ನವದೆಹಲಿ/ನೋಯ್ಡಾ: ಪಾಶ್ ಸೊಸೈಟಿಯ ಲಿಫ್ಟ್‌ನಲ್ಲಿ ನಾಯಿಯನ್ನು ಕರೆದೊಯ್ಯುವ ಕುರಿತು ನೋಯ್ಡಾದಲ್ಲಿ ಮತ್ತೊಮ್ಮೆ ವಿವಾದವೊಂದು ಬೆಳಕಿಗೆ ಬಂದಿದೆ. ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಮಹಿಳೆಯ ನಡುವಿನ ಜಗಳದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಿಳೆ ಮತ್ತು ನಿವೃತ್ತ ಐಎಎಸ್ ಅಧಿಕಾರಿಯ ನಡುವೆ ನಡೆದಿರುವ ಜಗಳ ವಿಡಿಯೋದಲ್ಲಿ ಕಾಣಬಹುದಾಗಿದೆ. ಅಷ್ಟೇ ಅಲ್ಲ ಸ್ವಲ್ಪ ಸಮಯದ ನಂತರ ಮಹಿಳೆಯ ಪತಿ ಸಹ ಜಗಳದ ಸ್ಥಳಕ್ಕೆ ಬಂದು ನಿವೃತ್ತ ಐಎಎಸ್ ಅಧಿಕಾರಿಗೆ ಥಳಿಸಿದ್ದಾರೆ. ದೆಹಲಿಯ ಪಾರ್ಕ್ಸ್ ಲಾರೆಟ್ ಸೊಸೈಟಿಯಲ್ಲಿ ಈ ಘಟನೆ ನಡೆದಿದೆ. ಆದರೆ ಈ ಘಟನೆಯ ನಂತರ ಎರಡೂ ಕಡೆಯವರು ಸಮಾಧಾನಗೊಂಡಿವೆ ಎಂದು ವರದಿಯಾಗಿದೆ.
ಮಾಹಿತಿಯ ಪ್ರಕಾರ, ಮಹಿಳೆ ತನ್ನೊಂದಿಗೆ ನಾಯಿಯನ್ನು ಲಿಫ್ಟ್‌ನಲ್ಲಿ ಕರೆದೊಯ್ಯಲು ಬಯಸಿದ್ದರು. ಆದರೆ ನಿವೃತ್ತ ಐಎಎಸ್ ಅಧಿಕಾರಿ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ನಾಯಿಯನ್ನು ಲಿಫ್ಟ್‌ನಲ್ಲಿ ಬಿಡುವುದಕ್ಕೆ ನಿವೃತ್ತ ಐಎಎಸ್ ಅಧಿಕಾರಿ ತೀವ್ರ ವಿರೋಧಿಸಿದರು. ಇದೇ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ಶುರುವಾಗಿದೆ. ವಾಗ್ವಾದದ ವೇಳೆ ನಿವೃತ್ತ ಐಎಎಸ್ ಅಧಿಕಾರಿ ತಮ್ಮ ಪಾಕೆಟ್ನಿಂದ ಮೊಬೈಲ್ ತೆಗೆದಿದ್ದಾರೆ. ಕೂಡಲೇ ಆ ಮಹಿಳೆ ಅವರಿಂದ ಮೊಬೈಲ್ ಕಸಿದುಕೊಂಡಿದ್ದಾರೆ. ಇದರಿಂದ ಕೋಪಗೊಂಡ ನಿವೃತ್ತ ಐಎಎಸ್ ಅಧಿಕಾರಿ ಮಹಿಳೆಗೆ ಕಪಾಳಮೋಕ್ಷ ಮಾಡಿದ್ದಾರೆ ಎಂಬ ಆರೋಪವಿದೆ.
ಮಹಿಳೆಗೆ ಕಪಾಳಮೋಕ್ಷ ಮಾಡಿದ ಬಳಿದ ಈ ವಿವಾದವನ್ನು ಮತ್ತಷ್ಟು ಹೆಚ್ಚಿದೆ. ಅಕ್ಕಪಕ್ಕದ ಜನ ಕೂಡ ಸ್ಥಳದಲ್ಲಿ ಜಮಾಯಿಸಿದರು. ಆಗ ಆ ಮಹಿಳೆಯ ಗಂಡನೂ ಸಹ ಅಲ್ಲಿಗೆ ಬಂದಿದ್ದಾರೆ. ಆಗ ಮಹಿಳೆ ತನ್ನ ಪತಿಯೊಂದಿಗೆ ಸೇರಿ ನಿವೃತ್ತ ಐಎಎಸ್‌ಗೆ ಕಪಾಳಮೋಕ್ಷ ಮಾಡಿದ್ದಾರೆ ಎಂಬ ಆರೋಪವೂ ಕೇಳಿ ಬಂದಿದೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ಕೊತ್ವಾಲಿ ಸೆಕ್ಟರ್ -39 ರ ಪೊಲೀಸ್ ತಂಡವು ಸ್ಥಳಕ್ಕೆ ದೌಡಾಯಿಸಿತು. ಬಳಿಕ ಪೊಲೀಸರು ಸೊಸೈಟಿಯಲ್ಲಿ ಅಳವಡಿಸಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದರು. ಈ ವೇಳೆ ಎರಡೂ ಕಡೆ ಮಾತಿನ ಚಕಮಕಿ, ಮಾರಾಮಾರಿ ನಡೆದಿರುವುದು ಬೆಳಕಿಗೆ ಬಂದಿತು. ಆದರೆ, ಈ ವಿಚಾರದಲ್ಲಿ ಉಭಯ ಪಕ್ಷಗಳು ಯಾವುದೇ ದೂರು ನೀಡಿಲ್ಲ. ತಮ್ಮ ತಮ್ಮಲ್ಲೇ ಸಮಸ್ಯೆಯನ್ನು ಬಗೆಹರಿಸಿಕೊಂಡಿದ್ದರಿಂದ ವಿಷಯ ಅಲ್ಲಿಗೆ ಮುಕ್ತಾಯಗೊಂಡಿದೆ. ಆದರೆ ಈ ಘಟನೆಗೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗ್ತಿದ್ದು, ಸಂಚಲನ ಮೂಡಿಸುತ್ತಿದೆ.
ಓದಿ: ಪೊಲೀಸ್ ಇಲಾಖೆಗೆ ಕಾನ್ಸ್ಟೇಬಲ್ನಿಂದ ವಿಶೇಷ ಬೆಲ್ಜಿಯಂ ತಳಿಯ ನಾಯಿ ಮರಿ ಉಡುಗೊರೆ