೋಗುತ್ತಿದ್ದಾಗ ಕೈ ಕಾರ್ಯಕರ್ತರು ಕೇಂದ್ರ ಹಣಕಾಸು ಸಚಿವೆಯನ್ನು ನೋಡಿದರು.

ಆಗ ಜೊತೆಗಿದ್ದ ಬಿಜೆಪಿಯ ಮಾಧ್ಯಮ ಉಸ್ತುವಾರಿ ಕರಣ್ ನಂದಾ, ಕಾಂಗ್ರೆಸ್ ಕಾರ್ಯಕರ್ತರು ತಮ್ಮತ್ತ ಕೈ ಬೀಸುತ್ತಿರುವುದನ್ನು ಕಂಡು ವಿತ್ತ ಸಚಿವರಿಗೆ ವಿಚಾರ ತಿಳಿಸಿದರು. ನಿರ್ಮಲಾ ಸೀತಾರಾಮನ್ ತಮ್ಮ ಬೆಂಗಾವಲು ವಾಹನವನ್ನು ನಿಲ್ಲಿಸುವಂತೆ ಸೂಚಿಸಿದರು. ಬಳಿಕ ತಮ್ಮ ವಾಹನದಿಂದ ಇಳಿದು ಸೆಲ್ಫಿ ತೆಗೆದುಕೊಂಡರು.

ಇದನ್ನೂ ಓದಿ: ಹಿಮಾಚಲ ಚುನಾವಣೆಗೆ ಮೂರೇ ದಿನ ಬಾಕಿ: ಕಾಂಗ್ರೆಸ್​ನ 26 ನಾಯಕರು ಬಿಜೆಪಿ ಸೇರ್ಪಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.