ಇಂದೋರ್ : ನಗರದ ಆಸ್ಪತ್ರೆಯೊಂದರಲ್ಲಿ ಎರಡು ಗುಂಪುಗಳು ಕಿತ್ತಾಡಿಕೊಂಡಿದ್ದು, ಈಗ ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗ್ತಿದೆ.
ಇಂದೋರ್ ನಗರದ ಚಿರಾಯು ಆಸ್ಪತ್ರೆಯಲ್ಲಿ ನಡೆದ ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸುತ್ತಿದೆ.
ಈ ಜಗಳಕ್ಕೆ ಕಾರಣ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ವ್ಯಕ್ತಿಯೊಬ್ಬ ಮಹಿಳೆಯರೆಂದು ನೋಡದೇ ಮನಸೋಯಿಚ್ಛೆ ಥಳಿಸಿದ್ದಾನೆ.
ಈ ಘಟನೆ ಇಂದೋರ್ನ ಚಂದನ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ವಿಷಯದಲ್ಲಿ ಪೊಲೀಸ್ ಅಧಿಕಾರಿಗಳು ಮೌನ ವಹಿಸುತ್ತಿದ್ದಾರೆ.
ಘಟನೆಯ ನಂತರ ಎರಡೂ ಗುಂಪಿನವರು ಪೊಲೀಸ್ ಠಾಣೆಗೆ ತೆರಳಿ ದೂರು ಸಲ್ಲಿಸಿದ್ದಾರೆ. ಆದರೆ, ಹಿರಿಯ ಅಧಿಕಾರಿಗಳು ಈ ಘಟನೆ ಬಗ್ಗೆ ಯಾವುದೇ ಮಾಹಿತಿ ನೀಡುತ್ತಿಲ್ಲ.