ನವದೆಹಲಿ: ಕಳೆದ 24 ಗಂಟೆಯಲ್ಲಿ 1,84,372 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಸೋಂಕಿನಿಂದ 1,027 ಮಂದಿ ಸಾವನ್ನಪ್ಪಿದ್ದಾರೆ. 82,339 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಈವರೆಗಿನ ಅಂಕಿಅಂಶ:
ದೇಶದಲ್ಲಿ ಈವರೆಗೆ ಒಟ್ಟು 1,38,73,825 ಕೊರೊನಾ ಪ್ರಕರಣಗಳು ದಾಖಲಾಗಿವೆ. 1,23,36,036 ಸೋಂಕಿತರು ಗುಣಮುಖರಾಗಿದ್ದಾರೆ. ಸುಮಾರು 1,72,085 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಪ್ರಸ್ತುತ ದೇಶದಲ್ಲಿ 13,65,704 ಸಕ್ರಿಯ ಕೋವಿಡ್ ಪ್ರಕರಣಗಳಿವೆ.
ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಲಾಕ್ಡೌನ್ನ ಬಹುತೇಕ ನಿಯಮ ಜಾರಿ... ಯಾವುದಕ್ಕೆ ಅನುಮತಿ, ಏನೆಲ್ಲಾ ನಿರ್ಬಂಧ!?
ಕೋವಿಡ್ ಪರೀಕ್ಷೆ:
ಏಪ್ರಿಲ್ 13 ರ ವರೆಗೆ 26,06,18,866 ಮಂದಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ನಿನ್ನೆ ಒಂದೇ ದಿನ 14,11,758 ಸ್ಯಾಂಪಲ್ಸ್ಗಳನ್ನು ಪರೀಕ್ಷೆ ಮಾಡಲಾಗಿದೆ ಎಂದು ICMR ತಿಳಿಸಿದೆ.
ಲಸಿಕೆ ವಿತರಣೆ:
ದೇಶಾದ್ಯಂತ ಇಲ್ಲಿಯವರೆಗೆ 11,11,79,578 ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ.
ಇದನ್ನೂ ಓದಿ: ವಿದೇಶಿ ಲಸಿಕೆಗಳಿಗೆ ತುರ್ತು ಅನುಮೋದನೆ: ಸರ್ಕಾರದ ಕ್ರಮ ಸ್ವಾಗತಿಸಿದ ಕಾಂಗ್ರೆಸ್