ಶಿಮ್ಲಾ(ಹಿಮಾಚಲ ಪ್ರದೇಶ): ಹಿಮಾಚಲಪ್ರದೇಶದಲ್ಲಿ ಮತ್ತೆ ಅಧಿಕಾರ ಹಿಡಿಯುವ ಬಿಜೆಪಿ ಲೆಕ್ಕಾಚಾರ ಬುಡಮೇಲಾಗುವ ಸಾಧ್ಯತೆ ಹೆಚ್ಚಿದೆ. 39 ಸ್ಥಾನಗಳಲ್ಲಿ ಮುನ್ನುಗ್ಗುತ್ತಿರುವ ಕಾಂಗ್ರೆಸ್ ನಿಚ್ಚಳ ಬಹುಮತ ಸಾಧಿಸಲಿದೆ. ಸದ್ಯದ ಟ್ರೆಂಡ್ ಪ್ರಕಾರ ಬಿಜೆಪಿ 26 ಸ್ಥಾನಗಳಲ್ಲಿ ಮುಂದಿದ್ದರೆ, ಕಾಂಗ್ರೆಸ್ 15 ಗೆಲುವು ಸೇರಿ 24 ಕ್ಷೇತ್ರಗಳಲ್ಲಿ ಮುನ್ನಡೆ ಹೊಂದಿದೆ.
ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲಿದೆ. ಬಿಜೆಪಿಯ ಕುದುವೆ ವ್ಯಾಪಾರ ತಡೆಯಲಾಗುವುದು. ನಮ್ಮ ಪಕ್ಷ ಅಲ್ಲಿ ನಿಚ್ಚಳ ಬಹುಮತ ಪಡೆಯಲಿದೆ. ಗೆದ್ದ ಶಾಸಕರನ್ನು ಎಲ್ಲಿಗೂ ಕರೆದೊಯ್ಯುವುದಿಲ್ಲ. ಬಿಜೆಪಿಯಿಂದ ಅವರನ್ನು ದೂರ ಇಡಲಾಗುವುದು ಎಂದು ಹೇಳಿದರು.
ಬಿಜೆಪಿಯಿಂದ ಶಾಸಕರ ರಕ್ಷಣೆ: ಬಿಜೆಪಿ ಏನು ಬೇಕಾದರೂ ಮಾಡಬಹುದು. ಹೀಗಾಗಿ ನಾವು ಎಲ್ಲ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ಹಿಮಾಚಲದಿಂದ ಗೆದ್ದ ಶಾಸಕರನ್ನು ಸ್ಥಳಾಂತರಿಸುವ ಬಗ್ಗೆಯೂ ಯೋಚಿಸಲಾಗುವುದು ಎಂದು ಕಾಂಗ್ರೆಸ್ ನಾಯಕ ವಿಕ್ರಮಾದಿತ್ಯ ಸಿಂಗ್ ಮಾಧ್ಯಮಗಳಿಗೆ ಹೇಳಿಕೆ ನೀಡಿದರು.
ಕಾಂಗ್ರೆಸ್ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ. ಸರ್ಕಾರ 5 ವರ್ಷಗಳವರೆಗೆ ಆಡಳಿತ ನಡೆಸಲಿದೆ. ಪ್ರತಿಭಾ ವೀರಭದ್ರ ಸಿಂಗ್ ಅವರು ಮುಖ್ಯಮಂತ್ರಿ ಸ್ಥಾನದ ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದಾರೆ ವಿಕ್ರಮಾದಿತ್ಯ ಸಿಂಗ್ ಹೇಳಿದರು.
ಕಾರ್ಯಕರ್ತರಿಂದ ಸಂಭ್ರಮಾಚರಣೆ: ಹಿಮಾಚಲದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದು, ಇದು ಕಾರ್ಯಕರ್ತರ ಸಂತಸಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಶಿಮ್ಲಾದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಾಚರಣೆ ಮಾಡುತ್ತಿದ್ದಾರೆ.
ಓದಿ: 158 ಸ್ಥಾನಗಳಲ್ಲಿ ಮುನ್ನಡೆ..149 ಸ್ಥಾನ ಗೆಲುವಿನ ಸಾರ್ವಕಾಲಿಕ ದಾಖಲೆ ಮುರಿಯುತ್ತಾ ಬಿಜೆಪಿ?