ಶಾಂತಿಪುರ(ಪಶ್ಚಿಮ ಬಂಗಾಳ): ಮನೆಯಿಂದ ಓಡಿ ಹೋಗಿರುವ 22 ವರ್ಷದ ಯುವತಿಯೋರ್ವಳು 15 ವರ್ಷದ ಬಾಲಕನೊಂದಿಗೆ ಮದುವೆಯಾಗಿದ್ದಾಳೆ. ಪಶ್ಚಿಮ ಬಂಗಾಳದ ಶಾಂತಿಪುರದಲ್ಲಿ ಈ ಘಟನೆ ನಡೆದಿದ್ದು, ಈಗಾಗಲೇ ಇಬ್ಬರನ್ನು ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
15 ವರ್ಷದ ಬಾಲಕ ನಾಡಿಯಾದ ಕೃಷ್ಣನಗರ ಕೊಟ್ವಾಲಿ ಪೊಲೀಸ್ ಠಾಣಾ ಪ್ರದೇಶದವನು ಎಂದು ತಿಳಿದು ಬಂದಿದೆ. ಯುವತಿ ಜೊತೆ ಫೇಸ್ಬುಕ್ನಲ್ಲಿ ಪರಿಚಯವಾಗಿದ್ದನು ಎಂದು ತಿಳಿದು ಬಂದಿದೆ.
ಇದನ್ನೂ ಓದಿರಿ: ಮಹಾರಾಷ್ಟ್ರದಲ್ಲಿ ಕೋವಿಡ್ ಏರಿಕೆ: ಸಮಾರಂಭಗಳಿಗೆ 50 ಜನರಿಗೆ ಮಾತ್ರ ಅವಕಾಶ
ಡಿಸೆಂಬರ್ 25ರಂದು ಮನೆಯಿಂದ ಓಡಿ ಹೋಗಿರುವ ಈ ಜೋಡಿ ದೇವಸ್ಥಾನದಲ್ಲಿ ಮದುವೆ ಮಾಡಿಕೊಂಡಿದೆ. ತದನಂತರ ನಿನ್ನೆ ಲೋಕಲ್ ರೈಲಿನಲ್ಲಿ ಶಾಂತಿಪುರಕ್ಕೆ ಬರುತ್ತಿದ್ದ ವೇಳೆ ಅವರ ಮಾತು ಕೇಳಿರುವ ಪ್ರಯಾಣಿಕರಿಗೆ ಅನುಮಾನ ಬಂದಿದೆ. ಹೀಗಾಗಿ, ಚೈಲ್ಡ್ಲೈನ್ಗೆ ಮಾಹಿತಿ ನೀಡಿದ್ದಾರೆ. ಇದರ ಬೆನ್ನಲ್ಲೇ ರೈಲ್ವೆ ಪೊಲೀಸರು ಇವರನ್ನ ಬಂಧಿಸಿದ್ದಾರೆ.
ಇದೀಗ ಇಬ್ಬರನ್ನ ವಶಕ್ಕೆ ಪಡೆದುಕೊಂಡಿರುವ ಶಾಂತಿಪುರ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ಲಭ್ಯವಾಗಿರುವ ಮಾಹಿತಿ ಪ್ರಕಾರ ಬಾಲಕ 10ನೇ ತರಗತಿ ವ್ಯಾಸಂಗ ಮಾಡ್ತಿದ್ದು, ಯುವತಿ ಉತ್ತರಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದಾಳೆ ಎನ್ನಲಾಗಿದೆ.
ರೈಲಿನಲ್ಲಿ ಪ್ರಯಾಣ ಬೆಳೆಸುತ್ತಿದ್ದ ವೇಳೆ ಇಬ್ಬರು ಉತ್ತರಪ್ರದೇಶಕ್ಕೆ ಹೋಗುವುದಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿದಾಗ ಸ್ಥಳೀಯರಿಗೆ ಅನುಮಾನ ಬಂದು ಚೈಲ್ಡ್‌ಲೈನ್ ವಿಭಾಗಕ್ಕೆ ಮಾಹಿತಿ ನೀಡಿದ್ದಾರೆ.