ಕಟ್ಪಾಡಿ(ತಮಿಳುನಾಡು): ಚಲಿಸುತ್ತಿದ್ದ ರೈಲಿನಡಿ ಸಿಲುಕಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ಕಟ್ಪಾಡಿ ಎಂಬಲ್ಲಿ ನಡೆದಿದೆ.
ಇಂದು ಮಧ್ಯಾಹ್ನ ಕಟ್ಪಾಡಿ ರೈಲ್ವೆ ನಿಲ್ದಾಣದ ಸಮೀಪದಲ್ಲಿರುವ ಟ್ರ್ಯಾಕ್ ಮೇಲೆ ಇವರ ಮೃತದೇಹ ಪತ್ತೆಯಾಗಿದ್ದು, ಮೃತದೇಹ ಈಗಾಗಲೇ ಮರಣೋತ್ತರ ಪರೀಕ್ಷೆಗಾಗಿ ಅಡುಕ್ಕಂಪರೈ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಸ್ಥಳದಿಂದ ಮೊಬೈಲ್ ವಶಕ್ಕೆ ಪಡೆದುಕೊಳ್ಳಲಾಗಿದ್ದು, ತನಿಖೆ ನಡೆಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆತ್ಮಹತ್ಯೆಗೆ ಶರಣಾಗಿರುವ ದಂಪತಿ ವಯಸ್ಸು 25ರಿಂದ 30 ಆಗಿರಬಹುದು ಎಂದು ತಿಳಿದು ಬಂದಿದೆ.