ETV Bharat / bharat

ದೇಶದಲ್ಲಿ 18,930 ಕೋವಿಡ್ ಸೋಂಕಿತರು ಪತ್ತೆ: ಒಮಿಕ್ರಾನ್ ಉಪತಳಿ ಆತಂಕ

ದೇಶದಲ್ಲಿ ಮಹಾಮಾರಿ ಕೋವಿಡ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ.

Corona
Corona
author img

By

Published : Jul 7, 2022, 11:24 AM IST

ನವದೆಹಲಿ: ಭಾರತದಲ್ಲಿ ಮತ್ತೆ ಹೊಸ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡುಬರುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 18,930 ಹೊಸ ಕೇಸ್​​​ಗಳು ದೃಢಪಟ್ಟಿವೆ. 35 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಗುರುವಾರಕ್ಕೆ ಹೋಲಿಸಿದರೆ ಶುಕ್ರವಾರ 2,771 ಹೊಸ ಸೋಂಕು ಪ್ರಕರಣಗಳು ಹೆಚ್ಚಳವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕಳೆದೊಂದು ದಿನದಲ್ಲಿ 14,650 ಜನರು ಕೋವಿಡ್​​ನಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್​​ ಆಗಿದ್ದಾರೆ. ಈವರೆಗೆ ಒಟ್ಟು 4,29,21,977 ಜನರು ಗುಣಮುಖರಾಗಿದ್ದಾರೆ. ಸದ್ಯಕ್ಕೆ ದೇಶದಲ್ಲಿ 1,19,457 ಸಕ್ರಿಯ ಪ್ರಕರಣಗಳಿವೆ. ಒಟ್ಟು ಸಾವಿನ ಸಂಖ್ಯೆ 5,24,305ಕ್ಕೆ ಏರಿಕೆಯಾಗಿದೆ. ಪ್ರಸ್ತುತ ಸಕ್ರಿಯ ಪ್ರಕರಣಗಳ ದರ 0.27% ಇದೆ.

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಪ್ರಕಾರ, ಈವರೆಗೆ 86.53 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ ಕಳೆದ 24 ಗಂಟೆಗಳಲ್ಲಿ 4,38,005 ಮಂದಿಗೆ ಕೋವಿಡ್​ ಟೆಸ್ಟ್​ ಮಾಡಲಾಗಿದೆ. ಪ್ರಸ್ತುತ ಚೇತರಿಕೆಯ ಪ್ರಮಾಣವು ಪ್ರಸ್ತುತ 98.54 % ರಷ್ಟಿದ್ದು, ದೈನಂದಿನ ಪಾಸಿಟಿವಿಟಿ ದರವು 4.32% ರಷ್ಟಿದೆ. ವಾರದ ಪಾಸಿಟಿವಿಟಿ ದರ 3.86% ಇದೆ. ರಾಷ್ಟವ್ಯಾಪಿ ಕೋವಿಡ್​ ಲಸಿಕಾ ಅಭಿಯಾನದಡಿ ಈವರೆಗೆ 198.33 ಕೋಟಿ ಡೋಸ್​ ವ್ಯಾಕ್ಸಿನ್​ ನೀಡಲಾಗಿದೆ.

ಪ.ಬಂಗಾಳ ಕೊರೊನಾ ವರದಿ: ಪಶ್ಚಿಮ ಬಂಗಾಳದಲ್ಲಿ ನಿನ್ನೆ 2,352 ಹೊಸ ಕೊರೊನಾ ವೈರಸ್ ಪ್ರಕರಣಗಳು ದೃಢಪಟ್ಟಿದ್ದು, ಮೂರು ಮಂದಿ ಸಾವನ್ನಪ್ಪಿದ್ದಾರೆ. ದೈನಂದಿನ ಪಾಸಿಟಿವಿಟಿ ದರವು 16.24 % ಇದೆ. ಕಳೆದೊಂದು ದಿನ ರಾಜ್ಯದಲ್ಲಿ 1,03,955 ಲಸಿಕಾ ಡೋಸ್‌ಗಳನ್ನು ನೀಡಲಾಗಿದೆ. ದೇಶದಲ್ಲಿ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನಲ್ಲಿ ಹೆಚ್ಚು ಪ್ರಕರಣಗಳು ಕಂಡುಬಂದಿವೆ.

ಒಮಿಕ್ರಾನ್​ನ ಬಿಎ 2.75 ಉಪತಳಿ ಪತ್ತೆ: ಭಾರತದಲ್ಲಿ ಈ ಹಿಂದೆ ಕೋವಿಡ್ 19ನ ರೂಪಾಂತರಿ ವೈರಸ್ ಒಮಿಕ್ರಾನ್ ಪತ್ತೆಯಾಗಿತ್ತು.​ ಇದೀಗ ಒಮಿಕ್ರಾನ್​ನ ಉಪತಳಿ BA 2.75 ಪತ್ತೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಇದನ್ನೂ ಓದಿ: ಭಾರತದಲ್ಲಿ ಒಮಿಕ್ರಾನ್​ನ ಹೊಸ ತಳಿ ಬಿಎ 2.75 ಪತ್ತೆ: ವಿಶ್ವಸಂಸ್ಥೆ ಎಚ್ಚರಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.