ಜೋಧಪುರ್ (ರಾಜಸ್ಥಾನ): ರಾಜಸ್ಥಾನದ ಜೋಧ್ಪುರದ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ)ಯ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಿಬ್ಬಂದಿ ಸೇರಿದಂತೆ ಸುಮಾರು 70 ಕೊರೊನಾ ಸೋಂಕು ದೃಢಪಟ್ಟಿದ್ದು, ಸದ್ಯ 60 ಸಕ್ರಿಯ ಪ್ರಕರಣಗಳಿವೆ.
ಈ ಕುರಿತು ಮಾಹಿತಿ ನೀಡಿದ ವೈದ್ಯಾಧಿಕಾರಿ ಪಿ.ಸಿಂಗ್, ಮಾರ್ಚ್ 11ರಂದು ಗುಜರಾತ್, ಜೈಪುರ ಮತ್ತು ಚಂಡೀಗಢದ ಬುಡಕಟ್ಟು ಗ್ರಾಮಗಳಿಂದ ಕೆಲ ಸೋಂಕಿತರು ಐಐಟಿ ಕಾಲೇಜಿಗೆ ಆಗಮಿಸಿದ್ದರು. ಆ ಬಳಿಕ ಕೋವಿಡ್ ಪ್ರಕರಣಗಳು ಹೆಚ್ಚಾಗತೊಡಗಿದವು. ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಿಬ್ಬಂದಿ ಸೇರಿದಂತೆ ಐಐಟಿಯ ಸುಮಾರು 70 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸದ್ಯ 60 ಸಕ್ರಿಯ ಪ್ರಕರಣಗಳಿವೆ.
ಅದರಲ್ಲಿ ಯಾವುದೇ ಗಂಭೀರ ಪ್ರಕರಣಗಳಿಲ್ಲ. ಕ್ಯಾಂಪಸ್‌ನಲ್ಲಿರುವ ಬ್ಲಾಕ್ ಜಿ3 ಅನ್ನು ಕಂಟೋನ್ಮೆಂಟ್ ವಲಯವೆಂದು ಘೋಷಿಸಲಾಗಿದೆ. ಗುಜರಾತ್, ಜೈಪುರ ಮತ್ತು ಚಂಡಿಗಢದಿಂದ ಬಂದ ವಿದ್ಯಾರ್ಥಿಗಳಲ್ಲೇ ಹೆಚ್ಚು ಕೊರೊನಾ ಸೋಂಕು ದೃಢಪಟ್ಟಿದೆ ಎಂದರು.
ಇನ್ನು, ಜೋಧ್ಪುರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ವೈದ್ಯಕೀಯ ಮತ್ತು ಪೊಲೀಸ್ ಇಲಾಖೆಗಳು ಸಾಕಷ್ಟು ಎಚ್ಚರ ವಹಿಸಿವೆ. ಕೋವಿಡ್ ಪರೀಕ್ಷೆ ಹೆಚ್ಚಿಸಲಾಗಿದ್ದು, ಹೊರ ರಾಜ್ಯಗಳಿಂದ ಬರುವವರಿಗೆ ಆರ್‌ಟಿಸಿಪಿಆರ್ ಪರೀಕ್ಷೆ ಕಡ್ಡಾಯವಾಗಿದೆ.
ಕುಟುಂಬ ಮತ್ತು ಆರೋಗ್ಯ ಕಲ್ಯಾಣ ಸಚಿವಾಲಯದ ಪ್ರಕಾರ, ರಾಜಸ್ಥಾನದಲ್ಲಿ ಕಳೆದ 24 ಗಂಟೆಗಳಲ್ಲಿ 1,254 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. ಸದ್ಯ 11,738 ಸಕ್ರಿಯ ಪ್ರಕರಣಗಳಿದ್ದು, ಸಾವಿನ ಸಂಖ್ಯೆ 2,827ಕ್ಕೆ ತಲುಪಿದೆ.
ಇದನ್ನೂ ಓದಿ: ಹುತಾತ್ಮ ಯೋಧರಿಗೆ ಅಂತಿಮ ನಮನ: ಮನಕಲಕುವ ಕುಟುಂಬಸ್ಥರ ರೋಧನ