ನವದೆಹಲಿ: ಮುಂಬರುವ ಪಂಚರಾಜ್ಯ ಚುನಾವಣೆ ಹಾಗೂ ಪ್ರಸ್ತುತ ರಾಜಕೀಯ ಬೆಳವಣಿಗೆ ಜತೆಗೆ ಪಕ್ಷದ ಅಧ್ಯಕ್ಷರನ್ನು ಆಯ್ಕೆಮಾಡುವ ಚುನಾವಣೆ ವೇಳಾಪಟ್ಟಿಯನ್ನು ನಿರ್ಧರಿಸಲು ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆ ನಡೆಯಲಿದೆ.
ಸಭೆಯಲ್ಲಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಯ ದಿನಾಂಕದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿರುವ ಈ ಸಭೆ ಸಂಸತ್ತಿನ ಬಜೆಟ್ ಅಧಿವೇಶನ ಪ್ರಾರಂಭವಾಗುವ ಒಂದು ವಾರದ ಮೊದಲು ನಡೆಯುತ್ತಿದೆ ಮತ್ತು ಅಧಿವೇಶನದಲ್ಲಿ ಪಕ್ಷವು ಎತ್ತುವ ವಿಷಯಗಳ ಬಗ್ಗೆ ಚರ್ಚೆ ನಡೆಸುವ ನಿರೀಕ್ಷೆಯಿದೆ. ಸಭೆಯಲ್ಲಿ ರೈತರ ಪ್ರತಿಭಟನೆ ಮತ್ತು 'ಸೋರಿಕೆಯಾದ ಮೆಸೇಜ್ಗಳ' ಕುರಿತು ಚರ್ಚಿಸುವ ನಿರೀಕ್ಷೆಯಿದೆ. ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರ ಆಂದೋಲನ ಕುರಿತು ನಿರ್ಣಯವನ್ನು ಅಂಗೀಕರಿಸುವ ಸಾಧ್ಯತೆಯಿದೆ.
ಓದಿ: ಕೋವಿಡ್ -19 ಇನಾಕ್ಯುಲೇಷನ್ ಡ್ರೈವ್ ಲಸಿಕೆ, ಫಲಾನುಭವಿಗಳೊಂದಿಗೆ ಮೋದಿ ಇಂದು ಸಂವಾದ!
ಕಾಂಗ್ರೆಸ್ ಕೇಂದ್ರ ಚುನಾವಣಾ ಪ್ರಾಧಿಕಾರವು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಚುನಾವಣೆಗೆ ಸಿದ್ಧ ಎಂದು ಟಿಪ್ಪಣಿ ಸಲ್ಲಿಸಿದ ನಂತರ ಸಿಡಬ್ಲ್ಯೂಸಿ ಸಭೆ ಕರೆಯಲಾಗಿದೆ.ಕಳೆದ ವರ್ಷ ಆಗಸ್ಟ್‌ನಲ್ಲಿ 23 ನಾಯಕರ ಗುಂಪು ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದು, ಆಂತರಿಕ ಚುನಾವಣೆಗಳನ್ನು ಬ್ಲಾಕ್‌ನಿಂದ ಪಕ್ಷದ ಮುಖ್ಯಸ್ಥರ ಮಟ್ಟಕ್ಕೆ ಮತ್ತು "ಪೂರ್ಣ ಸಮಯದ" ಸಕ್ರಿಯ ನಾಯಕತ್ವಕ್ಕೆ ಒತ್ತಾಯಿಸಿತ್ತು. ಅವರು ಸಿಡಬ್ಲ್ಯೂಸಿಗೆ ಚುನಾವಣೆ ನಡೆಸಬೇಕೆಂದು ಒತ್ತಾಯಿಸಿದ್ದರು. ಆರು ತಿಂಗಳೊಳಗೆ ಚುನಾವಣೆ ನಡೆಯಬೇಕು ಎಂದು ಸೋನಿಯಾ ಗಾಂಧಿ ಬಯಸಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ಇದರಲ್ಲಿ ಮಲ್ಲಿಕಾರ್ಜುನ್ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಅನೇಕರು ಭಾಗಿಯಾಗಲಿದ್ದಾರೆ.