ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 1,31,968 ಹೊಸ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ. ಈ ಅವಧಿಯಲ್ಲಿ ಸಾವಿನ ಸಂಖ್ಯೆ ಹೆಚ್ಚಾಗಿದ್ದು 780 ಜನ ಸೋಂಕಿತರು ಬಲಿಯಾಗಿದ್ದಾರೆ. 61,899 ಸೋಂಕಿತರು ಕೋವಿಡ್‌ನಿಂದ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ವರದಿ ಮಾಡಿದೆ.
ದೇಶದಲ್ಲಿ ಈವರೆಗೆ ಒಟ್ಟು 1,30,60,542 ಕೊರೊನಾ ಪ್ರಕರಣಗಳು ದಾಖಲಾಗಿದ್ದು, 1,19,13,292 ಸೋಂಕಿತರು ಗುಣಮುಖರಾಗಿದ್ದಾರೆ, ಸುಮಾರು 1,67,642 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಪ್ರಸ್ತುತ ದೇಶದಲ್ಲಿ 9,79,608 ಸಕ್ರಿಯ ಕೋವಿಡ್ ಪ್ರಕರಣಗಳಿವೆ.
ಇದನ್ನೂ ಓದಿ: ಬೆಂಗಳೂರಲ್ಲಿ 6 ಸಾವಿರ ಕೊರೊನಾ ಸೋಂಕು ಪ್ರಕರಣ ಪತ್ತೆ!
ಕೋವಿಡ್ ಪರೀಕ್ಷೆ: ಏಪ್ರಿಲ್ 8 ರ ತನಕ 25,40,41,584 ಮಂದಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ನಿನ್ನೆ ಒಂದು ದಿನ 13,64,205 ಸ್ಯಾಂಪಲ್ಸ್ಗಳನ್ನು ಪರೀಕ್ಷೆ ಮಾಡಲಾಗಿದೆ ಎಂದು ICMR ತಿಳಿಸಿದೆ.
ಲಸಿಕೆ ವಿತರಣೆ: ದೇಶಾದ್ಯಂತ ಇಲ್ಲಿಯವರೆಗೆ 9,43,34,262 ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.