ನವದೆಹಲಿ: ಭಾರತದಲ್ಲಿ ಕೋವಿಡ್ ಸೋಂಕಿತರ ಪ್ರಕರಣಗಳಲ್ಲಿ ಏರಿಕೆ ಕಂಡು ಬರುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 11,739 ಹೊಸ ಕೇಸ್ಗಳು ದೃಢಪಟ್ಟಿದ್ದು, 25 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಕಳೆದೊಂದು ದಿನದಲ್ಲಿ 10,917 ಮಂದಿ ಕೋವಿಡ್ನಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಒಟ್ಟು 4,27,72,398 ಜನರು ಗುಣಮುಖರಾಗಿದ್ದಾರೆ. ಸದ್ಯಕ್ಕೆ ದೇಶದಲ್ಲಿ 92,576 ಸಕ್ರಿಯ ಪ್ರಕರಣಗಳಿವೆ. ಒಟ್ಟು ಸಾವಿನ ಸಂಖ್ಯೆ 5,24,999 ಕ್ಕೆ ಏರಿಕೆಯಾಗಿದೆ. ಪ್ರಸ್ತುತ ಚೇತರಿಕೆಯ ಪ್ರಮಾಣವು ಪ್ರಸ್ತುತ ಶೇ 98.58 ರಷ್ಟಿದ್ದು, ಭಾರತದಲ್ಲಿ ವ್ಯಾಕ್ಸಿನೇಷನ್ ಡ್ರೈವ್ ಅಡಿ ಈವರೆಗೆ ಒಟ್ಟು197 ಕೋಟಿ ಲಸಿಕಾ ಡೋಸ್ ನೀಡುವ ಮೂಲಕ ಮೈಲಿಗಲ್ಲು ದಾಟಿದೆ.
ದೇಶದಲ್ಲಿ ಸಾಂಕ್ರಾಮಿಕ ರೋಗ ತಡೆಗಟ್ಟುವ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಮನ್ಸುಖ್ ಮಾಂಡವಿಯಾ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಮ್ಮ ಬಿಜೆಪಿ ಸರ್ಕಾರವು ಕೊರೊನಾ ವೈರಸ್ ತಡೆಗಟ್ಟುವಲ್ಲಿ ಯಶಸ್ವಿಯಾಗಿದೆ. ಸಾರ್ವಜನಿಕ ಆರೋಗ್ಯ ಸಮಸ್ಯೆಗಳನ್ನ ಗಮನದಲ್ಲಿಟ್ಟುಕೊಂಡು ಸರ್ಕಾರ ಹೊಸ ಕಾರ್ಯವಿಧಾನವನ್ನು ಅಭಿವೃದ್ಧಿಪಡಿಸುತ್ತಿದೆ ಎಂದರು.
ಇದನ್ನೂ ಓದಿ: ಭಾರತ-ಇಂಗ್ಲೆಂಡ್ ಟೆಸ್ಟ್‌ಗೂ ಮುನ್ನ ಕೋವಿಡ್‌ಗೆ ತುತ್ತಾದ ಕ್ಯಾಪ್ಟನ್ ರೋಹಿತ್ ಶರ್ಮಾ