ETV Bharat / bharat

ಜ್ಞಾನವಾಪಿ ಮಸೀದಿ ಕೇಸ್: ಆಕ್ಷೇಪಣೆ ಸಲ್ಲಿಸಲು ಸೂಚಿಸಿ ಮೇ 9ಕ್ಕೆ ವಿಚಾರಣೆ ಮುಂದೂಡಿಕೆ

ಜ್ಞಾನವಾಪಿ ಮಸೀದಿ ಮತ್ತು ಶೃಂಗಾರ್ ಗೌರಿ ಪ್ರಕರಣದ ಅರ್ಜಿಯನ್ನು ವಿಚಾರಣೆ ನಡೆಸಿ ಉತ್ತರಪ್ರದೇಶ ಹೈಕೋರ್ಟ್​ ಉಭಯ ಅರ್ಜಿದಾರರಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಸೂಚಿಸಿದೆ. ಅಲ್ಲದೇ, ಮುಂದಿನ ವಿಚಾರಣೆಯನ್ನು ಮೇ 9 ಕ್ಕೆ ಮುಂದೂಡಿದೆ.

court-order-submit
ಜ್ಞಾನವಾಪಿ ಮಸೀದಿ ಕೇಸ್
author img

By

Published : May 7, 2022, 10:37 PM IST

ವಾರಾಣಸಿ: ಇಲ್ಲಿನ ಜ್ಞಾನವಾಪಿ ಮಸೀದಿಯ ಸಮೀಕ್ಷೆಗೆ ಅನುಮತಿ ನೀಡಿದ ತ್ವರಿತ ನ್ಯಾಯಾಲಯ ಆದೇಶದ ವಿರುದ್ಧ ಫಿರ್ಯಾದಾರರು ಮತ್ತು ಅಂಜುಮನ್ ಇಂತೇಜಾಮಿಯಾ ಮಸೀದಿ ಸಲ್ಲಿಸಿರುವ ಅರ್ಜಿಯನ್ನು ಉತ್ತರಪ್ರದೇಶ ಹೈಕೋರ್ಟ್​ ವಿಚಾರಣೆ ನಡೆಸಿತು. ವಾದ- ಪ್ರತಿವಾದದ ಬಳಿಕ ಮಸೀದಿ ಮತ್ತು ಅರ್ಜಿದಾರ ವಿಎಸ್​ ರಸ್ತೋಗಿ ಅವರಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಸೂಚಿಸಿ, ಮೇ 9 ರಂದು ವಿಚಾರಣೆ ಮುಂದೂಡಲಾಗಿದೆ.

ಅಂಜುಮನ್‌ ಇಂತೇಜಾಮಿಯಾ ಮಸೀದಿ ಸಮಿತಿಯ ವಕೀಲ ಮೆರಾಜುದ್ದೀನ್‌ ಸಿದ್ದಿಕಿ ಮಾತನಾಡಿ, ಅರ್ಜಿ ಆಲಿಸಿದ ಕೋರ್ಟ್​ ಆಕ್ಷೇಪಣೆಗಳನ್ನು ಸಲ್ಲಿಸಲು ಸೂಚಿಸಿದೆ. ಈ ಕುರಿತು ಮುಂದಿನ ವಿಚಾರಣೆಯನ್ನು ಮೇ 9 ರಂದು ನಡೆಸಲು ಸಮನ್ಸ್ ನೀಡಲಾಗಿದೆ ಎಂದು ತಿಳಿಸಿದರು.

ಓವೈಸಿ ಆಕ್ರೋಶ: ಇನ್ನು ಈ ಬಗ್ಗೆ ಹೈದರಾಬಾದ್​ನಲ್ಲಿ ಮಾತನಾಡಿರುವ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ವಾರಣಾಸಿಯ ಜ್ಞಾನವಾಪಿ ಮಸೀದಿಯ ಸಮೀಕ್ಷೆಯ ವಿವಾದವನ್ನು ಹುಟ್ಟು ಹಾಕಿರುವ ಬಿಜೆಪಿ ಮತ್ತು ಆರ್‌ಎಸ್‌ಎಸ್ ಉಭಯ ಕೋಮಿನಲ್ಲಿ ದ್ವೇಷವನ್ನು ಮೂಡಿಸುತ್ತಿದೆ ಎಂದು ಟೀಕಿಸಿದ್ದಾರೆ.

ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆ-1991ರ ಪ್ರಕಾರ ಧಾರ್ಮಿಕ ಕೇಂದ್ರಗಳಿಗೆ ಯಾವುದೇ ತೊಂದರೆ ಉಂಟು ಮಾಡಬಾರದು ಎಂದು ಹೇಳಿದೆ. ಇದನ್ನು ಭಾರತ ಸರ್ಕಾರ ಕೂಡ ಅಂಗೀಕರಿಸಿದೆ. ಈ ಬಗ್ಗೆ ಸರ್ಕಾರ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕಡಬೇಕಿತ್ತು. ಆದರೆ, ಬಿಜೆಪಿ ಸರ್ಕಾರ ಇದರಲ್ಲಿ ಮೌನ ವಹಿಸಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಓದಿ: ಮಂಟಪದಲ್ಲಿ ತಾಯಿಯ ಪಕ್ಕ ತಂದೆಯ ಮೇಣದ ಪ್ರತಿಮೆ ಕೂರಿಸಿ ಮದುವೆಯಾದ ಮಗ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.