ETV Bharat / bharat

ದೇಶದಲ್ಲಿ ಹೊಸದಾಗಿ 18,815 ಕೋವಿಡ್‌ ಕೇಸ್ ಪತ್ತೆ, 38 ಸಾವು

ದೇಶದಲ್ಲಿ ಮಹಾಮಾರಿ ಕೋವಿಡ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಇಂದು ಕೊಂಚ ಇಳಿಕೆ ಕಂಡು ಬಂದಿದ್ದು, ಇಂದಿನ ಮಾಹಿತಿ ತಿಳಿಯೋಣ.

CORONA
CORONA
author img

By

Published : Jul 8, 2022, 10:11 AM IST

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 18,815 ಹೊಸ ಕೇಸ್​​​ಗಳು ದೃಢಪಟ್ಟಿವೆ. 38 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಶುಕ್ರವಾರಕ್ಕೆ ಹೋಲಿಸಿದರೆ ಶನಿವಾರ 115 ಹೊಸ ಕೊರೊನಾ ಸೋಂಕಿತ ಪ್ರಕರಣಗಳಲ್ಲಿ ಇಳಿಕೆ ಕಂಡುಬಂದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕಳೆದೊಂದು ದಿನದಲ್ಲಿ 15,899 ಜನರು ಕೋವಿಡ್​​ನಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್​​ ಆಗಿದ್ದಾರೆ. ಈವರೆಗೆ ಒಟ್ಟು 4,29,37,876 ಜನರು ಗುಣಮುಖರಾಗಿದ್ದಾರೆ. ಸದ್ಯಕ್ಕೆ ದೇಶದಲ್ಲಿ 1,22,335 ಸಕ್ರಿಯ ಪ್ರಕರಣಗಳಿವೆ. ಒಟ್ಟು ಸಾವಿನ ಸಂಖ್ಯೆ 5,25,343ಕ್ಕೆ ಏರಿಕೆಯಾಗಿದೆ.

ಪ್ರಸ್ತುತ ದೇಶದಲ್ಲಿ ಚೇತರಿಕೆಯ ಪ್ರಮಾಣವು ಪ್ರಸ್ತುತ 98.51% ರಷ್ಟಿದ್ದು, ದೈನಂದಿನ ಪಾಸಿಟಿವಿಟಿ ದರವು 4.96% ರಷ್ಟಿದೆ. ಸಕ್ರಿಯ ಪ್ರಕರಣಗಳ ದರ 0.28% ಇದೆ. ರಾಷ್ಟವ್ಯಾಪಿ ಕೋವಿಡ್​ ಲಸಿಕಾ ಅಭಿಯಾನದಡಿ ಈವರೆಗೆ 1,98,51,77,962 ಡೋಸ್​ ವ್ಯಾಕ್ಸಿನ್​ ನೀಡಲಾಗಿದ್ದು, ನಿನ್ನೆ 17,62,441 ಡೋಸ್ ಲಸಿಕೆ ನೀಡಲಾಗಿದೆ.

ಇದನ್ನೂ ಓದಿ: ದೇಶದಲ್ಲಿ 18,930 ಕೋವಿಡ್ ಸೋಂಕಿತರು ಪತ್ತೆ: ಒಮಿಕ್ರಾನ್ ಉಪತಳಿ ಆತಂಕ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.