ETV Bharat / bharat

ಪ್ರಧಾನ ಮಂತ್ರಿ ಆವಾಸ್​ ಯೋಜನೆಯಡಿ 1.68 ಲಕ್ಷ ಮನೆಗಳ ನಿರ್ಮಾಣಕ್ಕೆ ಅನುಮೋದನೆ - PMAY(U)

ನಗರ ಪ್ರದೇಶಗಳಲ್ಲಿ 1,68,606 ಹೊಸ ಮನೆಗಳ ನಿರ್ಮಾಣಕ್ಕೆ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಅನುಮೋದನೆ ನೀಡಿದೆ.

PMAY(U)
ಪ್ರಧಾನ ಮಂತ್ರಿ ಆವಾಸ್​ ಯೋಜನೆಯಡಿ 1.68 ಲಕ್ಷ ಮನೆಗಳ ನಿರ್ಮಾಣಕ್ಕೆ ಅನುಮೋದನೆ
author img

By

Published : Jan 21, 2021, 1:57 PM IST

ನವದೆಹಲಿ: ಪ್ರಧಾನಮಂತ್ರಿ ಆವಾಸ್ ಯೋಜನೆ (PMAY) ಅಡಿ ನಗರ ಪ್ರದೇಶಗಳಲ್ಲಿ 1,68,606 ಹೊಸ ಮನೆಗಳ ನಿರ್ಮಾಣಕ್ಕೆ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಇಂದು ಅನುಮೋದನೆ ನೀಡಿದೆ.

ಇಂದು ನಡೆದ ಕೇಂದ್ರ ಮಂಜೂರಾತಿ ಮತ್ತು ಉಸ್ತುವಾರಿ ಸಮಿತಿಯ (ಸಿಎಸ್‌ಎಂಸಿ) 52ನೇ ಸಭೆಯಲ್ಲಿ ಮನೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದ್ದು, ಸಭೆಯಲ್ಲಿ 14 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಭಾಗವಹಿಸಿದ್ದವು.

ಈಗಾಗಲೇ 70 ಲಕ್ಷಕ್ಕೂ ಹೆಚ್ಚು ಮನೆಗಳ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, 41 ಲಕ್ಷಕ್ಕೂ ಹೆಚ್ಚು ಮನೆಗಳ ಕಾಮಗಾರಿ ಪೂರ್ಣಗೊಂಡಿವೆ. ಭೂಮಿ, ವಲಸೆ ಸೇರಿದಂತೆ ಕೆಲ ಸಮಸ್ಯೆಗಳಿಂದಾಗಿ ಯೋಜನೆಯ ಪರಿಷ್ಕರಣೆಗಾಗಿ ರಾಜ್ಯಗಳು ಪ್ರಸ್ತಾಪಗಳನ್ನು ಮಂಡಿಸಿದ್ದವು.

ಇದನ್ನೂ ಓದಿ: ಚಿನ್ನ ಕಳ್ಳಸಾಗಣೆ ಕೇಸ್​ನಲ್ಲಿ ಕೇರಳ ಸ್ಪೀಕರ್ ಹೆಸರು.. ಶ್ರೀರಾಮಕೃಷ್ಣನ್ ವಿರುದ್ಧ ನಿರ್ಣಯ ಮಂಡಿಸಿದ ಪ್ರತಿಪಕ್ಷ

ಸಭೆಯ ನೇತೃತ್ವ ವಹಿಸಿದ್ದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ದುರ್ಗಾ ಶಂಕರ್ ಮಿಶ್ರಾ, ಯೋಜನೆಯ ತ್ವರಿತ ಅನುಷ್ಠಾನಕ್ಕೆ ಕಾರ್ಯತಂತ್ರ ರೂಪಿಸಲು ರಾಜ್ಯಗಳಿಗೆ ಸೂಚಿಸಿದ್ದು, ಎಲ್ಲ ಮೂಲಸೌಕರ್ಯಗಳನ್ನು ಹೊಂದಿರುವ ಮನೆಗಳನ್ನು ಪೂರ್ಣಗೊಳಿಸುವತ್ತ ನಾವು ಸಾಗಬೇಕಾಗಿದೆ ಎಂದರು.

ನಿಗದಿತ ಸಮಯದೊಳಗೆ ದೇಶಾದ್ಯಂತ ಮನೆಗಳ ನಿರ್ಮಾಣ ಮಾಡುವ ಉದ್ದೇಶವನ್ನು ಕೇಂದ್ರದ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿ ಹೊಂದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.