ETV Bharat / bharat

ಸಂವಿಧಾನ ದಿನ: ಪೀಠಿಕೆ ಓದಿ ಸಂಸತ್‌ ಹಾಲ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಲಿರುವ ರಾಷ್ಟ್ರಪತಿ ಕೋವಿಂದ್‌ - ಪ್ರಧಾನಿ ನರೇಂದ್ರ ಮೋದಿ

Constitution Day today: 71ನೇ ಸಂವಿಧಾನ ದಿನದ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಇಂದು ರಾಷ್ಟ್ರ ರಾಜಧಾನಿಯ ಎರಡು ಪ್ರತ್ಯೇಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಸಂಸತ್‌ನ ಸೆಂಟ್ರಲ್‌ ಹಾಲ್‌ನಲ್ಲಿ ನಡೆಯಲಿರುವ ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಸಂಜೆ 5.30ಕ್ಕೆ ವಿಜ್ಞಾನ್‌ ಭವನದಲ್ಲಿನ ಕಾರ್ಯಕ್ರಮದಲ್ಲೂ ಉಪಸ್ಥಿತರಿರಲಿದ್ದಾರೆ.

Constitution Day today: History, celebrations, significance
ಸಂವಿಧಾನ ದಿನ: ಪೀಠಿಕೆ ಓದಿ ಸಂಸತ್‌ ಹಾಲ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಲಿರುವ ರಾಷ್ಟ್ರಪತಿ ಕೋವಿಂದ್‌
author img

By

Published : Nov 26, 2021, 9:51 AM IST

Updated : Nov 26, 2021, 10:26 AM IST

ನವದೆಹಲಿ: ಸರ್ವರಿಗೂ ಸಮಾನತೆ, ಮೂಲ ಹಕ್ಕುಗಳನ್ನು ನೀಡಿರುವ ಭಾರತ ಸಂವಿಧಾನ ದಿನ ಇಂದು. 71ನೇ ಸಂವಿಧಾನ ದಿನಾಚರಣೆ ಹಿನ್ನೆಲೆಯಲ್ಲಿ ಸಂಸತ್ತಿನ ಸೆಂಟ್ರಲ್‌ ಹಾಲ್‌ನಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಂವಿಧಾನದ ಪೀಠಿಕೆ ಓದುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

Constitution Day today: ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಶೇಷ ಸಭೆ ಉದ್ದೇಶಿಸಿ ಮಾತನಾಡಿದರೆ, ರಾಷ್ಟ್ರಪತಿ ಕೋವಿಂದ್ ಅವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮತ್ತೊಂದೆಡೆ ಸಂವಿಧಾನದ ಪೀಠಿಕೆ ಓದುವ ಅಧಿವೇಶನದ ಲೈವ್‌ನಲ್ಲಿ ದೇಶದ ಜನ ಭಾಗವಹಿಸಲಿದ್ದಾರೆ.

ರಾಷ್ಟ್ರಪತಿ ಕೋವಿಂದ್ ಅವರು ಸಂಸತ್ ಭವನದ ಸೆಂಟ್ರಲ್ ಹಾಲ್‌ನಲ್ಲಿ ಸಂವಿಧಾನ ಸಭೆಯ ಚರ್ಚೆಯ ಡಿಜಿಟಲ್ ಆವೃತ್ತಿ ಬಿಡುಗಡೆ ಮಾಡಲಿದ್ದಾರೆ. ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಮತ್ತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಉಪಸ್ಥಿತರಿರಲಿದ್ದಾರೆ. ಪ್ರಧಾನಿ ಮೋದಿ ಅವರು ದೆಹಲಿಯ ವಿಜ್ಞಾನ ಭವನದಲ್ಲಿ ಎರಡು ದಿನಗಳ ಸಂವಿಧಾನ ದಿನಾಚರಣೆ ಉದ್ಘಾಟಿಸಲಿದ್ದಾರೆ ಎಂದು ಪ್ರಧಾನಿ ಕಚೇರಿ ಮೂಲಗಳು ತಿಳಿಸಿವೆ.

ಭಾರತಕ್ಕೆ ಸಂವಿಧಾನವೇ ಬಹುದೊಡ್ಡ ಬಲ. ನಮ್ಮ ಸಂವಿಧಾನ ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನು. ಸಂವಿಧಾನ ಜಾರಿಗೆ ಬಂದ ಮೇಲೆ ದೇಶದಲ್ಲಿ ಹೊಸ ಶಕೆ ಆರಂಭವಾಗಿದ್ದು, ಸಂವಿಧಾನದ ಮಹತ್ವದ ಬಗ್ಗೆ ಎಲ್ಲರಿಗೂ ಅರಿವು ಮೂಡಿಸುವುದು, ಸಂವಿಧಾನ ಶಿಲ್ಪಿ ಡಾ ಬಿ.ಆರ್ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವ ಜತೆಗೆ ಅವರ ಸಾಧನೆಯ ಜಾಗೃತಿ ಮೂಡಿಸುವುದು ಈ ದಿನದ ವಿಶೇಷತೆ.

1949ರ ನವೆಂಬರ್‌ 26 ರಂದು ಡಾ.ಬಿ.ಆರ್‌.ಅಂಬೇಡ್ಕರ್‌ ಬರೆದಿದ್ದ ಸಂವಿಧಾನವನ್ನು ಅಂಗೀಕರಿಸಲಾಯಿತು. ಇದರ ಅಂಗವಾಗಿಯೇ ನಾನಿಂದು ಸಂವಿಧಾನ ದಿನವನ್ನು ಆಚರಿಸಲಾಗುತ್ತದೆ. 1949ರ ನವೆಂಬರ್‌ 26 ರಂದು ಸಂವಿಧಾನ ಅಂಗೀಕಾರವಾಗಿದ್ದರೂ ಇದು ದೇಶದಲ್ಲಿ ಜಾರಿ ತಂದಿದ್ದ ಮಾತ್ರ 1956 ಜನವರಿ 26 ರಂದು. ಈ ದಿನವನ್ನು ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸುತ್ತೇವೆ.

ಇದನ್ನೂ ಓದಿ: ಸಂವಿಧಾನ ದಿನಾಚರಣೆಗೆ ಶುಭ ಕೋರಿದ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್​ವೈ

Last Updated : Nov 26, 2021, 10:26 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.