ನವದೆಹಲಿ: ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 42,766 ಜನರಿಗೆ ಕೋವಿಡ್ ದೃಢಪಟ್ಟಿದೆ. ಒಂದೇ ದಿನ 45,254 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ದೇಶದಲ್ಲಿ ಈವರೆಗೆ 3,07,95,716 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೆ 2,99,33,538 ಮಂದಿ ಚೇತರಿಸಿಕೊಂಡಿದ್ದಾರೆ. ಕಳೆದ 24 ಗಂಟೆಯಲ್ಲಿ ಸೋಂಕಿಗೆ 1,206 ಮಂದಿ ಕೊನೆಯುಸಿರೆಳೆದಿದ್ದು, ಈವರೆಗೆ 4,07,145 ಮಂದಿ ಸೋಂಕಿತರು ಬಲಿಯಾಗಿದ್ದಾರೆ.
ದೇಶದಲ್ಲಿ ಒಟ್ಟು 4,55,033 ಸಕ್ರಿಯ ಪ್ರಕರಣಗಳಿವೆ. ಈವರೆಗೆ 42,90,41,970 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 19,55,225 ಜನರಿಗೆ ತಪಾಸಣೆ ಮಾಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ICMR) ಮಾಹಿತಿ ನೀಡಿದೆ.
ಇದನ್ನೂ ಓದಿ:ಲಾಮ್ಡ್ ರೂಪಾಂತರಿ ಭಾರತದಲ್ಲಿ ಪತ್ತೆಯಾಗಿಲ್ಲ: ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟನೆ